NEWSಸಿನಿಪಥ

ಜನ-ಮನಗಳಲ್ಲಿ ಚೈತನ್ಯ ತುಂಬಿದ ಡಾ.ರಾಜ್‌ ನೆನಪು

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಾ. ರಾಜಕುಮಾರ್  ಕನ್ನಡದ ಸಾಂಸ್ಕೃತಿಕ ಪ್ರತಿನಿಧಿ, ಈ ಕೋವಿಡ್ ಲಾಕ್‍ಡೌನ್ ಸಮಯದಲ್ಲೂ ಸಹ ಅವರ ಜಯಂತಿ ನೆನಪು ಜನ-ಮನಗಳಲ್ಲಿ ಚೈತನ್ಯವನ್ನು ತುಂಬಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಹೇಳಿದರು.

ಕೋವಿಡ್ -19 ಲಾಕ್‍ಡೌನ್ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ವಾರ್ತಾ ಸೌಧದಲ್ಲಿ ಇಂದು ಹಮ್ಮಿಕೊಂಡಿದ್ದ ಕನ್ನಡದ ವರನಟ ಡಾ: ರಾಜ್‍ಕುಮಾರ್ ಅವರ 92 ನೇ ಜಯಂತಿಯ ಸರಳ ಕಾರ್ಯಕ್ರಮದಲ್ಲಿ ಡಾ.ರಾಜ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು ಪ್ರತಿಯೊಬ್ಬರಲ್ಲೂ ಒಂದೇ ತೆರನಾಗಿ ಕಾಣುವ ವ್ಯಕ್ತಿತ್ವ  ಡಾ. ರಾಜ್‍ಕುಮಾರ್ ಅವರದ್ದು ಎಂದು ಅವರ ಒಡನಾಟವನ್ನು ಸ್ಮರಿಸಿಕೊಂಡರು.

ಕರ್ನಾಟಕವನ್ನು ಪ್ರತಿನಿಧಿಸುವ ಏಕೈಕ ಕಲಾವಿದರೆಂದರೆ ಅದು ರಾಜ್‍ಕುಮಾರ್ ಮಾತ್ರ, ಅವರ ಪ್ರತಿ ನಡೆ-ನುಡಿ ಇತರರಿಗೆ ಮಾರ್ಗದರ್ಶನವಾಗಿತ್ತು. ಅವರು ಕೇವಲ ಒಬ್ಬ ಕಲಾವಿದರಲ್ಲದೆ ಅತ್ಯುತ್ತಮ ಮಾನವೀಯ ಅಂತಃಕರಣವುಳ್ಳ ಮಹಾನ್ ಮಾನವತವಾದಿಯಾಗಿದ್ದು ಎಂದು ಹೇಳಿದರು.

ಹಿರಿಯ ನಿರ್ಮಾಪಕ ಹಾಗೂ ಮಂಡಳಿಯ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು ಅವರು ಮಾತನಾಡಿ ಸೂರ್ಯಚಂದ್ರ ಎಲ್ಲಿಯವರೆಗೆ ಇರುತ್ತೋ ಅಲ್ಲಿಯವರೆಗೆ ಡಾ: ರಾಜ್‍ಕುಮಾರ್ ಅವರ ಹೆಸರು ಅಜರಾಮರ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ತುಂಬಾ ಪ್ರೀತಿಸುತ್ತಿದ್ದರು. ಯಾವುದೇ ಸಮಸ್ಯೆಗಳಿದ್ದರೂ ನಾವು ಅವರಲ್ಲಿ ತೆರಳಿ ಪರಿಹಾರ ಹುಡುಕಿಕೊಳ್ಳುತ್ತಿದ್ದೇವು ಎಂದು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಆಯುಕ್ತ ಎಸ್.ಎನ್. ಸಿದ್ದರಾಮಪ್ಪ, ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಹಾಗೂ ಹೆಚ್. ಬಿ. ದಿನೇಶ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜಯರಾಜ್, ಚಿತ್ರನಟಿ ಮಾಳವಿಕಾ ಅವಿನಾಶ್, ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು? KSRTC ‘ಅಶ್ವಮೇಧ’ಗಳಿಂದ ಸಂಸ್ಥೆಗೆ ಶೇ.10ಕ್ಕೂ ಹೆಚ್ಚು ಲಾಭ : ಸಚಿವ ರಾಮಲಿಂಗಾರೆಡ್ಡಿ ಅತೀ ಶೀಘ್ರದಲ್ಲೇ NWKRTC ಒಡಲು ಸೇರಲಿವೆ 350 ಹೊಸ ಎಲೆಕ್ಟ್ರಿಕ್​ ಬಸ್‌ಗಳು