NEWSನಮ್ಮಜಿಲ್ಲೆ

ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರಾದ ಬಿಎನ್‍ಸಿಸಿ  ಸಿಬ್ಬಂದಿ ಅಮಾನತು

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಹುಬ್ಬಳ್ಳಿಯ ಬಮ್ಮಾಪೂರದ ಚೆಕ್‍ಪೋಸ್ಟ್ ಕರ್ತವ್ಯಕ್ಕೆ ಗೈರುಹಾಜರಾಗಿರುವ ಹುಬ್ಬಳ್ಳಿ ವಿದ್ಯಾನಗರದ ಬಿಎನ್‍ಸಿಸಿ ಕಮಾಂಡಿಂಗ್ ಆಫೀಸರ್ ಕಚೇರಿಯ ಸಿಬ್ಬಂದಿ ರವೀಂದ್ರ ಭೂಜಪ್ಪ ಆಸಂಗಿ ಹಾಗೂ ಮಹೇಶ್ ದುಂದೂರ ಅವರನ್ನು ಇಂದು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ದೀಪಾ ಚೋಳನ್ ಆದೇಶ ಹೊರಡಿಸಿದ್ದಾರೆ.

ಕೊವಿಡ್-19 ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ಸಂಬಂಧ ಜಿಲ್ಲಾಡಳಿತವು ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿ ಸಾರ್ವಜನಿಕರ ಸಂಚಾರ ತಪಾಸಣೆಗೆ ಕ್ರಮ ಕೈಗೊಂಡಿದೆ.

ವಿಶ್ವವ್ಯಾಪಿ ಹರಡಿರುವ ಕೊವಿಡ್-19 ಮಹಾಸಾಂಕ್ರಾಮಿಕ ರೋಗಕ್ಕೆ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದು, ಈ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರವು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿದೆ.

ಸಾಂಕ್ರಾಮಿಕವಾಗಿ ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತವು ಸರ್ಕಾರದ ನಿರ್ದೇಶನದಂತೆ ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅದರಂತೆ ಸ್ಥಾಪಿಸಿರುವ ಚೆಕ್‍ಪೋಸ್ಟ್‌ಗಳಿಗೆ ಈ ನೌಕರರು ಹಾಜರಾಗದೇ ನಿಷ್ಕಾಳಜಿ ತೋರಿ ಕರ್ತವ್ಯಲೋಪ ಎಸಗಿದ್ದಾರೆ.

ಈ ಸಿಬ್ಬಂದಿ ಮೇಲೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆ ಕೊವಿಡ್-19, ವಿಪತ್ತು ನಿರ್ವಹಣಾ ಕಾಯ್ದೆ 2005 ಮತ್ತು ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನ್ವಯ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಈ ನೌಕರರು ಅಮಾನತು ಅವಧಿಯಲ್ಲಿ ತಮ್ಮ ಕಾರ್ಯಾಲಯದ ಮುಖ್ಯಸ್ಥರ ಪರವಾನಿಗೆ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಎಂದು ನಿರ್ದೇಶಿಸಿ ಶಿಸ್ತುಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!
LATEST
ಅತಿಯಾಗಿ ಲೈಂಗಿಕ ಕ್ರಿಯೆಗೆ ಪೀಡಿಸಿದ್ದರಿಂದ ಒಂಟಿ ಮಹಿಳೆಯ ಕೊಲೆ: ಹತ್ಯೆ ರಹಸ್ಯ ಬೇಧಿಸಿದ ಪೊಲೀಸರು ಆಗಸದಲ್ಲೇ ಡಿಕ್ಕಿ ಹೊಡೆದುಕೊಂಡ ನೌಕಾಪಡೆಯ 2 ಹೆಲಿಕಾಪ್ಟರ್‌ಗಳು ನೋಡ ನೋಡುತ್ತಿದ್ದಂತೆ ಪತನ: 10 ಮಂದಿ ಮೃತ KSRTC: ಸಾರಿಗೆ ನಿಗಮಗಳ ಖಾಸಗೀಕರಣಕ್ಕೆ ಅವಕಾಶ ನೀಡುತ್ತಿದೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವಾಲಯ KSRTC: ಏಪ್ರಿಲ್‌-ಜೂನ್‌ ಪೀಕ್‌ ಸೀಸನ್‌ ಎಂದು ಚಾಲನಾ ಸಿಬ್ಬಂದಿಗಳಿಗೆ ರಜೆ ಕೊಡದೆ ಹಿಂಸಿಸುತ್ತಿರುವ ಅಧಿಕಾರಿಗಳು..! ಬಿಜೆಪಿ ರಾಜಕೀಯ ಲಾಭಕ್ಕೆ ನೇಹಾ ಪ್ರಕರಣ ಬಳಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ: ಜಗದೀಶ್ ವಿ. ಸದಂ IVRS, ಬಲ್ಕ್ SMS ಮೂಲಕ ಮತದಾರರಿಗೆ ಮೊಬೈಲ್‌ ಸಂದೇಶ: ತುಷಾರ್ ಗಿರಿನಾಥ್ KSRTC: ವೇತನ ಸಮಸ್ಯೆ ಪರಿಹರಿಸದೆ ಅಸಡ್ಡೆ ತೋರಲು ಇವರು ಕಾರಣಗಳು....!? ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳು ಜನರ ವಂಚಿಸುವ ಮಂತ್ರ ದಂಡಗಳು : ಕುರುಬೂರ್‌ ಶಾಂತಕುಮಾರ್‌ 'ನಮ್ಮ ನಡೆ ಮತಗಟ್ಟೆಯ ಕಡೆ' ಜಾಗೃತಿ ಜಾಥಾಗೆ ಮನೋಜ್ ಕುಮಾರ್ ಮೀನಾ, ತುಷಾರ್ ಗಿರಿನಾಥ್ ಚಾಲನೆ ಕೊಡಗು: ಹುಲಿದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ