NEWSನಮ್ಮಜಿಲ್ಲೆ

ಚೆಕ್‍ಪೋಸ್ಟ್‍ನಲ್ಲಿ ಕರ್ತವ್ಯ ಲೋಪ ಎಸಗಿದ 6 ನೌಕರರ ಅಮಾನತು

ಚಾಮರಾಜನಗರದ ಜಿಲ್ಲಾಧಿಕಾರಿ ಎಂ.ಆರ್‌. ರವಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಾಪಿಸಲಾಗಿರುವ ಚೆಕ್‍ಪೋಸ್ಟ್‍ನಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರದೇ ಹಾಗೂ ಪೂರ್ವಾನುಮತಿ ಪಡೆಯದೇ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಚೆಕ್‍ಪೋಸ್ಟ್ ಮೂಲಕ ಹಾದುಹೋಗಲು ಅವಕಾಶ ಕಲ್ಪಿಸಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಆರು ಮಂದಿ ನೌಕರರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಚೆಕ್‍ಪೋಸ್ಟ್‍ನಲ್ಲಿ ಮಾರ್ಚ್ 27ರಂದು ಮೊದಲನೇ ಹಾಗೂ ಎರಡನೇ ಪಾಳಿಯಲ್ಲಿ ಹೆಚ್ಚು ವಾಹನಗಳು ಹಾಗೂ ಜನರ ಸಂಚಾರ ಸಂಚಾರಕ್ಕೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಎರಡೂ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಒಟ್ಟು ಆರು ನೌಕರರು ಅಮಾನತುಗೊಂಡಿದ್ದಾರೆ.

ಮೊದಲನೇ ಪಾಳಿಯಲ್ಲಿದ್ದ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಮಹದೇವಸ್ವಾಮಿ, ನಂಜದೇವನಪುರ ವೃತ್ತದ ಗ್ರಾಮ ಲೆಕ್ಕಿಗರಾದ ಸಂತೋಷ್‍ಕುಮಾರ್, ತಮ್ಮಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗರಾದ ಕೆ. ಶ್ರೀಧರ, ಎರಡನೇ ಪಾಳಿಯಲ್ಲಿದ್ದ ಮುಕ್ಕಡಹಳ್ಳಿ ಗ್ರಾಮ ಪಂಚಾಯಿತಿ ವಾಟರ್‍ಮ್ಯಾನ್ ನಂಜುಂಡಸ್ವಾಮಿ, ಕುಲಗಾಣ ವೃತ್ತದ ಲೆಕ್ಕಿಗರಾದ ಡಿ.ಜೆ. ಮಹೇಶ್, ಮುಕ್ಕಡಹಳ್ಳಿ ವೃತ್ತದ ಗ್ರಾಮ ಲೆಕ್ಕಿಗರಾದ ನಂದೀಶ್ ಅಮಾನತುಗೊಂಡ ನೌಕರರಾಗಿದ್ದಾರೆ.

ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಸರ್ಕಾರದ ಮಾರ್ಗಸೂಚಿಯನ್ವಯ ಜೀವನಾವಶ್ಯಕ ವಸ್ತುಗಳನ್ನು ಮಾತ್ರ ಚೆಕ್‍ಪೋಸ್ಟ್‍ಗಳ ಮೂಲಕ ಸಾಗಿಸಲು ಅವಕಾಶವಿದೆ. ಆದರೆ ಸೂಚನೆ ಉಲ್ಲಂಘಿಸಿ ಜಿಲ್ಲಾಧಿಕಾರಿಗಳ ಗಮನಕ್ಕೂ ತರದೇ, ಪೂರ್ವಾನುಮತಿ ಪಡೆಯದೇ ಮೊದಲೆರಡು ಪಾಳಿಯಲ್ಲಿ ನಿಯೋಜಿತರಾಗಿದ್ದ ನೌಕರರು ಚೆಕ್‍ಪೋಸ್ಟ್ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾದುಹೋಗಲು ಅವಕಾಶ ಕಲ್ಪಿಸಿದ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಂದು ಪರಿಗಣಿಸಿ ನಿಯೋಜಿತರಾಗಿದ್ದ ನೌಕರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು