NEWSನಮ್ಮರಾಜ್ಯ

ಚಾಮರಾಜನಗರದಲ್ಲಿ ಕೊರೊನಾ ವಾರಿಯರ್ಸ್‍ಗೆ ಪುಷ್ಪವೃಷ್ಠಿ

ಸಚಿವ ಸುರೇಶ್‌ ಕುಮಾರ್‌, ಶಾಸಕರಿಂದ ಕೃತಜ್ಞತಾ ಗೌರವ ಸಲ್ಲಿಕೆ     

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಚಾಮರಾಜನಗರ ಕೊರೊನಾ ಮುಕ್ತ ಜಿಲ್ಲೆಯಾಗಿ ಮುಂದುವರಿಯುತ್ತಿರಲು ಹಗಲಿರುಳು ಪರಿಶ್ರಮ ಪಡುತ್ತಿರುವ ವಾರಿಯರ್ಸ್ ಎಂದೇ ಹೇಳಲಾಗುವ ಪ್ರಮುಖ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗೆ ಪುಷ್ಪವೃಷ್ಠಿ ಗೈಯುವ ಮೂಲಕ ಗೌರವ, ಕೃತಜ್ಞತೆ ಸಮರ್ಪಿಸುವ ವಿಶಿಷ್ಟ ಕಾರ್ಯಕ್ರಮ ಚಾಮರಾಜನಗರದಲ್ಲಿ ನಡೆಯಿತು.

ಚಾಮರಾಜನಗರದ ಹೃದಯ ಭಾಗವೆಂದೇ ಕರೆಯಲ್ಪಡುವ ಜೈ ಭುವನೇಶ್ವರಿ (ಪಚ್ಚಪ್ಪ ವೃತ್ತ) ವೃತ್ತದಲ್ಲಿ ಜಿಲ್ಲಾಡಳಿತವು ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಕೋವಿಡ್-19 ಹರಡದಂತೆ ಶ್ರಮಿಸುತ್ತಿರುವ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಪೊಲೀಸ್, ವೈದ್ಯರು, ಸೇರಿದಂತೆ ಅಗತ್ಯ ಸೇವೆಯ ಸಿಬ್ಬಂದಿಗೆ ಪ್ರಾಥಮಿಕ, ಪ್ರೌಢಶಿಕ್ಷಣ, ಸಕಾಲ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್‌ ಜಿಲ್ಲೆಯ ಇತರೆ ಶಾಸಕರು, ಹಿರಿಯ ಅಧಿಕಾರಿಗಳೊಂದಿಗೆ ಪುಷ್ಪವೃಷ್ಠಿ ಮುಖೇನ ಧನ್ಯವಾದಗಳನ್ನು ಸಲ್ಲಿಸಿದರು.

ಸಾಮಾನ್ಯರ ಅಸಾಮಾನ್ಯ ಸೇವೆಗಾಗಿ ಜಿಲ್ಲಾಡಳಿತದ ಧನ್ಯವಾದಗಳು ಎಂಬ ಪರಿಕಲ್ಪನೆಯಡಿ ಕೊರೊನಾ ವಾರಿಯರ್ಸ್ ಕೋವಿಡ್ ವಿರುದ್ಧ ಜಿಲ್ಲೆಯಲ್ಲಿ ನಡೆಸುತ್ತಿರುವ ಹೋರಾಟಕ್ಕೆ ಮತ್ತಷ್ಟು ಉತ್ತೇಜನ, ಹುರಿದುಂಬಿಸುವ ಭಾಗವಾಗಿ ಇಂದು ಚಾಮರಾಜನಗರದಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ರಾಜ್ಯದಲ್ಲಿಯೇ ಮಾದರಿ ಎನಿಸಿಕೊಂಡಿದೆ.

ಇದೇ ವೇಳೆ ಮಾತನಾಡಿದ ಸಚಿವ ಎಸ್. ಸುರೇಶ್‍ಕುಮಾರ್ ವಿಶ್ವವನ್ನೇ ಸಂಕಷ್ಟಕ್ಕೆ ಸಿಲುಕಿಸಿರುವ ಕೊರೊನಾ ಇಂದು ಗಡಿ ಜಿಲ್ಲೆ ಚಾಮರಾಜನಗರವನ್ನು ಬಾಧಿಸಿಲ್ಲ. ಕೇರಳ, ತಮಿಳುನಾಡು ಗಡಿ ಭಾಗಗಳನ್ನು ಹೊಂದಿರುವ ಕರ್ನಾಟಕದ ದಕ್ಷಿಣಭಾಗದ ತುತ್ತತುದಿ ಜಿಲ್ಲೆ ಚಾಮರಾಜನಗರ ಕೊರೊನಾ ಮುಕ್ತವಾಗಿ ಮುಂದುವರಿದಿದೆ. ಇದು ಸಾಧ್ಯವಾಗಿರುವುದು ವೈದ್ಯರು, ಆರೋಗ್ಯ ಸಿಬ್ಬಂದಿ, ಆಶಾ. ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರ ಅವಿರತ ಹೋರಾಟದಿಂದ. ಈ ಎಲ್ಲರ ಅಮೂಲ್ಯ, ಅನುಪಮ ಸೇವೆಯಿಂದ ಜಿಲ್ಲೆ ಸುರಕ್ಷಿತವಾಗಿದೆ. ಹೀಗಾಗಿ ಇವರ ಅನನ್ಯ ಸೇವೆಗೆ ಜಿಲ್ಲಾಡಳಿತದಿಂದ ಪುಷ್ಪವೃಷ್ಠಿಗೈದು ಅಭಿನಂದನೆ ಸಲ್ಲಿಸಿದ್ದೇವೆ ಎಂದರು.

ಇದಕ್ಕೂ ಮೊದಲು ಚಾಮರಾಜನಗರದಲ್ಲಿ ಸಚಿವರು, ಶಾಸಕರು ಸೈಕಲ್ ಮೂಲಕ ಜೈ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿ ಗಮನ ಸೆಳೆದರು. ಕೋವಿಡ್ ಮಣಿಸಿದ ಜಿಲ್ಲಾ ಜನತೆಗೆ ಧನ್ಯವಾದಗಳು ಎಂಬ ಸಂದೇಶ ಹೊತ್ತ ಬೃಹತ್ ಬಲೂನನ್ನು ಸಚಿವರು ಹಾರಿಬಿಟ್ಟರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎನ್, ಮಹೇಶ್, ಸಿ.ಎಸ್. ನಿರಂಜನ್‍ಕುಮಾರ್, ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ ಆನಂದಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್. ಆನಂದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಸಿ. ರವಿ ಇತರರು ಇದ್ದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ