NEWSನಮ್ಮರಾಜ್ಯ

ಜನತಾ ದಾಸೋಹ ಆರಂಭಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಹಸಿದವರಿಗೆ ಅನ್ನ ನೀಡಲು ಮುಂದಾದ ಜೆಡಿಎಸ್‌ ಮುಖಂಡರು

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ವಿಶ್ವಮಾರಿ ಕೊರೊನಾದಿಂದ ದೇಶದಲ್ಲಿ ಉಂಟಾಗಿರುವ ಲಾಕ್‌ಡೌನ್‌ನಿಂದ ಸಮಸ್ಯೆಗೆ ಸಿಲುಕಿರುವವರಿಗೆ ತುತ್ತಿನ ಚೀಲ ತುಂಬಿಸಲು ಮಾಜಿ ಮುಖ್ಯ ಮಂತ್ರಿ   ಎಚ್‌.ಡಿ. ಕುಮಾರಸ್ವಾಮಿ ಜನತಾ ದಾಸೋಹ ಕಾರ್ಯ ಆರಂಭಿಸಿದ್ದಾರೆ.

ಬಡವರು, ವಲಸೆ ಕಾರ್ಮಿಕರು, ನಿರ್ಗತಿಕರು, ದುರ್ಬಲರಿಗೆ ನಿತ್ಯ ಆಹಾರ ನೀಡಲು  ಸಿದ್ಧವಾಗಿರುವ ಎಚ್‌ಡಿಕೆ ಜನತಾ ದಾಸೋಹದ ಮೂಲಕ ಹಸಿವು ನೀಗಿಸುತ್ತಿದ್ದಾರೆ. ಅಲ್ಲದೆ ಇದೇ ರೀತಿ ನಿಮ್ಮ ನಿಮ್ಮ ಕ್ಷೇತ್ರ ವ್ಯಾಪ್ತಿಗಳಲ್ಲಿ ಮಾಡಬೇಕು ಎಂದು ತಮ್ಮ ಪಕ್ಷದ ಶಾಸಕರಿಗೆ ಮತ್ತು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪ್ರತಿ ಅವಧಿಯಲ್ಲೂ ತಲಾ ಒಂದು ಸಾವಿರ ಮಂದಿಗೆ ಭೋಜನೆ ವ್ಯವಸ್ಥೆ ಮಾಡುವ ಗುರಿಯನ್ನು ಹೊಂದಲಾಗಿದ್ದು ಆರಂಭದಲ್ಲಿ ರಾಮನಗರ, ಚನ್ನಪಟ್ಟಣದಲ್ಲಿ ದಾಸೋಹವನ್ನು ನಡೆಸಲಾಗುತ್ತಿದೆ.

ಇನ್ನು ರಾಜ್ಯದಲ್ಲಿ ಕೊರೊನಾ ಹಾವಳಿಯಿಂದ ಉಂಟಾಗುತ್ತಿರುವ ಸಮಸ್ಯೆ ಸಮಗ್ರ ಮಾಹಿತಿ  ಪಡೆಯಲು ಕುಮಾರಸ್ವಾಮಿ ಅವರು ಮಂಡ್ಯ, ರಾಮನಗರ, ಚನ್ನಪಟ್ಟಣದ ಪಕ್ಷದ ಮುಖಂಡರ ಜತೆ ಸಮಾಲೋಚನಾಸಭೆಯನ್ನು ಕಳೆದ ಎರಡು ದಿನದ ಹಿಂದೆ ನಡೆಸಿದ್ದಾರೆ.

ಕೊರೊನಾ ವೈರಸ್‌ ವಿರುದ್ಧ ಸಮರದಲ್ಲಿ ಅನ್ನದಾತರ  ಸಂಕಷ್ಟವನ್ನು ಕಡೆಗಣಿಸದಂತೆ ರಾಜ್ಯ ಸರಕಾರವನ್ನು ಎಚ್ಚರಿಸಿರುವ ಕುಮಾರಸ್ವಾಮಿ ರೈತರಿಗೆ ಎಲ್ಲಾರೀತಿಯ ವ್ಯವಸ್ಥೆ ಮಾಡಿಕೊಡಬೇಕು. ಪ್ರಸ್ತುತ ಕಟಾವಿಗೆ ಬಂದಿರುವ ಫಸಲನ್ನು ಸೂಕ್ತ ಬೆಲೆಗೆ ಮಾರಾಟ ಮಾಡಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ರಾಮನಗರ ಜಿಲ್ಲೆಯ ನಿವಾಸಿಗಳಿಗೆ ನಿತ್ಯದ ಆಹಾರ ಸಾಮಗ್ರಿಗಳನ್ನು ಸರಬರಾಜು ಮಾಡಲು  ಸಹ ಕುಮಾರಸ್ವಾಮಿ ನಿರ್ಧರಿಸಿದ್ದು, ಅದಕ್ಕಾಗಿ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ