Please assign a menu to the primary menu location under menu

NEWSನಮ್ಮಜಿಲ್ಲೆ

ಜನಸಾಮಾನ್ಯರಿಗೆ ಪಡಿತರ ತಲುಪಿಸುವುದೇ ಕೆಲಸ

ರಾಜ್ಯದಲ್ಲಿ ಶೇ.94 ಪಡಿತರ ವಿತರಣೆ l ಸಚಿವ ಕೆ.ಗೋಪಾಲಯ್ಯ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಅನುಸರಿಸಲಾದ ಲಾಕ್‍ಡೌನ್ ಕ್ರಮದಿಂದಾಗಿ ಉದ್ಯೋಗವಿಲ್ಲದೆ ಸಮಸ್ಯೆಗೊಳಗಾದ ರಾಜ್ಯದಲ್ಲಿನ ಶೇ.94 ರಷ್ಟು ಪಡಿತರ ಚೀಟಿದಾರಿಗೆ ಪಡಿತರವನ್ನು ವಿತರಿಸಲಾಗಿದೆ ಎಂದು ಆಹಾರ, ನಾಗರಿಕರ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ದೊರಕುವ ಪಡಿತರವನ್ನು ಆಯಾ ಜಿಲ್ಲಾಡಳಿತದ ಮುಖೇನ ಎಲ್ಲಾ ಜನಸಾಮಾನ್ಯರಿಗೂ ಪಡಿತರ ತಲುಪಿಸುವ ಕೆಲಸ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೈಸೂರು ಜಿಲ್ಲೆಯಲ್ಲಿರುವ 1,011 ನ್ಯಾಯಬೆಲೆ ಅಂಗಡಿಗಳಿಗೆ ಅಧಿಕಾರಿಗಳು ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸಿ ಬಡ ಕುಟುಂಬಗಳಿಗೆ ಪಡಿತರ ಸಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಅಂಗಡಿಗಳಲ್ಲಿ ಇತರೆ ವಸ್ತುಗಳನ್ನು ಮಾರಾಟ ಹಾಗೂ ಅವ್ಯವಹಾರ ಕಂಡುಬಂದರೆ ತಕ್ಷಣ ಸೂಕ್ತ ಕಾನೂನು ಕ್ರಮ ಜರಗಿಸಬೇಕು ಎಂದು ಸೂಚಿಸಿದರು.

ಬಡವರಿಗೆ ವಿತರಿಸುವ ಪಡಿತರದ ದಾನ್ಯಗಳಲ್ಲಿ ಯಾವುದೇ ಲೋಪ ಉಂಟಾಗದಂತೆ ಕಾಯಬೇಕು. ಕಳಪೆ ಗುಣಮಟ್ಟ ಕಂಡುಬರುವ ಧಾನ್ಯಗಳನ್ನು ನಿಷೇಧಿಸಿ, ಉತ್ತಮ ಗುಣಮಟ್ಟದ ಆಹಾರ ಧಾನ್ಯ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ 98 ಸಾವಿರ ಕುಟುಂಬಗಳಿಗೆ ಉಚಿತ ಗ್ಯಾಸ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಯಾ ಜಿಲ್ಲಾ ಮಟ್ಟದ ಅಧಿಕಾರಿಗಳ ಮೂಲಕ ಫಲಾನುಭವಿಗಳಿಗೆ ತಲುಪುವಂತೆ ನೋಡಿಕೊಳ್ಳಲಾಗುವುದು ಎಂದು ಹೇಳಿದರು.

ಉತ್ತಮ ಗುಣಮಟ್ಟದಿಂದ ಕೂಡಿದ ರಾಗಿ ಖರೀದಿಸುವಂತೆ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಖರೀದಿಯಲ್ಲಿ ಯಾವುದೇ ಲೋಪವಾಗದಂತೆ ಪಾರದರ್ಶಕತೆ ಕಾಯ್ದುಕೊಂಡು ಶುದ್ಧವಾದ ರಾಗಿ ಖರೀದಿಸಿ ಜನರಿಗೆ ವಿತರಿಸಲಾಗುವುದು ಎಂದರು.

ರಾಜ್ಯದ ಪ್ರತಿ ಗ್ರಾಮಗಳಲ್ಲಿ ಮೂರು ಕಿ.ಮೀ ಗಿಂತ ಹೆಚ್ಚು ನ್ಯಾಯಬೆಲೆ ಅಂಗಡಿಗಳು ದೂರವಿದ್ದರೆ, ಆಯಾ ಗ್ರಾಮಗಳ ಶಾಲೆಗಳಲ್ಲಿ ಪಡಿತರ ವಿತರಿಸುವಂತೆ ಅಧಿಕಾರಿಗಳು ಕೂಡಲೇ ಮುಂದಾಗಬೇಕು ಎಂದು ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕರಾದ ಎಸ್.ಎ.ರಾಮದಾಸ್ ಎಲ್.ನಾಗೇಂದ್ರ, ಬಿ.ಹರ್ಷವರ್ಧನ್, ಎಂ.ಅಶ್ವಿನ್‍ಕುಮಾರ್, ಸಿ.ಅನಿಲ್ ಚಿಕ್ಕಮಾದು, ಕೆ.ಮಹದೇವು, ಎಚ್.ಪಿ.ವೆಂಕಟೇಶ್, ವಿಧಾನಪರಿಷತ್ ಸದಸ್ಯರಾದ ಸಂದೇಶ್ ನಾಗರಾಜು, ಧರ್ಮಸೇನ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ. ಪರಿಮಳ ಶ್ಯಾಂ, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ಅಭಿರಾಮ್.ಜಿ. ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ, ಮಹಾ ನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಇತರರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಹೆಂಡತಿ, ಮಾವನ ಕಾಟ: ರೈಲಿಗೆ ತಲೆಕೊಟ್ಟು ಹೆಡ್‌ಕಾನ್‌ಸ್ಟೇಬಲ್ ಆತ್ಮಹತ್ಯೆ 9 ಸಾವಿರ ರೂ. ಲಂಚ ಪ್ರಕರಣ: ಪಿಡಿಒಗೆ 3 ವರ್ಷ ಜೈಲು ಶಿಕ್ಷೆ, 50 ಸಾವಿರ ರೂ.ದಂಡ KSRTC ತುಮಕೂರು: ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಚಾಲಕನಿಗೆ ಧೈರ್ಯ ತುಂಬಿದ ಡಿಸಿ, ಅಧಿಕಾರಿಗಳು KSRTC: ಡಿ.31ರ ಮುಷ್ಕರ ಬೆಂಬಲಿಸುವಂತೆ ಕೂಟಕ್ಕೆ ಜಂಟಿ ಕ್ರಿಯಾ ಸಮಿತಿ ಮನವಿ ಸರ್ಕಾರದ ನಡೆಯೇ  BMTC ಆರ್ಥಿಕವಾಗಿ ಕುಸಿಯಲು ಕಾರಣ: ವರದಿ ಕೊಟ್ಟ CAG KSRTC ಕುಣಿಗಲ್‌: ಹಲ್ಲೆಕೋರರ ವಿರುದ್ಧ ಕ್ರಮ ಜರುಗಿಸದಿರುವುದಕ್ಕೆ ಮನನೊಂದ ಚಾಲಕ ಆತ್ಮಹತ್ಯೆಗೆ ಯತ್ನ KSRTC: ಈ ಅಧಿವೇಶನದಲ್ಲಾದರೂ ಸಿಎಂ ಸರಿ ಸಮಾನ ವೇತನ ಬಗ್ಗೆ ದಿಟ್ಟ ಹೆಜ್ಜೆ ಇಡಲಿ BMTC: ಆಧಾರ್‌ ಕಾರ್ಡ್‌ ಯಾವ ಭಾಷೆಯಲ್ಲೇ ಇರಲಿ ಕರ್ನಾಟಕದ ವಿಳಾಸವಿದ್ದರೆ ಉಚಿತ ಪ್ರಯಾಣ ಹಾವೇರಿ: ಸರ್ಕಾರಿ ಬಸ್ ಹತ್ತಲು ಹೋದ ವೃದ್ಧೆ ಕಾಲುಗಳ ಮೇಲೆ ಹಿಂಬದಿ ಚಕ್ರ ಹರಿದು ಕಾಲುಗಳು ಕಟ್‌ KSRTC ಮಡಿಕೇರಿ: ಸಹೋದ್ಯೋಗಿ ಕಂಡಕ್ಟರ್‌ ಕೊಲ್ಲುವ ಬೆದರಿಕೆ ಹಾಕಿ ಗಾಳಿಯಲ್ಲಿ ಗುಂಡ್ಹಾರಿಸಿದ ಡ್ರೈವರ್‌ ಬಂಧನ