NEWSನಮ್ಮರಾಜ್ಯ

ತುಮಕೂರು ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಕ್ರಮ

ಕಾರ್ಮಿಕರಿಗೆ ಊಟದ ವ್ಯವಸ್ಥೆ l ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಜಿಲ್ಲೆಯಲ್ಲಿ ಈವರೆಗೂ ಕೋವಿಡ್-19 ಪಾಸಿಟಿವ್ ಕಂಡು ಬಂದಿದ್ದು, ಇದನ್ನು ಹೊರತುಪಡಿಸಿ ಇವರ ಕಾಂಟ್ಯಾಕ್ಟ್ ಇದ್ದವರನ್ನು ಗುರುತಿಸಿ ಜಿಲ್ಲೆಯಲ್ಲಿ 72 ಜನರನ್ನು ಪ್ರತ್ಯೇಕವಾಗಿ ಐಸೋಲೇಶನ್  ವಾರ್ಡ್ನಲ್ಲಿ ಇರಿಸಲಾಗಿದ್ದು, ಎಲ್ಲರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಹಿಸಲಾಗಿದ್ದು ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದರು.

ನಿನ್ನೆ 16 ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳಹಿಸಲಾಗಿತ್ತು. ಅದರಲ್ಲಿ 11 ಮಾದರಿಗಳು ತಿಪಟೂರಿನಿಂದ ಕಳಹಿಸಲಾಗಿತ್ತು. ಇವು ಕೂಡ ನೆಗೆಟಿವ್ ಬಂದಿದೆ. ಆದರೂ ಸಹ ಇವರನ್ನು 14 ದಿನಗಳವರೆಗೆ ಐಸೋಲೇಶನ್‌ನಲ್ಲಿಯೇ ಇರಿಸಲಾಗುವುದು. ನಂತರ ಅವರನ್ನು ಮನೆಗೆ ಕಳಹಿಸಲಾಗುತ್ತದೆ ಎಂದರು.

ಜಿಲ್ಲೆಯಲ್ಲಿರುವ ವಲಸೆ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯ ಅಧಿಕಾರಿಗಳನ್ನು ನೊಡಲ್ ಅಧಿಕಾರಿಯನ್ನಾಗಿ ನೇಮಿಸಿ ಕಾರ್ಮಿಕರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಕಾರ್ಮಿಕರಿಗೆ ಯಾವುದೇ ಕೊರತೆಯಾಗದಂತೆ ೨೦ ಕಡೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.  ಜಿಲ್ಲೆಯಲ್ಲಿ 11 ಶೆಲ್ಟರ್‌ಗಳನ್ನು ಗುರುತಿಸಲಾಗಿದೆ. ಕಾರ್ಮಿಕರು, ಬಡವರು ನಿರ್ಗತಿಕರಿಗೆ ಸೂರು ಕಲ್ಪಿಸಲು ಕ್ರಮವಹಿಸಲಾಗುವುದು. ಅಲ್ಲದೇ ಇದಕ್ಕೆಲ್ಲಾ ದಾನಿಗಳು ಮುಂದೆ ಬಂದಿದ್ದು, ಸಿದ್ದಗಂಗಾ ಮಠದ ಸ್ವಾಮೀಜಿಗಳು ವಲಸೆ ಬಂದ ಕಾರ್ಮಿಕರು, ನಿರ್ಗತಿಕರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ ಅವರಿಗೆ ಜಿಲ್ಲಾಡಳಿತ ವತಿಯಿಂದ ಅಭಿನಂದನೆ ಸಲ್ಲಿಸಿದರು.

ರಾಜ್ಯದಲ್ಲಿ 84 ಪಾಸಿಟಿವ್ ವ್ಯಕ್ತಿಗೆ ಚಿಕಿತ್ಸೆ

ತುಮಕೂರು ಜಿಲ್ಲೆಯ ರಾಜ್ಯದ 84 ನೇ ಸೋಂಕಿತ ವ್ಯಕ್ತಿಗೆ ಪಾಸಿಟಿವ್ ಎಂದು ಗುರುತಿಸಿದ ಮೇಲೆ ಬೆಂಗಳೂರಿನ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಪರಿಸ್ಥಿತಿ ಸ್ಥಿರವಾಗಿದೆ. ಆಸ್ಪತ್ರೆಯ ಪಕ್ಕದಲ್ಲಿಯೇ ಅವರ ತಾಯಿಯನ್ನೂ ಸಹ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆಗೆ ಒಳಪಡಿಸಿ ಪರೀಕ್ಷೆ ಮಾಡಿಸಿದಾಗ ನೆಗೆಟಿವ್ ಎಂದು ಬಂದಿದ್ದರೂ ಕೂಡ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು 14 ದಿವಸಗಳ ಕಾಲ ಐಸೋಲೇಷನ್ ಮಾಡಲಾಗುವುದು ಹಾಗೂ ವೈರಾಣು ಎಷ್ಟು ದಿವಸಗಳಲ್ಲಿ ಉಲ್ಭಣಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲದ ಕಾರಣ ೨೮ ದಿವಸಗಳವರೆಗೆ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
ಅನ್ನವೂ ಹಳಸಿತ್ತು- ನಾಯಿಯೂ ಹಸಿದಿತ್ತು : ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಸಿದ್ದರಾಮಯ್ಯ ವ್ಯಂಗ್ಯ ಬಿಜೆಪಿ ಸೇರುತ್ತಾರ ಸುಪ್ರೀಂಕೋರ್ಟ್‌, ಹೈಕೋರ್ಟ್‌ ವಕೀಲ ಎಚ್‌.ಬಿ.ಶಿವರಾಜು? ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ನೂತನ ಕಚೇರಿ ಉದ್ಘಾಟನೆ ನನ್ನ ರಾಜ್ಯದ ಬರಗಾಲದ ಬವಣೆ, ರೈತರ ಸಂಕಷ್ಟ ತಪ್ಪಿಸಿ: ಸಿಎಸ್‌ಒಗೆ ರೈತ ಮುಖಂಡರ ನಿಯೋಗ ಒತ್ತಾಯ ಕೊಡಗು: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಬಲಿಯಾದ ಕಾಫಿ ಬೆಳೆಗಾರ ಮೈಸೂರು: ಬಿಸಿಲ ಝಳದಿಂದ ಬಳಲಿ ಮಡಕೆ ಫಿಲ್ಟರ್‌ಗಳ ಮೊರೆ ಹೋಗುತ್ತಿರುವ ಜನತೆ ಆಧುನಿಕ ಜೀವನ ಶೈಲಿಯಿಂದ ಹೊರಬಂದರೆ ಉತ್ತಮ ಆರೋಗ್ಯ : ಶ್ರೀ ಸೌಮ್ಯನಾಥ ಸ್ವಾಮೀಜಿ ಅಭಿಮತ MP ಚುನಾವಣೆ: 706 ಮಂದಿ ಮನೆಯಿಂದಲೇ ಮತದಾನ - ಜಿಲ್ಲಾಧಿಕಾರಿ ಡಾ. ಶಿವಶಂಕರ್‌ ಐಪಿಎಲ್  ಕ್ರಿಕೆಟ್: ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಎಂಟಿಸಿ ಬಸ್ ವ್ಯವಸ್ಥೆ ಪ್ರತಿಭಟನೆ ಬಳಿಕ ಗ್ರಾಮಗಳಿಗೆ ನೀರಿನ ಸಮಸ್ಯೆ ಪರಿಹರಿಸಿದ ಮಹದೇಶ್ವರಬೆಟ್ಟ ಗ್ರಾಪಂ