NEWSನಮ್ಮರಾಜ್ಯಸಂಸ್ಕೃತಿ

ಡಾ. ಬಿ.ಆರ್. ಅಂಬೇಡ್ಕರ್ ಜೀವನ-ಹೋರಾಟ ಸ್ಫೂರ್ತಿಯಾಗಬೇಕು

ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿದ ಸಿಎಂ ಯಡಿಯೂರಪ್ಪ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟ ಯುವಜನಾಂಗಕ್ಕೆ ಸ್ಪೂರ್ತಿಯಾಗಬೇಕು. ಯುವಜನತೆಯು ಡಾ.ಬಿ.ಆರ್.  ಅಂಬೇಡ್ಕರ್ ಅವರ  ಆದರ್ಶ ಹಾಗೂ  ಚಿಂತನೆಗಳನ್ನು  ಅನುಸರಿಸಬೇಕು  ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದರು.

ವಿಧಾನಸೌಧದ ಎದುರಿಗೆ ಇರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಅವರ 129 ನೇ ಜನ್ಮ ದಿನಾಚಣೆಯ ಅಂಗವಾಗಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರದು ಬಹುಮುಖಿ ಸಾಮಥ್ರ್ಯದ ಅಸಾಧಾರಣ ವ್ಯಕ್ತಿತ್ವ. ಶ್ರೇಷ್ಠ ಆರ್ಥಿಕ ತಜ್ಞ.  ಸಾಮಾಜಿಕ ಪರಿವರ್ತನೆಯ ಹರಿಕಾರ,  ಸಮಾನತೆಯ ಹರಿಕಾರ. ತಳಸಮುದಾಯಗಳ ವಿಮೋಚಕಾಗಿದ್ದಾರೆ.

ಭಾರತ ಸಂವಿಧಾನದ ಉದಾರವಾದಿ. ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರದ ಚಿಂತಕರಲ್ಲಿ ಪ್ರಮುಖ ಹೆಸರು ಇವರದ್ದಾಗಿದೆ.  ಎಲ್ಲಾ ಬಗೆಯ ತಾರತಮ್ಯಗಳನ್ನು ಇನ್ನಿಲ್ಲವಾಗಿಸುವುದು ಮತ್ತು ಜ್ಯಾತ್ಯತೀತ ಭಾರತ ನಿರ್ಮಾಣ ಮಾಡುವುದು ಅವರ ಕನಸು ಆಗಿತ್ತು. ಧಮನಿತರ ಧ್ವನಿಯಾಗಿ, ಶೋಷಿತರಿಗೆ ಕಿವಿಯಾಗಿ, ಅವರೆಲ್ಲರಿಗೆಗೂ  ಸ್ವಾಭಿಮಾನದ ಬದುಕಿನ ದಾರಿ ತೋರಿಸಿದ ಧೀಮಂತ ನಾಯಕರಾಗಿದ್ದಾರೆ. ಅನ್ಯಾಯ, ಅಸಮಾನತೆ ಮತ್ತು ಶೋಷಣೆಯ ವಿರುದ್ಧ ಎಲ್ಲಾ ಚಳುವಳಿಗಳಿಗೆ ಇಂದಿಗೂ  ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳೇ ಬಳುವಳಿಯಾಗಿವೆ ಎಂದರು.

ಇನ್ನಷ್ಟು ಅಧ್ಯಯನವಾಗಬೇಕು

ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಇನ್ನಷ್ಟು ಅಧ್ಯಯನವಾಗಬೇಕು.  ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಹೊತ್ತು ಭಾರತ ಸಂವಿಧಾನವನ್ನು ಇತರ ದೇಶಗಳು ಅನುಸರಿಸುತ್ತಿವೆ  ಹಾಗೂ  ಅನುಕರಿಸುತ್ತಿವೆ.  ತಮ್ಮ ನೇತೃತ್ವದ ರಾಜ್ಯ ಸರ್ಕಾರ ಡಾ. ಬಿ.ಆರ್.ಅಂಬೇಡ್ಕರ್ ಅವರ ಆಶಯಗಳಿಗೆ ಬದ್ದವಾಗಿದೆ. ಅವರ ತತ್ವ ಆದರ್ಶಗಳ ಹಾದಿಯಲ್ಲಿ ನಡೆಯುವ ದೃಡ ಸಂಕಲ್ಪ ಹೊಂದಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದರು.

ಅಂಬೇಡ್ಕರ್ ಪ್ರತಿಮೆಗೆ ಗಣ್ಯರಿಂದ ಮಾಲಾರ್ಪಣೆ

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಗೃಹ  ಸಚಿವ ಬಸವರಾಜ್ ಬೊಮ್ಮಾಯಿ, ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ  ಗೋಪಾಲಯ್ಯ,  ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್,  ಡಿ.ಎಸ್. ವೀರಯ್ಯ,  ಮಾಜಿ ಸಚಿವ ಆಂಜನೇಯ ಅವರು ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಮುಖ್ಯಕಾರ್ಯದರ್ಶಿ, ಟಿ.ಎಂ. ವಿಜಯಬಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಕುಮಾರ್ ನಾಯಕ್, ಆಯುಕ್ತ  ಆರ್. ಎಸ್. ಪೆದ್ದಪ್ಪಯ್ಯ,  ಎಸ್ಸಿಪಿ ಮತ್ತು ಟಿಎಸ್ಪಿಯ ಯೋಜನೆಯ ಸಲಹೆಗಾರ ಇ. ವೆಂಕಟಯ್ಯ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ,  ವಿವಿಧ  ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಅಧಿಕಾರಿಗಳು  ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ