NEWSನಮ್ಮಜಿಲ್ಲೆ

ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರಾದ ಬಿಎನ್‍ಸಿಸಿ  ಸಿಬ್ಬಂದಿ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಹುಬ್ಬಳ್ಳಿಯ ಬಮ್ಮಾಪೂರದ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರುಹಾಜರಾಗಿರುವ ಹುಬ್ಬಳ್ಳಿ ವಿದ್ಯಾನಗರದ ಬಿಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕಚೇರಿಯ ಸಿಬ್ಬಂದಿ ರವೀಂದ್ರ ಭೂಜಪ್ಪ ಆಸಂಗಿ ಹಾಗೂ ಮಹೇಶ್ ದುಂದೂರ ಅವರನ್ನು ಇಂದು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೊವಿಡ್-19 ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಂಬಂಧ ಜಿಲ್ಲಾಡಳಿತವು ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸಂಚಾರ ತಪಾಸಣೆಗೆ ಕ್ರಮ ಕೈಗೊಂಡಿದೆ.

ವಿಶ್ವವ್ಯಾಪಿ ಹರಡಿರುವ ಕೊವಿಡ್-19 ಮಹಾಸಾಂಕ್ರಾಮಿಕ ರೋಗಕ್ಕೆ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ.

ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅದರಂತೆ ಸ್ಥಾಪಿಸಿರುವ ಚೆಕ್‍ಪೋಸ್ಟ್‌ಗಳಿಗೆ ಈ ನೌಕರರು ಹಾಜರಾಗದೇ ನಿಷ್ಕಾಳಜಿ ತೋರಿ ಕರ್ತವ್ಯಲೋಪ ಎಸಗಿದ್ದಾರೆ.

ಈ ಸಿಬ್ಬಂದಿ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಕೊವಿಡ್-19, ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ನೌಕರರು ಅಮಾನತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ನಿರ್ದೇಶಿಸಿ ಶಿಸ್ತುಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ