ಜ್ವರ ತಪಾಸಣಾ ಕೇಂದ್ರ ಪೇಟೆ ಪ್ರೈಮರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ಭೇಟಿ
ನಿರಾಶ್ರಿತರ ಕೇಂದ್ರದಲ್ಲಿ ಕೋವಿಡ್-19 ವೈರಾಣು ತಡೆಗೆ ಕೈಗೊಂಡಿರುವ ಮುಂಜಾಗ್ರತೆ ಪರಿಶೀಲನೆ
ಚಾಮರಾಜನಗರ: ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್ ಜಿಲ್ಲೆಯ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿ ಕೋವಿಡ್-19 ವೈರಾಣು ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಕೋವಿಡ್ ತಡೆ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಆರಂಭಿಸಿರುವ ನಿರ್ಗತಿಕರ ತಂಗುದಾಣಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದರು. ಬಳಿಕ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪ್ರತ್ಯೇಕ ವಾರ್ಡ್‍ಗಳು, ಔಷಧೋಪಚಾರ, ನೈರ್ಮಲ್ಯಕ್ಕಾಗಿ ಮಾಡಲಾಗಿರುವ ಸಿದ್ದತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.
ತದನಂತರ ಜ್ವರ ತಪಾಸಣಾ ಕೇಂದ್ರವನ್ನಾಗಿ ಆರಂಭಿಸಲು ನಿರ್ಧರಿಸಿರುವ ಪೇಟೆ ಪ್ರೈಮರಿ ಶಾಲಾ ಅವರಣಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹಾಗೂ ಜಿಲ್ಲಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಆರ್. ರವಿ ಅವರು ಜ್ವರ ತಪಾಸಣಾ ಕೇಂದ್ರದಲ್ಲಿ ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಸಚಿವರಿಗೆ ವಿವರಿಸಿದರು.
ನಂತರ ಗುಂಡ್ಲುಪೇಟೆ ತಾಲೂಕಿಗೆ ತೆರಳಿದ ಸಚಿವರು ಕರ್ನಾಟಕ-ಕೇರಳ ಗಡಿ ಭಾಗವಾದ ಮೂಲೆಹೊಳೆ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ಅಲ್ಲಿ ನಡೆಸಲಾಗುತ್ತಿರುವ ತಪಾಸಣೆ ಕಾರ್ಯವನ್ನು ಬಹುಹೊತ್ತು ಪರಿಶೀಲಿಸಿದರು. ಅವಶ್ಯಕ ಸಾಮಗ್ರಿ ಸಾಗಿಸುವ ವಾಹನಗಳಿಗೆ ಮಾಡಲಾಗುತ್ತಿರುವ ಸ್ಯಾನಿಟೈಜೇಷನ್ ಪ್ರಕ್ರಿಯೆಯನ್ನು ವೀಕ್ಷಿಸಿದರು. ಚೆಕ್‍ಪೋಸ್ಟ್ ಸಿಬ್ಬಂಯಿಂದ ತಪಾಸಣೆ ಮಾಡಲಾಗುತ್ತಿರುವ ವಿವರಗಳನ್ನು ಪಡೆದುಕೊಂಡರು.
ಬಳಿಕ ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ ವಾಹನ ಹಾಗೂ ಜನರ ಸಂಚಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ಅವಶ್ಯಕ ವಸ್ತುಗಳಾದ ತರಕಾರಿ ದಿನಸಿ ಪದಾರ್ಥಗಳ ಬೆಲೆ ಹೆಚ್ಚಾಗದಂತೆ ನಿಗಾ ವಹಿಸಬೇಕು. ಕೊರೊನಾ ತಡೆಯುವ ನಿಟ್ಟಿನಲ್ಲಿ ನಾಗರಿಕರು ಮನೆಯಿಂದ ಹೊರಗೆ ಬಾರದಂತೆ ಅತ್ಯಂತ ಬಿಗಿ ಕ್ರಮಗಳನ್ನು ಮುಂದುವರೆಸಬೇಕು. ಆದರೆ ಅವಶ್ಯಕ ಸಾಮಗ್ರಿಗಳ ಖರೀದಿಗೆ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
Related
You Might Also Like
KSRTC: ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯ- ಇಂದಿನಿಂದಲೇ ಜಾರಿ- ಎಂಡಿ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುರುಷ ನೌಕರರಿಗೂ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಇಂದು ಆದೇಶ ಹೊರಡಿಸಿದ್ದಾರೆ. ಒಂಟಿ...
KSRTC: ಶೇ.15ರಷ್ಟು ಬಸ್ ಟಿಕೆಟ್ ದರ ಹೆಚ್ಚಳ- ಜ.5ರಿಂದ ಜಾರಿಗೆ ಸಚಿವ ಸಂಪುಟ ಸಭೆ ಅಸ್ತು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ನಿಗಮಗಳ 10 ವರ್ಷದ ಮನವಿಗೆ ಸ್ಪಂದಿಸಿದೆ....
KSRTCಗೆ ರಾಷ್ಟ್ರದ ಮಟ್ಟದ ಒಂಬತ್ತು ಪ್ರಶಸ್ತಿಗಳು- 3ರಾಜ್ಯಗಳಲ್ಲಿ ಪ್ರದಾನ
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 9 ರಾಷ್ಟ್ರದ ಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಸಂಸ್ಥೆಗೆ 5 ಆಡ್ ವರ್ಲ್ಡ್ ಶೌಡೌನ್ ಚಿನ್ನದ ಪ್ರಶಸ್ತಿ, 2 ಗೌಕೇರ್...
KSRTC 4 ನಿಗಮಗಳ ನಷ್ಟ ಪರಿಹಾರಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವುದು ಅನಿವಾರ್ಯ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದ ನಾಲ್ಕು ಬಸ್ ನಿಗಮಗಳು ಶೇ.15ರಷ್ಟು ಪ್ರಯಾಣ ದರವನ್ನು ಹೆಚ್ಚಿಸಬೇಕು ಎಂದು ಮನವಿ ಮಾಡಿ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದು, ಈ ಕುರಿತು ಸರಕಾರ ಚರ್ಚೆ...
KSRTC: ನೌಕರರ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಜ.6ರಂದು ಸಿಎಂ ಚಾಲನೆ
ಬೆಂಗಳೂರು: ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಬಹು ವರ್ಷಗಳ ಬೇಡಿಕೆಗಳಲ್ಲಿ ಒಂದಾದ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆ ಅನುಷ್ಠಾನಕ್ಕೆ ಮುಹೂರ್ತ ನಿಗದಿಯಾಗಿದ್ದು, ಜ.6ರಂದು...
ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ 32 ಪತ್ರಕರ್ತರಿಗೆ ಪ್ರಶಸ್ತಿ
ಬೆಂಗಳೂರು: ಕರ್ನಾಟಕ ಸರ್ಕಾರವು ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ ಪತ್ರಕರ್ತರಿಗೆ ನೀಡುವ 2017 ರಿಂದ 2023ರ ಕ್ಯಾಲೆಂಡರ್ ವರ್ಷಗಳ ಅಭಿವೃದ್ದಿ ಮತ್ತು...
ಕ್ಯಾನ್ಸರ್ ಗೆದ್ದ ಶಿವಣ್ಣ: ಡಬಲ್ ಪವರ್‌ನೊಂದಿಗೆ ಬರುತ್ತೇನೆ ಅಂದ ನಟ
ಬೆಂಗಳೂರು: ಸ್ಯಾಂಡಲ್ವುಡ್ ಹಿರಿಯ ನಟ ಶಿವರಾಜ್ಕುಮಾರ್ ಅವರು ಶಸ್ತ್ರಚಿಕಿತ್ಸೆ ಬಳಿಕ ಗುಣಮುಖರಾಗಿದ್ದಾರೆ. ಕ್ಯಾನ್ಸರ್ ಗೆದ್ದಿರುವ ಶಿವಣ್ಣ ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರುವ ಜತೆಗೆ ದರ್ಶನವನ್ನೂ ಕೊಟ್ಟಿದ್ದಾರೆ....
ಹೊಸ ವರ್ಷದ ಸಂಭ್ರಮದಲ್ಲಿದ್ದ ಪ್ರಿಯಕರನಿಗೆ ಇರಿದ ಪ್ರೇಯಸಿ -ಅಷ್ಟಕ್ಕೂ ಆಗಿದ್ದೇನು?
ಹಾಸನ: ಹೊಸ ವರ್ಷದ ಸಂಭ್ರಮದಲ್ಲಿ ಸ್ನೇಹಿತರೊಟ್ಟಿಗೆ ಇದ್ದ ಪ್ರಿಯಕರನೊಂದಿಗೆ ಜಗಳ ಮಾಡಿದ ಪ್ರೇಯಸಿಯೊಬ್ಬಳು, ಏಕಾಏಕಿ ಚಾಕು ಇರಿದ ಘಟನೆ ನಗರದ ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಬಳಿ...
ಸಿಡ್ನಿಯಲ್ಲಿ 2025ರ ನೂತನ ವರ್ಷ ಸ್ವಾಗತಿಸಿದ ಮಿಲಿಯನ್‌ಗಿಂತಲೂ ಹೆಚ್ಚು ಜನರು
2025ರ ನೂತನ ವರ್ಷವನ್ನು ಅಧಿಕೃತವಾಗಿ ಹಲವು ದೇಶಗಳು ಈಗಾಗಲೇ ಸ್ವಾಗತಿಸಿವೆ. ಅದರ ಒಂದು ನೋಟ ಸಿಡ್ನಿಯು ಹೊಸ ವರ್ಷಕ್ಕೆ ಹಲೋ ಸ್ವಾಗತ ಎಂದು ಹೇಳಿ ಸಿಡ್ನಿ ಹಾರ್ಬರ್...
KSRTC: 4 ಸಾರಿಗೆ ನಿಗಮಗಳು 2,000 ಕೋಟಿ ರೂ. ಸಾಲ ಪಡೆಯಲು ಒಪ್ಪಿದ ಸರ್ಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲೂ ಆರ್ಥಿಕ ಮುಗ್ಗಟ್ಟು ಎದುರಾಗಿರುವ ಹಿನ್ನೆಲೆ ಸಾರಿಗೆ ಸಂಸ್ಥೆಗಳಿಗೆ ಹಣಕಾಸಿನ ಸಂಸ್ಥೆಗಳಿಂದ ಸಾಲ (Loan) ಪಡೆಯುವುದಕ್ಕೆ ಇಂದು ಸರ್ಕಾರ...
ವರ್ಲ್ಡ್ ಆಫ್ ರೆಕಾರ್ಡ್ಸ್: ವಿಶ್ವ ದಾಖಲೆ ಸೇರಿದ 1.9 ವರ್ಷದ ಜನ್ವಿತಾ
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಉದ್ದೇಬೋರನಹಳ್ಳಿ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿರುವ ದಿವ್ಯ ಮತ್ತು ಲೋಹಿತ್ ಅವರ 1 ವರ್ಷ 9ತಿಂಗಳ ಮಗು ಜನ್ವಿತಾಳನ್ನು ಅಂತಾ ರಾಷ್ಟ್ರೀಯ ವರ್ಲ್ಡ್ ಆಫ್...