NEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಜನಪ್ರತಿನಿಧಿಗಳ ಕ್ರಿಮಿನಲ್‌ ಪ್ರಕರಣಗಳನ್ನು ಹೈಕೋರ್ಟ್‌ ಅನುಮತಿ ಇಲ್ಲದೇ ಹಿಂಪಡೆಯ ಕೂಡದು: ಸುಪ್ರೀಂ ಕೋರ್ಟ್‌ ಆದೇಶ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸಂಸದರು ಮತ್ತು ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಆಯಾ ರಾಜ್ಯದ ಹೈಕೋರ್ಟ್ ಅನುಮತಿ ಇಲ್ಲದೆ ಹಿಂಪಡೆಯುವಂತಿಲ್ಲ. ಅಲ್ಲದೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಚಾರಣೆ ಮಾಡುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿಗಳನ್ನು ಆ ಪ್ರಕರಣದ ವಿಚಾರಣೆ ಮುಗಿಯುವವರೆಗೂ ಬೇರೆಡೆ ವರ್ಗಾಯಿಸುವಂತಿಲ್ಲ ಎಂಬ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್​ ಹೊರಡಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ, ನ್ಯಾ.ಸೂರ್ಯಕಾಂತ್ ಹಾಗೂ ನ್ಯಾ.ವಿನೀತ್ ಸರನ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ ಈ ತೀರ್ಪು ನೀಡಿದೆ.

ತಮ್ಮ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳು ಪ್ರಭಾವ ಬೀರುವ ಸಾಧ್ಯತೆ ಹೆಚ್ಚಿದೆ. ಇಂತಹ ಸಂದರ್ಭಗಳಲ್ಲಿ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ಮೂಲಕ ತೀರ್ಪಿನ ಮೇಲೆ ಪ್ರಭಾವ ಬೀರಿರುವ ಹಲವಾರು ನಿದರ್ಶನಗಳಿವೆ. ಇದನ್ನು ತಪ್ಪಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಬಾಕಿ ಉಳಿದಿರುವ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳ ಮಾಹಿತಿಯನ್ನು ನೀಡುವಂತೆ ಹೈಕೋರ್ಟ್​ಗಳ ರಿಜಿಸ್ಟ್ರಾರ್​ಗಳಿಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

ಕೇರಳ ಸರ್ಕಾರ ವರ್ಸಸ್ ಕೆ.ಅಜಿತ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಬಳಿಕ 2020ರ ಸೆಪ್ಟೆಂಬರ್ 16ರಿಂದ ಸಂಸದರು ಹಾಗೂ ಶಾಸಕರ ವಿರುದ್ಧದ ಕೇಸ್​ಗಳನ್ನು ಹಿಂಪಡೆಯುವ ಬಗ್ಗೆ ಪರಿಶೀಲನೆ ನಡೆಸುವಂತೆ ಹೈಕೋರ್ಟ್​ಗಳು ಮನವಿ ಮಾಡಿದ್ದವು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು