ಬೆಂಗಳೂರು: ಎನ್ಎಸಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿಸೆಂಬರ್ 1ರಂದು ಬೆಳಗ್ಗೆ 8ಗಂಟೆಗೆ ಲಾಲ್‌ಬಾಗ್ ಆವರಣದಲ್ಲಿ 83ನೇ ಮಾಸಿಕ ಸಭೆ ಆಯೋಜನೆ ಮಾಡಲಾಗಿದೆ.
ಈ ಸಭೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿರವರು, ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳು/ ಸದಸ್ಯರು ಭಾಗವಹಿಸಲಿದ್ದು, ಮುಖಂಡರು ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.
ಹೀಗಾಗಿ ಎಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ಆಯೋಜಿಸಿದರುವ ಈ ಸಭೆಯಲ್ಲಿ ವಿವಿಧ ಅಂಶಗಳ ಬಗ್ಗೆ ಚರ್ಚಿಸಲು ಎಲ್ಲ ನಿವೃತ್ತ ನೌಕರರು ಭಾಗವಹಿಸಬೇಕೆಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ನಂಜುಂಡೇಗೌಡ ವಿನಂತಿಸಿಕೊಂಡಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)