NEWSಬೆಂಗಳೂರುರಾಜಕೀಯ

ಜೆಡಿಎಸ್‌ ಸೇರಿದ ಆಯನೂರು ಮಂಜುನಾಥ್

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಬಿಜೆಪಿಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಬಂಡಾಯ ಬಿಸಿ ಹೆಚ್ಚಾಗಿದ್ದು ಟಿಕೆಟ್ ಸಿಗದಿದ್ದಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಈಗಾಗಲೇ ಕಾಂಗ್ರೆಸ್ ಸೇರಿದ್ದಾರೆ. ಇದೀಗ ಮತ್ತೊಂದು ಬಿಜೆಪಿ ವಿಕೆಟ್ ಪತನವಾಗಿದ್ದು ಎಂಎಲ್‌ಸಿ ಆಯನೂರು ಮಂಜುನಾಥ್ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದಾರೆ.

ಚಿತ್ರದುರ್ಗ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಜೆಡಿಎಸ್ ಬಾವುಟ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಇದೇ ವೇಳೆ ಬಿ ಫಾರಂ ಪಡೆಯುವ ಮೂಲಕ ಶಿವಮೊಗ್ಗ ಕ್ಷೇತ್ರದಿಂದಲೇ ಕಣಕ್ಕಿಯಲು ಆಯನೂರು ಮಂಜುನಾಥ್ ಸಜ್ಜಾಗಿದ್ದಾರೆ. ಇಂದು (ಏ.20) ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ನಾಮಪತ್ರ ಸಲ್ಲಿಸಲಿದ್ದಾರೆ.

ಶಿವಮೊಗ್ಗದಲ್ಲಿ ನಿನ್ನೆ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಆಯನೂರು ಮಂಜುನಾಥ್, ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ಮಧ್ಯಾಹ್ನ ಹುಬ್ಬಳ್ಳಿಗೆ ತೆರಳಿ ಸಭಾಪತಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡುವೆ. ಅಲ್ಲದೇ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಹೇಳಿದ್ದರು.

Leave a Reply

error: Content is protected !!
LATEST
ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, ₹50 ಲಕ್ಷ ದಂಡ ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮ ಒನ್ ಕೇಂದ್ರಗಳಲ್ಲೂ ಲಭ್ಯ 5ವರ್ಷದೊಳಗಿನ ಮಕ್ಕಳಿಗೆ PCV ಲಸಿಕೆ ಹಾಕಿಸಿ: ಸುರಳ್ಕರ್ ವಿಕಾಸ್ ಕಿಶೋರ್ KSRTC: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತುಮಕೂರು ಘಟಕ 1-2ರ ಗುತ್ತಿಗೆ ಚಾಲಕರಿಂದ ದಿಢೀರ್‌ ಪ್ರತಿಭಟನೆ ಮೆಜೆಸ್ಟಿಕ್‌: KSRTC ಟಿಸಿಗಳಿಗೆ ಕಂಡಕ್ಟರ್‌ಗಳು ₹10 ಕೊಟ್ಟರಷ್ಟೆ ಲಾಗ್‌ಶೀಟ್‌ ಮೇಲೆ ಸಹಿ ಇಲ್ಲದಿದ್ದರೆ ಕ್ಲಾಸ್‌ !!? ಕನಸನ್ನು ನನಸಾಗಿಸಲು ಪ್ರಯತ್ನ ಮುಖ್ಯ: ಮಕ್ಕಳಿಗೆ ಡಿಸಿಎಂ ಶಿವಕುಮಾರ್ ಕಿವಿಮಾತು KSRTC: ಸಮಸ್ಯೆ  ಹೇಳಿಕೊಂಡು ಬರುವ ನೌಕರರ ಭೇಟಿ ಮಾಡದೆ ಸೂಟ್‌ಕೇಸ್‌ ತಂದವರೊಂದಿಗೆ ಹರಟೆ ಹೊಡೆಯುವ ಕೆಲ ಸಾಹೇಬರೆನಿಸಿಕೊ... ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು?