NEWSವಿದೇಶ

ಡೆಡ್ಲಿ ಕೊರೊನಾಗೆ ಎಸ್ಸೆಸ್ಸೆಲ್ಸಿ ಸೇರಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಭಾರತ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಜನತಾ ಕರ್ಫ್ಯೂಗೆ ದೇಶವಾಸಿಗಳ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ,  ಯಾವುದೇ ಚುನಾವಣೆಗಳಿದ್ದರು ಅದನ್ನು ಮುಂದೂಡಲಾಗುವುದು, ಜತೆಗೆ ದೇಶಿಯ ಪ್ರಯಾಣಿಕರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಇಡೀಪ್ರಪಂಚವನ್ನೇ ಆವರಿಸುವುದರಿಂದ ಭವಿಷ್ಯದ ಪ್ರಜೆಗಳಿಗೆ ಇರುವ  SSLC ಪರೀಕ್ಷೆ ಸೇರಿ ಎಲ್ಲಾ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿವರೆಗೆ  ಮುಂದೂಡಲಾಗುವುದು. ಕೊರೊನಾ ಪೀಡಿತರು ಸೇರಿ ಯಾವುದೇ ವ್ಯಕ್ತಿ ರಾಜ್ಯದ ಗಡಿಗಳನ್ನು ದಾಟದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಕರ್ನಾಟಕ ಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು  ಹೇಳಿದರು.

ಜನತಾ ಕರ್ಫ್ಯೂಗೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೋಟೆನಾಡು ಚಿತ್ರದುರ್ಗ ಎಲ್ಲಾ ಜಿಲ್ಲೆಗಳು ಸ್ತಬ್ಧವಾಗಿವೆ. ತರಕಾರಿ ಮಾರುಕಟ್ಟೆ, ಅಂಗಡಿ, ಹೊಟೇಲ್ ಗಳು ಬಂದ್ ಆಗಿವೆ.

ಸಣ್ಣ ಹಳ್ಳಿಗಳಲ್ಲೂ ಅಂಗಡಿ ಹೋಟೆಲ್‌ಗಳನ್ನು ಬಂದ್‌ ಮಾಡಲಾಗಿದೆ. KSRTC, BMTC ಬಸ್‌ಗಳು ರಸ್ತೆಗಿಳಿಯದ ಕಾರಣ ಮೆಜೆಸ್ಟಿಕ್ ಸಂಪೂರ್ಣ ಬಂದ್ ಆಗಿದೆ. ಇದಕ್ಕೆ ಬೆಂಬಲವಾಗಿ ಆಟೋ, ಟ್ಯಾಕ್ಸಿ ಇತರ ವಾಹನಗಳೂ ರಸ್ತೆಗಿಳಿದ್ದಿಲ್ಲ.

ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಕೊರೊನಾ ಪೀಡಿತರ ಸಂಖ್ಯೆ 21ಕ್ಕೆ ಏರಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ