NEWSಸಂಸ್ಕೃತಿ

ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕ : ಮಾಜಿ ಶಾಸಕಿ ಪರಿಮಳ ನಾಗಪ್ಪ

ವಿಜಯಪಥ ಸಮಗ್ರ ಸುದ್ದಿ

ಹನೂರು : ಜನಪದ ಸಾಹಿತ್ಯದಲ್ಲಿ ಜೀವನದ ಮೌಲ್ಯಗಳು ಅಡಕವಾಗಿವೆ. ಅದು ಮನುಷ್ಯನಿಗೆ ಬದುಕುವ ದಾರಿಯನ್ನು ತೋರಿಸುತ್ತದೆ ಮಾಜಿ ಶಾಸಕಿ ಪರಿಮಳನಾಗಪ್ಪ ತಿಳಿಸಿದ್ದಾರೆ.

ಪಟ್ಟಣಸ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನಡೆದ ತಾಲೂಕು ಕನ್ನಡ ಜನಪದ ಪರಿಷತ್ ಘಟಕ ಉದ್ಘಾಟನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜನಪದ ಸಾಹಿತ್ಯವನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಮೌಲ್ಯಗಳನ್ನು ತಿಳಿಸಿಕೊಡುವ ಕಾರ್ಯವನ್ನು ಜನಪದ ಪರಿಷತ್ ಮಾಡಬೇಕು. ಈ ಬಳಗವು ಗ್ರಾಮೀಣ ಪ್ರದೇಶದ ಮನೆ, ಮನೆಗೆ ಹೋಗಿ ಪ್ರತಿಭೆಗಳನ್ನು ಗುರುತಿಸಿ, ಹೊರತರುವ ಪ್ರಯತ್ನವನ್ನು ಮಾಡಬೇಕು ಎಂದರು.

ತಾಲೂಕು ಜಾನಪದ ಪರಿಷತ್‌ನ ಅಧ್ಯಕ್ಷರಾದ ಸಿ.ಕೆ.ಕೃಷ್ಣಕುಮಾರ್ ಮಾತನಾಡಿ, ಜನಪದ ಕಲೆ ರಾಜ್ಯಾದ್ಯಂತ ಪ್ರಬುದ್ದವಾಗಿ ಬೆಳೆಯುತ್ತಿದೆ, ಅದರಲ್ಲೂ ನಮ್ಮ ಜಿಲ್ಲೆಯು ಜನಪದ ತವರೂರು ಈ ಭಾಗದಲ್ಲಿ ನೆಲೆಸಿರುವ ಸಿದ್ದಪ್ಪಾಜಿ, ಮಂಟೇಸ್ವಾಮಿ, ಮಹದೇಶ್ವರ ಮೂಲ ಜಾನಪದಗಾರರು, ಆಗಾಗಿ ನಮ್ಮ ತಾಲೂಕಿನಲ್ಲಿ ಜಾನಪದ ಕಲೆ ಬೆಳೆಸುವ ಮೂಲಕ ರಾಜ್ಯದ ಎಲ್ಲೇಡೆ ಜಾನಪದ ಪರಿಷತ್ತು ಪಸರಿಸುವಂತಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಜನಪದ ಪರಿಷತ್ ಘಟಕದ ಅಧ್ಯಕ್ಷರಾಗಿ ಸಿ.ಕೆ ಕೃಷ್ಣಕುಮಾರ್, ಕಾರ್ಯದರ್ಶಿಯಾಗಿ ಮಹೇಶ್ ಎಂ, ಸಂಘಟನಾ ಕಾರ್ಯದರ್ಶಿಯಾಗಿ ಕೃಷ್ಣ, ಜಂಟಿ ಕಾರ್ಯದರ್ಶಿಯಾಗಿ ಒಡೆಯರಪಾಳ್ಯದ ಸೋಮಶೇಖರ್, ಖಜಾಂಜಿಯಾಗಿ ಶ್ರೀನಿವಾಸ್, ಸಂಚಾಲಕರಾಗಿ ಬಸವರಾಜ್, ಬಂಗಾರಪ್ಪ, ಸದಸ್ಯರುಗಳಾಗಿ ಜಯಂತ್ ಕುಮಾರ್, ಭರತ್‌ಕುಮಾರ್, ಅನಿಲ್‌ಕುಮಾರ್, ಶಿವು ಪದಗ್ರಹಣ ಮಾಡಿದರು.

ಇದೇ ಸಂದರ್ಭದಲ್ಲಿ ಬಂಡಳ್ಳಿ ಮಠದ ಫಲಹಾರಪ್ರಭುದೇವಸ್ವಾಮಿಜಿ,ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗುರುಸ್ವಾಮಿ ಕನ್ನಡ ಜನಪದ ಪರಿಷತ್ ಘಟಕ ರಾಜ್ಯಾಧ್ಯಕ್ಷ ಜಾನಪದ ಬಾಲಾಜಿ, ಜಿಲ್ಲಾಧ್ಯಕ್ಷ ಸುರೇಶ್ ನಾಗ್, ಮುಖಂಡರಾದ ಪ್ರೀತನ್ ನಾಗಪ್ಪ, ಮುರುಡೇಶ್ವರ ಸ್ವಾಮಿ, ರಾಚಪ್ಪ, ಕಲಾವಿದ ರಾಮದಾಸ್, ಸಾಹಿತಿ ಗುರುಸ್ವಾಮಿ ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು