NEWSನಮ್ಮಜಿಲ್ಲೆನಮ್ಮರಾಜ್ಯ

ಜ.19ರಂದು ರೈತರ ಮಕ್ಕಳಿಗಾಗಿ ಉದ್ಯೋಗ ಮೇಳ ಆಯೋಜನೆ- 50 ಕಂಪನಿಗಳು ಭಾಗಿ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ್ಣ: ರೈತರ ಮಕ್ಕಳಿಗಾಗಿ ಜನವರಿ 19ರ ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರಿಗೆ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ನಂಜೇಗೌಡ ನಂಜುಂಡ ತಿಳಿಸಿದ್ದಾರೆ.

ಅನ್ನ, ಅಕ್ಷರ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ನೇತೃತ್ವದಲ್ಲಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಜಯಂತ್ಯುತ್ಸವ ಅಂಗವಾಗಿ ಉದ್ಯೋಗ ಮೇಳವನ್ನು ಪಿರಿಯಾಪಟ್ಟಣ್ಣದ ಆದಿ ಚುಂಚನಗಿರಿ ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ವಿವಿಧ ವಿದ್ಯಾಹರ್ತೆಗೆ ಅವಕಾಶ: ಉದ್ಯೋಗಾಂಕ್ಷಿಗಳಿಗೆ ಈ ಮೇಳವು ಸಂಪೂರ್ಣ ಉಚಿತವಾಗಿದ್ದು, ಪ್ರತಿ ಅಭ್ಯರ್ಥಿಯು 5 ಕಂಪನಿಗಳಿಗೆ ಸಂದರ್ಶನ ನೀಡಬಹುದಾಗಿದೆ. ಎಸ್ ಎಸ್ ಎಲ್ ಸಿ, ಪಿಯುಸಿ, ವಿವಿಧ ಕೋರ್ಸ್ ಗಳ ಪದವಿ (ಪಾಸ್, ಫೇಲ್), ITI , ಡಿಪ್ಲೋಮ, ಇಂಜಿನಿಯರಿಂಗ್, ಸ್ನಾತಕೋತರ ಪದವಿದಾರರು ಈ ಮೇಳದಲ್ಲಿ ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

50 ಕಂಪನಿಗಳು ಮತ್ತು 2000 ಉದ್ಯೋಗ ಅವಕಾಶಗಳು: ಈ ಮೇಳದಲ್ಲಿ ಸುಮಾರು 50 ಕಂಪನಿಗಳು ಭಾಗವಹಿಸಲಿದ್ದು, 2000 ಕಿಂತ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿದೆ.

ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ : ಈ ಮೇಳದಲ್ಲಿ ವಿಶೇಷವಾಗಿ ವಿಶೇಷ ಚೇತನ ಹಾಗೂ ಅಂಗವಿಕಲರಿಗೂ ಉದ್ಯೋಗ ಅವಕಾಶ ಕಲ್ಪಿಸುವ ವ್ಯವಸ್ಥೆ ಮಾಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೋಹನ್: 9686564192 ಮತ್ತು ಶಿವ ಕುಮಾರ್: 6363144181 ಸಂಪರ್ಕಿಸ ಬಹುದು ಎಂದು ತಿಳಿಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ