NEWSನಮ್ಮರಾಜ್ಯಸಂಸ್ಕೃತಿ

ಡಾ. ಬಾಬು ಜಗಜೀವನ ರಾಮ್ ಆದರ್ಶ ಪಾಲಿಸಿ

ಯುವಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಹಸಿರು ಕ್ರಾಂತಿಯ  ಹರಿಕಾರ , ಮಾಜಿ ಉಪಪ್ರಧಾನ ಮಂತ್ರಿ ದಿ. ಡಾ. ಬಾಬು ಜಗಜೀವನ ರಾಮ್ ಅವರ ಆದರ್ಶಗಳು, ವಿಚಾರಧಾರೆಗಳು ಎಂದೆಂದೂ ಮಾದರಿಯಾಗಿದ್ದು,  ಅವರ ವಿಚಾರಧಾರೆಗಳನ್ನು ಯುವಪೀಳಿಗೆಯು ಅಧ್ಯಯನ ಮಾಡಿ, ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಯುವಕರಿಗೆ ಕರೆ ನೀಡಿದರು.

ಇಂದು ಡಾ. ಬಾಬು ಜಗಜೀವನ ರಾಮ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿ ಸುದ್ದಿಗಾರೊಂದಿಗೆ ಮಾತನಾಡಿದರು.

ಸ್ವಾತಂತ್ರ್ಯಾ ನಂತರ ದೇಶದಲ್ಲಿ ಆಹಾರ ಸಮಸ್ಯೆ ತಲೆದೂರಿ ಜನತೆ ತಲ್ಲಣಗೊಂಡ ಸಂದರ್ಭದಲ್ಲಿ ಸುಧಾರಿತ ಬಿತ್ತನೆ ಬೀಜಗಳ ತಳಿಗಳನ್ನು ಬಳಕೆ ಮಾಡುವ ಮೂಲಕ ಕೃಷಿ ವಲಯದಲ್ಲಿ ಪ್ರಗತಿ ಸಾಧಿಸಿ, ಹಸಿರು ಕ್ರಾಂತಿ ಮಾಡಿದರು ಎಂದರು.

ಆಹಾರ ಉತ್ಪಾದನೆಯಲ್ಲಿ ಅಪರಿಮಿತ ಸಾಧನೆಗೈದರು. ಇದರಿಂದ ಜನತೆಯ ಹಸಿವನ್ನು ನೀಗಿಸಲಾಯಿತು. ಡಾ. ಬಾಬು ಜಗಜೀವನ ರಾಮ್ ಅವರು  ಹಸಿರು ಕ್ರಾಂತಿಯ ಹರಿಕಾರರೆಂದೇ ಹೆಸರುವಾಸಿಯಾದರು.  ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೃಷಿ ಸಚಿವರಾಗಿ ಅಮೋಘ ಸೇವೆ ಸಲ್ಲಿಸಿದ್ದಾರೆ. ಕೇಂದ್ರ  ರಕ್ಷಣಾ ಸಚಿವರಾಗಿ ಮಾಡಿದ ಸಾಧನೆ  ಉಲ್ಲೇಖನೀಯವಾದುದು. ರೈತ ಮತ್ತು ಯೋಧ ಇವರ ಸಲುವಾಗಿ ಅವರು ಶ್ರಮಿಸಿದ ಶ್ರಮ ಅಪರಿಮಿತವಾದುದು.  ಕೃಷಿ, ರಕ್ಷಣಾ ವಲಯದಲ್ಲಿ ಅವರ  ಮಾರ್ಗದರ್ಶನ, ನಾಯಕತ್ವ ಅವಿಸ್ಮರಣೀಯವಾದುದು ಎಂದರು.

ಅವರು ದೇಶ ಕಂಡ ಅಪರೂಪದ ರಾಷ್ಟ್ರ ನಾಯಕರಾಗಿದ್ದಾರೆ. ಶೋಷಿತರ ಹಕ್ಕಿಗಾಗಿ ನಿರಂತರ ಶ್ರಮವಹಿಸಿ, ಶೋಷಿತರ ಏಳಿಗಾಗಿ ಅಪಾರವಾಗಿ ಶ್ರಮಿಸಿ ಶೋಷಿತರ ಆಶಾಕಿರಣವಾಗಿದ್ದಾರೆ. ಯುವ ಪೀಳಿಗೆಯು ಡಾ. ಬಾಬು ಜಗಜೀವನ ರಾಮ್ ಅವರ ಕುರಿತು ಅಧ್ಯಯನ ಮಾಡಿ, ಅವರ ಆದರ್ಶಗಳನ್ನು ಅನುಸರಿಸಬೇಕು. ಅವರ ಸಾಮಾಜಿಕ ಮತ್ತು ರಾಜಕೀಯ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ವಸತಿ ಸಚಿವರಾದ ವಿ. ಸೋಮಣ್ಣ ಡಾ. ಬಾಬು ಜಗಜೀವನ ರಾಮ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಸಂಸದ  ನಾರಾಯಣ ಸ್ವಾಮಿ, ಮಾಜಿ ಸಚಿವ ಎಚ್. ಆಂಜನೇಯ,  ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್,  ಪ್ರಗತಿ ಪರ  ಸಂಘಟನೆಗಳ  ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ