NEWSಕೃಷಿನಮ್ಮರಾಜ್ಯ

ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ರೈತ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಇದೇ ಜೂನ್‌ 24ರಂದು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ರೈತ ಮುಖಂಡರ ಸಮಾವೇಶ ಆಯೋಜಿಸಿಲಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮೈಸೂರಿನ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಯುಕ್ತ ಕಿಸಾನ್ ಮೋರ್ಚ ಸಂಘಟನೆ ವತಿಯಿಂದ ಪಂಜಾಬ್ ಹರಿಯಾಣ ಉತ್ತರ ಪ್ರದೇಶ ರಾಜ್ಯಗಳಲ್ಲಿ ನಡೆಯುತ್ತಿರುವ ನಿರಂತರ ಹೋರಾಟವನ್ನು ಬೆಂಬಲಿಸುವುದಾಗಿ ಮುಂದಿನ ಸಂಸತ್ ಅಧಿವೇಶನದಲ್ಲಿ 32 ಎಂಪಿಗಳು 16 ರಾಜ್ಯಸಭಾ ಸದಸ್ಯರು ನಿರಂತರ ಹೋರಾಟ ನಡೆಸುವುದಾಗಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇನ್ನು ಪಂಜಾಬ್ದಲ್ಲಿ ನಡೆಯುತ್ತಿರುವ ಚಳವಳಿ ಜಾಗಕ್ಕೆ ಐದು ಜನ ಸಂಸದರ ತಂಡ ಕಳಿಸಿ ದೂರವಾಣಿಯಲ್ಲಿ ಮಾತನಾಡಿ ಬೆಂಬಲಿಸಿದ್ದು, ಮುಂದಿನ ಹೋರಾಟ ದಕ್ಷಿಣ ಭಾರತದಲ್ಲಿ ಪ್ರಬಲಗೊಳಿಸಲು ಶಿವಮೊಗ್ಗದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯದ ರೈತ ಮುಖಂಡರ ಸಮಾವೇಶ ನಡೆಸಿ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ರೈತ ಮುಖಂಡರ ನಿಯೋಗದ ಜೊತೆ ಭೇಟಿ ಮಾಡಿ ಚರ್ಚಿಸಲು ತೀರ್ಮಾನಿಸಿದೆ ಎಂದರು.

ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ, ರೈತರ ಕೃಷಿ ಸಾಲಮನ್ನಾ ಮಾಡಬೇಕು. ಬೆಳೆವಿಮೆ ನೀತಿ ಬದಲಾಯಿಸಿ ಪ್ರತಿ ರೈತನ ಹೊಲದ ಬೆಳೆ ವಿಮೆ ಜಾರಿಗೆ ತರಬೇಕು. ಬರಗಾಲ, ಅತಿವೃಷ್ಟಿ ಮಳೆ ಹಾನಿ ಪ್ರವಾಹ ಹಾನಿ ಪ್ರಕೃತಿ ವಿಕೋಪದ ಹಾನಿ ಬೆಳೆ ನಷ್ಟ ಪರಿಹಾರದ ಎನ್‌ಡಿಆರ್‌ಎಫ್ ಮಾನದಂಡ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸುವ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ಕೇಂದ್ರ ಸರ್ಕಾರ ರಾಜ್ಯದ ರೈತರ ಉತ್ಪನ್ನಗಳ ಎಂಎಸ್‌ಪಿ ಖರೀದಿ ಅನುದಾನ ಪ್ರಮಾಣ ಏರಿಕೆ ಮಾಡಬೇಕು. ಪಂಜಾಬ್ ಹರಿಯಾಣ ತೆಲಂಗಾಣ ರಾಜ್ಯಗಳಲ್ಲಿ ಹೋಬಳಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಕೃಷಿ ಉತ್ಪನ್ನಗಳನ್ನ ರೈತರಿಂದ ಶೇ.45ರಷ್ಟು ರೈತರ ಉತ್ಪನ್ನಗಳ ಖರೀದಿ ಮಾಡುತ್ತಾರೆ.

ಆದರೆ, ಕೇಂದ್ರ ಸರ್ಕಾರ ನಮ್ಮ ರಾಜ್ಯದಲ್ಲಿ ಕೇವಲ ಮೂರರಷ್ಟು ಖರೀದಿ ಕೇಂದ್ರಗಳ ಮೂಲಕ ಖರೀದಿ ಮಾಡಲು ಅನುದಾನ ನೀಡುತ್ತಿದೆ. ಇದು ಕೇಂದ್ರ ಸರ್ಕಾರದ ತಾರತಮ್ಯ ನೀತಿಯಿಂದ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ. ಇದನ್ನು ಗಮನಿಸಿ ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯದ ರೈತರ ಹಿತವನ್ನ ರಕ್ಷಿಸಬೇಕು ಎಂದು ಒತ್ತಾಯಿಸಿದರು.

ರೈತರ ಸಾಲ ತಿರುವಳಿ: ಒಟಿಎಸ್ ಸಾಲ ಮೇಳ ನಡೆಸಿ ಹೊಸ ಸಾಲ ವಿತರಿಸಬೇಕು ಎಂದು ಸರ್ಕಾರ ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಆದೇಶ ನೀಡಿದೆ. ಎಸ್ಎಲ್‌ಬಿಸಿ ಕೂಡ ಮೆಗಾ ಅದಾಲತ್ ನಡೆಸಲು ಸೂಚಿಸಿದೆ. ಈ ಬಗ್ಗೆ ಬ್ಯಾಂಕಿನವರು ಕಾರ್ಯಕ್ರಮ ನಡೆಸದಿದ್ದರೆ ಬ್ಯಾಂಕ್ ಮುಂದೆ ಚಳವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

25,000 ಕೋಟಿ ಹಣಕಾಸಿನ ವ್ಯವಹಾರ ನಡೆಯುವ ಕಬ್ಬು ಬೆಳೆಗಾರ ರೈತರ ಹಾಗೂ ಸಕ್ಕರೆ ಉದ್ದಿಮೆ ಡಿಜಿಟಲಿಕರಣ ಮಾಡಿ. ಇದರಿಂದ ಕಬ್ಬು ಬೆಳೆಗಾರರು ಹಾಗೂ ಕಾರ್ಖಾನೆ ನಡುವೆ ದ್ವಿಪಕ್ಷೀಯ ಒಪ್ಪಂದ ಪತ್ರ. ಕಬ್ಬಿನ ತೂಕ ಸಂದೇಶ. ಕಬ್ಬಿನ ಹಣ ಪಾವತಿ ಸಂದೇಶ ಸಕ್ಕರೆ ಇಳುವರಿ ಸಂದೇಶ ರೈತರ ಮೊಬೈಲ್‌ಗೆ ಮಾಹಿತಿ ನೀಡುವ ಆಪನ್ನು ಸಿದ್ದಗೊಳಿಸಲಾಗಿದೆ ಎಂದರು.

ಇನ್ನು ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಿಂದಲೇ ಕಬ್ಬು ಅರೆಯುವ ಅನುಮತಿ ಪತ್ರ ನೀಡುವ ಮೊದಲೇ ಡಿಜಿಟಲೀಕರಣ ಜಾರಿ ಮಾಡಬೇಕು. ಸಕ್ಕರೆ ಕಾರ್ಖಾನೆಗಳ ಒತ್ತಡಕ್ಕೆ ಮಣಿದು ರೈತರಿಗೆ ವ್ಯವಸ್ಥಿತ ವಂಚನೆ ನಡೆಸಲು ಸಹಕಾರ ನೀಡಬಾರದು. ಕಳಪೆ ರಸಗೊಬ್ಬರ ಕೀಟನಾಶಕ ಬಿತ್ತನೆ ಬೀಜ ಮಾರಾಟ ಮಾಡುವ ಮಾರಾಟಗಾರರಿಗೆ ಜಾಮೀನು ರಹಿತ ಬಂಧನ ಮಾಡುವ ಕಠಿಣ ಕಾನೂನು ಜಾರಿ ಮಾಡಲು ರಾಜ್ಯ ಸರ್ಕಾರ ಮುಂದಾಗಬೇಕು. ಇದರಿಂದ ರೈತರಿಗೆ ಮೋಸವಾಗುವುದು ತಪ್ಪುತ್ತದೆ ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ಮಾರ್ಬಳಿ ನೀಲಕಂಠಪ್ಪ, ಬರಡನಪುರ ನಾಗರಾಜ್, ಜಿಲ್ಲಾ ಕಾರ್ಯದರ್ಶಿ ತಾಲೂಕ ಅಧ್ಯಕ್ಷ ವೆಂಕಟೇಶ್, ನಂಜನಗೂಡು ತಾಲೂಕು ಅಧ್ಯಕ್ಷ ವಿಜಯೇಂದ್ರ. ತಿ.ನರಸೀಪುರ ತಾಲೂಕು ಸಂಘಟನಾ ಕಾರ್ಯದರ್ಶಿ ಪ್ರದೀಪ್, ಮಹದೇವ ಇದ್ದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ