NEWSನಮ್ಮಜಿಲ್ಲೆ

ಜ್ವರ ತಪಾಸಣಾ ಕೇಂದ್ರ ಪೇಟೆ ಪ್ರೈಮರಿ ಶಾಲೆಗೆ ಸಚಿವ ಸುರೇಶ್‌ ಕುಮಾರ್‌ ಭೇಟಿ

ನಿರಾಶ್ರಿತರ ಕೇಂದ್ರದಲ್ಲಿ ಕೋವಿಡ್-19 ವೈರಾಣು ತಡೆಗೆ ಕೈಗೊಂಡಿರುವ ಮುಂಜಾಗ್ರತೆ ಪರಿಶೀಲನೆ     

ವಿಜಯಪಥ ಸಮಗ್ರ ಸುದ್ದಿ

ಚಾಮರಾಜನಗರ: ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್‍ಕುಮಾರ್ ಜಿಲ್ಲೆಯ ವಿವಿಧ ಸ್ಥಳಗಳಿಗೆ ಇಂದು ಭೇಟಿ ನೀಡಿ ಕೋವಿಡ್-19 ವೈರಾಣು ತಡೆಗೆ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.

ಕೋವಿಡ್ ತಡೆ ಹಿನ್ನೆಲೆಯಲ್ಲಿ ಚಾಮರಾಜನಗರ ಪಟ್ಟಣದಲ್ಲಿ ಆರಂಭಿಸಿರುವ ನಿರ್ಗತಿಕರ ತಂಗುದಾಣಕ್ಕೆ ಭೇಟಿ ಕೊಟ್ಟು ಪರಿಶೀಲಿಸಿದರು. ಬಳಿಕ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಕೈಗೊಳ್ಳಲಾಗಿರುವ ವ್ಯವಸ್ಥೆಗಳನ್ನು ವೀಕ್ಷಿಸಿದರು. ಪ್ರತ್ಯೇಕ ವಾರ್ಡ್‍ಗಳು, ಔಷಧೋಪಚಾರ, ನೈರ್ಮಲ್ಯಕ್ಕಾಗಿ ಮಾಡಲಾಗಿರುವ ಸಿದ್ದತೆಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು.

ತದನಂತರ ಜ್ವರ ತಪಾಸಣಾ ಕೇಂದ್ರವನ್ನಾಗಿ ಆರಂಭಿಸಲು ನಿರ್ಧರಿಸಿರುವ ಪೇಟೆ ಪ್ರೈಮರಿ ಶಾಲಾ ಅವರಣಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಹಾಗೂ ಜಿಲ್ಲಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಆರ್. ರವಿ ಅವರು ಜ್ವರ ತಪಾಸಣಾ ಕೇಂದ್ರದಲ್ಲಿ ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ನಂತರ ಗುಂಡ್ಲುಪೇಟೆ ತಾಲೂಕಿಗೆ ತೆರಳಿದ ಸಚಿವರು ಕರ್ನಾಟಕ-ಕೇರಳ ಗಡಿ ಭಾಗವಾದ ಮೂಲೆಹೊಳೆ ಚೆಕ್‍ಪೋಸ್ಟ್‍ಗೆ ಭೇಟಿ ನೀಡಿ ಅಲ್ಲಿ ನಡೆಸಲಾಗುತ್ತಿರುವ ತಪಾಸಣೆ ಕಾರ್ಯವನ್ನು ಬಹುಹೊತ್ತು ಪರಿಶೀಲಿಸಿದರು. ಅವಶ್ಯಕ ಸಾಮಗ್ರಿ ಸಾಗಿಸುವ ವಾಹನಗಳಿಗೆ ಮಾಡಲಾಗುತ್ತಿರುವ ಸ್ಯಾನಿಟೈಜೇಷನ್ ಪ್ರಕ್ರಿಯೆಯನ್ನು ವೀಕ್ಷಿಸಿದರು. ಚೆಕ್‍ಪೋಸ್ಟ್ ಸಿಬ್ಬಂಯಿಂದ ತಪಾಸಣೆ ಮಾಡಲಾಗುತ್ತಿರುವ ವಿವರಗಳನ್ನು ಪಡೆದುಕೊಂಡರು.

ಬಳಿಕ ಗುಂಡ್ಲುಪೇಟೆ ಪಟ್ಟಣದಲ್ಲಿ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ ವಾಹನ ಹಾಗೂ ಜನರ ಸಂಚಾರಕ್ಕೆ ಕಟ್ಟುನಿಟ್ಟಿನ ಕಡಿವಾಣ ಹಾಕಬೇಕು. ಅವಶ್ಯಕ ವಸ್ತುಗಳಾದ ತರಕಾರಿ ದಿನಸಿ ಪದಾರ್ಥಗಳ ಬೆಲೆ ಹೆಚ್ಚಾಗದಂತೆ ನಿಗಾ ವಹಿಸಬೇಕು. ಕೊರೊನಾ ತಡೆಯುವ ನಿಟ್ಟಿನಲ್ಲಿ ನಾಗರಿಕರು ಮನೆಯಿಂದ ಹೊರಗೆ ಬಾರದಂತೆ ಅತ್ಯಂತ ಬಿಗಿ ಕ್ರಮಗಳನ್ನು ಮುಂದುವರೆಸಬೇಕು. ಆದರೆ ಅವಶ್ಯಕ ಸಾಮಗ್ರಿಗಳ ಖರೀದಿಗೆ ಅಂತರ ಕಾಯ್ದುಕೊಳ್ಳಲು ಸೂಚಿಸಬೇಕು ಎಂದು  ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

mgid.com, 613802, DIRECT, d4c29acad76ce94f
mgid.com, 613802, DIRECT, d4c29acad76ce94f

Leave a Reply

error: Content is protected !!