NEWSನಮ್ಮಜಿಲ್ಲೆನಮ್ಮರಾಜ್ಯ

ಜುಲೈ 7ರಂದು KSRTC ನೌಕರರ ಕ್ರೆಡಿಟ್‌ ಸಹಕಾರ ಸಂಘದ ಚುನಾವಣೆ- ಜೂ.27ರಿಂದ ನಾಮಪತ್ರ ಸಲ್ಲಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಚುನಾವಣೆ ಜುಲೈ 7ರಂದು ನಡೆಸಲಾಗುವುದು ಎಂದು ರಾಜ್ಯ ಸರ್ಕಾರದ ಸಹಕಾರ ಚುನಾವಣಾ ಪ್ರಾಧಿಕಾರ ಘೋಷಿಸಿದೆ.

ಈ ಸಹಕಾರ ಸಂಘಕ್ಕೆ ಚುನಾವಣೆ ನಡೆದು 5 ವರ್ಷಗಳು ಕಳೆದಿರುವುದರಿಂದ ಮತ್ತೆ 5ವರ್ಷದ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಯನ್ನು ಜುಲೈ 7ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಮತದಾನವನ್ನು “ಭಾರತ್ ಎಜುಕೇಷನಲ್ ಸೊಸೈಟಿ, 16ನೇ ಮುಖ್ಯರಸ್ತೆ, 4ನೇ ಬ್ಲಾಕ್, ಜಯನಗರ, ಬೆಂಗಳೂರು-560011” ಇಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ.

ಇನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘದ ಆಡಳಿತ ಮಂಡಳಿಯ 19 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಅದರಲ್ಲಿ 13 ಸಾಮಾನ್ಯ, ಒಂದು ಸ್ಥಾನ ಪರಿಶಿಷ್ಟ ಜಾತಿ ಮೀಸಲು, ಒಂದು ಸ್ಥಾನ ಪರಿಶಿಷ್ಟ ಪಂಗಡ ಮೀಸಲು, ಎರಡು ಸ್ಥಾನ ಮಹಿಳಾ ಮೀಸಲು, ತಲಾ ಒಂದೊಂದು ಹಿಂದುಳಿದ ವರ್ಗ ಎ ಮತ್ತು ಬಿ ಸ್ಥಾನಗಳೀಗೆ ಅಂದರೆ ಒಟ್ಟು 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಇದೇ ಜೂನ್‌27ರಿಂದ ಉಮೇದುವಾರಿಕೆ ಸಲ್ಲಿಸಬಹುದಾಗಿದ್ದು, ಜೂನ್‌29 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಳಗ್ಗೆ 11ಗಂಟೆಯಿಂದ ಸಂಜೆ 5ಗಂಟೆ ವರೆಗೂ ನಾಮಪತ್ರ ಸಲ್ಲಿಸಬಹುದು.

ಜೂನ್‌30ರಂದು ನಾಮಪತ್ರ ಪರಿಶೀಲನೆ ಮಾಡಲಾಗುವುದು ಮತ್ತು ಅಂದೇ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಇನ್ನು ಜಯಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯದಿನವಾಗಿದ್ದು, ಅಂದು ಮಧ್ಯಾಹ್ನ 3ಗಂಟೆಯೊಳಗೆ ನಾಮಪತ್ರ ಹಿಂತೆಗೆದುಕೊಳ್ಳಬಹುದು.

ಜುಲೈ 1ರ 3ಗಂಟೆ ಬಳಿಕ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳ ಚುನಾವಣೆ ಚಿಹ್ನೆಗಳ ಹಂಚಿಕೆ ಮತ್ತು ಅಂದೆ ಪ್ರಕಟ ಮಾಡಲಾಗುವುದು ಎಂದು ಸಹಕಾರ ಚುನಾವಣಾ ಪ್ರಾಧಿಕಾರ ತಿಳಿಸಿದೆ.

ಇನ್ನು ಜುಲೈ 7ರಂದು ಚುನಾವಣೆ ನಡೆಯಲಿದ್ದು ಅಂದೇ ಮತ ಎಣಿಕೆ ಕೂಡ ನಡೆಸಲಾಗುವುದು ಬಳಿಕ ರಿಟರ್ನಿಂಗ್‌ಅಧಿಕಾರಿ ಫಲಿತಾಂಶ ಪ್ರಕಟಿಸಲಿದ್ದಾರೆ ಎಂದು ತಿಳಿಸಿದೆ.

ಗುರುತಿನ ಚೀಟಿ ಕಡ್ಡಾಯ: ಮತ ಚಲಾಯಿಸಲು ಬರುವ ಸಹಕಾರ ಸಂಘಗಳ 1960 ರ ನಿಯಮ 13-ಎ ಪ್ರಕಾರ ಗುರುತಿನ ಚೀಟಿಯು ಕಡ್ಡಾಯವಾಗಿದೆ ಆದ ಕಾರಣ ಸದಸ್ಯರು ಸಂಘದ ಕಚೇರಿ ವೇಳೆಯಲ್ಲಿ ತಮ್ಮ ಭಾವಚಿತ್ರ ಹಾಗೂ ವಿವರಗಳನ್ನು ನೀಡಿ ಗುರುತಿನ ಚೀಟಿಯನ್ನು ಪಡೆದುಕೊಳ್ಳುವಂತೆ ಕಾರ್ಯನಿರ್ವಹಣಾಧಿಕಾರಿ ಆರ್.ಹುಚ್ಚಪ್ಪ ತಿಳಿಸಿದ್ದಾರೆ.

ಬೆಂಗಳೂರಿನ ಶಾಂತಿನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ಚುನಾವಣಾ ದಿನಾಂಕದಿಂದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಲಿ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಸಲು ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಚುನಾವಣಾಧಿಕಾರಿಗಳು, ಸಹಕಾರ ಚುನಾವಣಾ ಪ್ರಾಧಿಕಾರ ನನ್ನನ್ನು ರಿಟರ್ನಿಂಗ್ ಅಧಿಕಾರಿಯಾಗಿ ನೇಮಿಸಿ ಈ ಹಿಂದೆ ಚುನಾವಣೆಯನ್ನು 24-03-2024ರ ಭಾನುವಾರ ರಂದು ನಡೆಸಲು ನಿರ್ದೇಶಿಸಿತ್ತು.

ಅದರಂತೆ 24-03-2024ರ ಭಾನುವಾರಕ್ಕೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರದ ಚುನಾವಣಾ ಪ್ರಕ್ರಿಯೆಯನ್ನು ಸ್ಥಗಿತಗೊಳಿತ್ತು. ಸಾರ್ವತ್ರಿಕ ಲೋಕಸಬಾ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ವೇಳಾಪಟ್ಟಿ ಪ್ರಕಟಿಸಿದಂತಹ ಪ್ರಕರಣಗಳಲ್ಲಿ ಯಾವ ಹಂತದಲ್ಲಿ ಚುನಾವಣಾ ಪ್ರಕ್ರಿಯೆ ಸ್ಥಗಿತವಾಗಿತ್ತೊ ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆಯನ್ನು ಪ್ರಾರಂಭಿಸತಕ್ಕದೆಂದು ಸರ್ಕಾರವು ಜೂನ್‌5ರಂದು ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಯಾವ ಹಂತದಲ್ಲಿ ನಿಲ್ಲಿಸಲಾಗಿತ್ತೋ ಅದೇ ಹಂತದಿಂದ ಮುಂದುವರಿಸಿ ಚುನಾವಣೆಯನ್ನು 07.07.2024ರ ಭಾನುವಾರ ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ಜರುಗಿಸಲು ನಿಗದಿಪಡಿಸಲಾಗಿದೆ ಎಂದು ಹುಚ್ಚಪ್ಪ ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ