NEWSನಮ್ಮರಾಜ್ಯರಾಜಕೀಯ

ಡ್ರೋನ್‌ ಸರ್ವೇ ಅಕ್ರಮ: ಆರ್.ಅಶೋಕ್‌ ವಿರುದ್ಧ ತನಿಖೆಗೆ ಜಗದೀಶ್‌ ವಿ ಸದಂ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡ್ರೋನ್‌ ಸರ್ವೇ ಕಾರ್ಯದಲ್ಲಿ ಅಕ್ರಮವಾಗಿದೆಯೆಂದು ಐಪಿಎಸ್‌ ಅಧಿಕಾರಿ ಡಿ. ರೂಪಾ ಮೌದ್ಗಿಲ್‌ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕಂದಾಯ ಸಚಿವ ಆರ್‌.ಅಶೋಕ್‌ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ. ಸದಂ ಆಗ್ರಹಿಸಿದ್ದಾರೆ.

ಮಾಧ್ಯಮಗಳ ಜತೆ ಮಾತನಾಡಿದ ಜಗದೀಶ್‌ ವಿ ಸದಂ, “ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿರುವ 423 ಕೋಟಿ ರೂಪಾಯಿ ಮೊತ್ತದ ಡ್ರೋನ್‌ ಸರ್ವೇ ಯೋಜನೆಯಲ್ಲಿ ಅಕ್ರಮ ನಡೆದಿದೆ. ತಮಗೆ ಬೇಕಾದ ರೀತಿಯಲ್ಲಿ ಟೆಂಡರ್‌ ಮಾರ್ಗಸೂಚಿಗಳನ್ನು ರೂಪಿಸಿಕೊಂಡು, ತಮಗೆ ಬೇಕಾದವರಿಗೆ ಟೆಂಡರ್‌ ನೀಡುತ್ತಿದ್ದಾರೆ.

5000 ಚದರ ಕಿಲೋಮೀಟರ್‌ ವ್ಯಾಪ್ತಿಯನ್ನು 1000 ಚದರ ಕಿಲೋಮೀಟರ್‌ಗೆ ಇಳಿಕೆ ಮಾಡಿದ್ದಾರೆ. ಗುತ್ತಿಗೆಯನ್ನು ತುಂಡುಗುತ್ತಿಗೆಯಾಗಿ ಮಾರ್ಪಾಡು ಮಾಡಿ, 1.5 ಕೋಟಿ ರೂಪಾಯಿಯಿಂದ 8 ಕೋಟಿ ರೂಪಾಯಿ ಮೊತ್ತದ ಟೆಂಡರ್‌ಗಳನ್ನಾಗಿ ಮಾಡಿದ್ದಾರೆ. ಆರ್ಥಿಕ ಇಲಾಖೆಯ ಗಮನಕ್ಕೆ ತರಬೇಕೆಂಬ ನಿಯಮವನ್ನು ಗಾಳಿಗೆ ತೂರಿದ್ದಾರೆ.

ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರು ಮಾಡಿರುವ ಆ ಆರೋಪಗಳನ್ನು ಗಮನಿಸಿದರೆ ಭಾರೀ ಪ್ರಮಾಣದ ಕಿಕ್‌ಬ್ಯಾಕ್‌ ಪಡೆದಿರುವ ಸಂಶಯ ವ್ಯಕ್ತವಾಗುತ್ತಿದೆ. ಇದರಲ್ಲಿ ಸಚಿವ ಆರ್‌.ಅಶೋಕ್‌, ಐಎಎಸ್‌ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಮನೀಶ್‌ ಮೌದ್ಗಿಲ್ ಪಾತ್ರದ ಕುರಿತು ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಡ್ರೋನ್‌ ಸರ್ವೇ ಮಾಡಿಸಲು ಎರಡನೇ ಹಂತದಲ್ಲಿ ಟೆಂಡರ್‌ ಕರೆಯಲು ಸಿದ್ಧತೆ ನಡೆಸಿಕೊಂಡಿರುವ ಮನೀಶ್‌ ಅವರು ಆರವ್‌ ಎನ್ನುವ ಸಂಸ್ಥೆಗೆ ಸಹಾಯ ಮಾಡಲು ಮಾರ್ಗಸೂಚಿಗಳನ್ನು ಬದಲಾಯಿಸಿದ್ದಾರೆ. ಈ ಹಿಂದಿನ ಗುತ್ತಿಗೆಗಳಿಗೆ ಗುತ್ತಿಗೆದಾರರಾಗಿದ್ದ ಸಂಸ್ಥೆಗಳಿಗೆ ಈ ಆರವ್‌ ಸಂಸ್ಥೆಯು ಸಬ್‌ ಕಂಟ್ರ್ಯಾಕ್ಟರ್‌ ಆಗಿತ್ತು.

ಆದರೆ ಈಗ ಪ್ರಮುಖ ಸಂಸ್ಥೆಗಳಿಗೇ ಟೆಂಟರ್‌ ಸಿಗದಂತೆ ಮಾರ್ಗಸೂಚಿಗಳನ್ನು ರೂಪಿಸುವ ಮೂಲಕ ಅಕ್ರಮ ನಡೆಸಿದ್ದಾರೆ. ಮನೀಶ್‌ ಅವರ ಪತ್ನಿಯಾಗಿರುವ ರೂಪಾ ಮೌದ್ಗಿಲ್‌ ಅವರೇ ಈ ವಿಷಯವನ್ನು ಬಹಿರಂಗಪಡಿಸಿದ್ದು, ತಕ್ಷಣವೇ ಟೆಂಡರ್‌ ಪ್ರಕ್ರಿಯೆಯನ್ನು ರದ್ದುಪಡಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಸದಂ ಒತ್ತಾಯಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು