NEWSಬೆಂಗಳೂರುರಾಜಕೀಯ

ಚಳ್ಳಕೆರೆ: ಹ್ಯಾಟ್ರಿಕ್‌ ಬಾರಿಸಿದ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ

ವಿಜಯಪಥ ಸಮಗ್ರ ಸುದ್ದಿ

ಚಳ್ಳಕೆರೆ: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಮೇ 13) ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ರಘುಮೂರ್ತಿ ಸತತ ಮೂರನೇ ಗೆಲುವು ಸಾಧಿಸಿದ್ದಾರೆ.

ಚಳ್ಳಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ. ರಘುಮೂರ್ತಿ ತಮ್ಮ ಪ್ರತಿಸ್ಪರ್ಧಿ ಜೆಡಿಎಸ್‌ನ ರವೀಶ್ ಕುಮಾರ್ ಎದುರು 16,000 ಮತಗಳ ಅಂತರದಿಂದ ಭರ್ಜರಿ ಗೆಲುವು ಕಂಡಿದ್ದಾರೆ.

ಚಳ್ಳಕೆರೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಟಿ. ರಘುಮೂರ್ತಿ 67,363 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಜೆಡಿಎಸ್ ಅಭ್ಯರ್ಥಿ ರವೀಶ್ ಕುಮಾರ್ ಪಡೆದ ಮತಗಳು 51,236 ಮತ ಪಡೆದಿದ್ದಾರೆ.

ಪಕ್ಷೇತರ ಅಭ್ಯರ್ಥಿ ಕೆ.ಟಿ. ಕುಮಾರಸ್ವಾಮಿ 28928 ಮತಗಳನ್ನು ಗಳಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಅನಿಲ್‌ಕುಮಾರ್ 22,732 ಮತ ಪಡೆದು ಸೋಲು ಕಂಡಿದ್ದಾರೆ.

ಚಿಕ್ಕ ಬಳ್ಳಾಪುರ ಮತ್ತೆ ಕಾಂಗ್ರೆಸ್ ಭದ್ರಕೋಟೆ: ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು. ಅಂತಿಮವಾಗಿ 16,127 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಟಿ ರಘುಮೂರ್ತಿ ಗೆಲುವು ಸಾಧಿಸಿದ್ದಾರೆ. ಅಚ್ಚರಿಯೆಂದರೆ, ಪಕ್ಷೇತರ ಅಭ್ಯರ್ಥಿಗಿಂತ ಬಿಜೆಪಿ ಕಡಿಮೆ ಮತ ಪಡೆದು ಮುಖಭಂಗ ಅನುಭವಿಸಿದ್ದಾರೆ.

Leave a Reply

error: Content is protected !!
LATEST
KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು ಗಂಭೀರ ಸ್ವರೂಪ ಪಡೆಯುತ್ತಿದೆ ದೆಹಲಿ ರೈತರ ಹೋರಾಟ: ನ.26ರಿಂದ ಉಪವಾಸ ಸತ್ಯಾಗ್ರಹ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಾಗರದಂತೆ ಬನ್ನಿ: ಮೀರಾ ಶಿವಲಿಂಗಯ್ಯ ಕರೆ SC, ST ಅಲೆಮಾರಿ ಸಮುದಾಯಗಳ ಯೋಜನೆಗಳು ಸದ್ಬಳಕೆ ಆಗಬೇಕು: ಡಿಸಿ ಶಿವಶಂಕರ