NEWSನಮ್ಮರಾಜ್ಯರಾಜಕೀಯ

ಟಿಪ್ಪಣಿಗಳ ಹಣ ಕಾಂಗ್ರೆಸ್‌ ಪಕ್ಷದ ಮಂಡಿಗೋ ಅಥವಾ YstTax ಹುಂಡಿಗೋ: ಜೆಡಿಎಸ್‌ ಪ್ರಶ್ನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ ಎಂದು ಜೆಡಿಎಸ್‌ ಕಾಂಗ್ರೆಸ್‌ಅನ್ನು ತರಾಟೆಗೆ ತೆಗೆದುಕೊಂಡಿದೆ.

ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕಾಂಗ್ರೆಸ್‌ ಅನ್ನು ಹಿಗ್ಗಾಮುಗ್ಗ ಜಾಡಿಸಿದೆ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ‘ ಹೊಸ ವರಸೆ ಮತ್ತು ಹೊಸ ಕಸವರಿಕೆ!!’

ವೆಸ್ಟ್‌ ಎಂಡ್‌ ಲೆಕ್ಕ ಇರಲಿ, ‘ ಸಿಎಂ ಟಿಪ್ಪಣಿ ಬಿಕರಿ’ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ!! ಇದ್ಯಾವ ಸೀಮೆ ಅರ್ಥಶಾಸ್ತ್ರ?? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ!! ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ. ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!!

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರುYstTax ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ‘ ಅವಿವೇಕʼ ಕರ್ನಾಟಕ ಕಾಂಗ್ರೆಸ್‌ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ.

ವೆಸ್ಟ್‌ʼಎಂಡ್‌ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್‌ ಎಕನಾಮಿಸ್ಟ್‌ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ! ಎಂದು ಅಚ್ಚರಿಯಾಗಿ ಪ್ರಶ್ನಿಸಿದೆ ಜೆಡಿಎಸ್‌.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ