NEWSನಮ್ಮರಾಜ್ಯಶಿಕ್ಷಣ-

ಡಿ.28ರಿಂದಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭ – ಫೆ.28ಕ್ಕೆ ಪೂರ್ಣ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಡಿ.28ರಿಂದಲೇ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಫೆ.28ಕ್ಕೆ ಮುಕ್ತಾಯವಾಗಲಿದೆ. ಈ ಸಂಬಂಧ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ–2020 ಜಾರಿಗೊಳಿಸಿ ಸೋಮವಾರ ಅಧಿಸೂಚನೆ ಹೊರಬಿದಿದ್ದು, ಹಲವು ವರ್ಷಗಳಿಂದ ಬಿಗಿಯಾದ ನೀತಿಗೆ ಒಳಪಟ್ಟಿದ್ದ ಶಿಕ್ಷಕರ ವರ್ಗಾವಣೆ ನಿಯಮಗಳು ಸರಳೀಕರಣವಾಗಿವೆ. ಹೀಗಾಗಿ ಶಿಕ್ಷಕಸ್ನೇಹಿ ವರ್ಗಾವಣೆಗೆ ಅಧಿಕೃತ ಮುದ್ರೆ ಬಿದ್ದಿದೆ. ವರ್ಗಾವಣಾ ವೇಳಾ ಪಟ್ಟಿಯೂ ಬಿಡುಗಡೆಯಾಗಿದೆ.

ಯಾವುದೇ ಒಂದು ಘಟಕ ಹಾಗೂ ವೃಂದದಲ್ಲಿ ಕನಿಷ್ಠ 10 ವರ್ಷ ಅಥವಾ ಎಲ್ಲ ವೃಂದಗಳೂ ಸೇರಿ 15 ವರ್ಷ ಕೆಲಸ ಮಾಡಿದ ಶಿಕ್ಷಕರನ್ನು ಶೇ. 25ರಷ್ಟು ಮಿತಿಯ ಒಳಗೆ ಖಾಲಿ ಹುದ್ದೆಗಳಿರುವ ವಲಯಗಳಿಗೆ ವರ್ಗಾವಣೆ ಮಾಡಲು ಅವಕಾಶ ಇರುತ್ತದೆ. ವಲಯಗಳ ವರ್ಗಾವಣೆ ಪೂರ್ಣಗೊಂಡ ನಂತರ ಹೊರ ಜಿಲ್ಲೆಗಳ ವರ್ಗಾವಣೆ ಕೋರಿಕೆಗಳನ್ನು ಪರಿಗಣಿಸಲು ಅವಕಾಶ ನೀಡಲಾಗಿದೆ.

ಇನ್ನು ಕಾಯ್ದೆ ತಿದ್ದುಪಡಿಯ ಕರಡು ಅಧಿಸೂಚನೆಗೆ ಸಲ್ಲಿಕೆಯಾದ ಪ್ರಮುಖ ಆಕ್ಷೇಪಣೆಗಳಿಗೂ ಮನ್ನಣೆ ನೀಡಿರುವ ಸರ್ಕಾರ, 10ರಿಂದ 20 ವರ್ಷ ಸೇವೆ ಸಲ್ಲಿಸಿ ಪದೋನ್ನತಿ ಪಡೆದ ಶಿಕ್ಷಕರ ಕೋರಿಕೆಯಂತೆ ಸೇವಾ ಅಂಕಗಳನ್ನು ನೀಡಿದೆ. ಗ್ರಾಮೀಣ ಪ್ರದೇಶದಲ್ಲಿ (ಸಿ ವಲಯ) ಸೇವೆ ಸಲ್ಲಿಸಿದವರಿಗೆ ಪ್ರತಿ ವರ್ಷಕ್ಕೆ ಮೂರು ಅಂಕಗಳು, ಅರೆನಗರದ (ಬಿ ವಲಯ) ಶಿಕ್ಷಕರಿಗೆ ಎರಡು ಅಂಕಗಳು ಹಾಗೂ ನಗರ ಪ್ರದೇಶಗಳ (ಎ ವಲಯ) ಶಿಕ್ಷಕರಿಗೆ ಒಂದು ಸೇವಾ ಅಂಕಗಳನ್ನು ನೀಡಲು ಸಮ್ಮತಿಸಲಾಗಿದೆ.

ಅತ್ತ ಸಾರ್ವತ್ರಿಕ ವರ್ಗಾವಣೆ ವೇಳೆ ಒಟ್ಟು ವೃಂದ ಬಲದ ಶೇಕಡ 11ರಷ್ಟು ಮಿತಿಯ ಒಳಗೆ ಮಾತ್ರ ವರ್ಗಾವಣೆ ಮಾಡಲು ಅವಕಾಶ ನೀಡಲಾಗಿದೆ. ವಿಶೇಷ ಆದ್ಯತೆಯಡಿ ವರ್ಗಾವಣೆ ಬಯಸುವವರಿಗೆ ಈ ನಿಯಮ ಅನ್ವಯವಾಗದು. ಉಳಿದೆಲ್ಲ ನಿಯಮಗಳು ಈಗಾಗಲೇ ಕಾಯ್ದೆಯಲ್ಲಿರುವಂತೆ ಮುಂದುವರಿಯಲಿವೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ವಿವರಿಸಿದೆ.

ಅಲ್ಲದೆ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳು (371 ಜೆ ಅನ್ವಯ), ಮಲೆನಾಡು ವಲಯ ಹಾಗೂ ನಂಜುಂಡಪ್ಪ ವರದಿಯ ಅನ್ವಯ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂದು ಗುರುತಿಸಲಾಗಿರುವ ತಾಲೂಕುಗಳಿಗೆ ಹೋಗಬಯಸುವವರಿಗೆ ವಿಶೇಷ ಆದ್ಯತೆ ದೊರೆಯಲಿದೆ.

ಇದೇ ಡಿ.28ರಿಂದಲೇ ವರ್ಗಾವಣೆ ಆರಂಭ: ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿಯನ್ನು ಡಿ.28ರಂದು ಪ್ರಕಟಿಸಲಾಗುತ್ತಿದೆ. ಜ.12 ಖಾಲಿ ಹುದ್ದೆಗಳ ಪಟ್ಟಿ ಪ್ರಕಟ, ಜ. 17 ವಲಯ ಹಂತದಲ್ಲಿ ಕೌನ್ಸೆಲಿಂಗ್ ಆರಂಭವಾಗಲಿವೆ. ಜ.6ರಿಂದ ತಾಂತ್ರಿಕ ಸಹಾಯಕ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಿ, 24ರಂದು ಮುಕ್ತಾಯವಾಗಲಿವೆ.

ಸಾಮಾನ್ಯ ಕೋರಿಕೆ ವರ್ಗಾವಣೆಗಳು ಜ.2ರಿಂದ ಆರಂಭವಾಗಿ ಫೆ.4ಕ್ಕೆ ಮುಕ್ತಾಯವಾಗಲಿವೆ. ಜ.6ರಿಂದ ಪ್ರಾಥಮಿಕ ಶಿಕ್ಷಕರ ಹಾಗೂ 9ರಿಂದ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಹಂತದ ವರ್ಗಾವಣೆ ಪ್ರಕ್ರಿಯೆಗಳು ಆರಂಭವಾಗಲಿದ್ದು, ಫೆ. 13ಕ್ಕೆ ಪೂರ್ಣಗೊಳ್ಳಲಿವೆ.

ವಿಭಾಗೀಯ ಹಂತದ ವರ್ಗಾವಣೆಗಳು ಪ್ರಾಥಮಿಕ ಶಿಕ್ಷಕರಿಗೆ ಫೆ.14ರಿಂದ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಫೆ.18ರಿಂದ ಆರಂಭವಾಗಲಿವೆ. ಅಂತರ್‌ ವಿಭಾಗೀಯ ವರ್ಗಾವಣೆಗಳು ಫೆ. 21ರಿಂದ ಆರಂಭವಾಗಿ 28ಕ್ಕೆ ಪೂರ್ಣಗೊಳ್ಳಲಿವೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ