NEWSಆರೋಗ್ಯ

ತಬ್ಲೀಘಿ ಜಮಾತ್‌ ಸದಸ್ಯರು ಆರೋಗ್ಯ ತಪಾಸಣೆಗೆ ಒಳಪಡಿ

ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿ ಸಿಇಒ ಇಸ್ಲಾಹುದ್ದೀನ್‌ ಜೆ ಗಡ್ಯಾಲ್‌ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾರ್ಚ್‌ನಲ್ಲಿ ನ್ಯೂಡೆಲ್ಲಿ ಮರ್ಕಜ್‌ ಹಝರತ್‌ ನಿಝಾಮುದ್ದೀನ್‌ನಲ್ಲಿ ತಬ್ಲೀಘಿ ಜಮಾತ್‌ ಸಮಾವೇಶಕ್ಕೆ ಹೋಗಿ ಬಂದವರು ಆರೋಗ್ಯ ತಪಾಣೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಔಕಾಫ್‌ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇಸ್ಲಾಹುದ್ದೀನ್‌ ಜೆ ಗಡ್ಯಾಲ್‌ ತಿಳಿಸಿದ್ದಾರೆ.

ಸಮಾವೇಶಕ್ಕೆ, ಕರ್ನಾಟಕ ರಾಜ್ಯದಿಂದ ಭಾರಿ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.  ಬಳಿಕ ತಮ್ಮ ನಗರಗಳಿಗೆ ಹಾಗೂ ಮನೆಗಳಿಗೆ ಮರಳಿದ್ದಾರೆ. ಈ ಸದಸ್ಯರು ಕೋವಿಡ್‌ 19 ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ.

ನ್ಯೂಡೆಲ್ಲಿಗೆ ಹೋಗಿದ್ದ ಎಲ್ಲರೂ ತಪ್ಪದೇ ಆರೋಗ್ಯ ಇಲಾಖೆಯ ಸಹಾಯವಾಣಿ 080-29711171ಗೆ ಸಂಪರ್ಕಿ ಅಥವಾ ಕೂಡಲೇ ಹತ್ತಿರದ ಜಿಲ್ಲಾ ಅಥವಾ ತಾಲೂಕು ಮಟ್ಟದ ಆಸ್ಪತ್ರೆಗೆ ಭೇಟಿ ನಿಡಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಈ ಸದಸ್ಯರು ಸ್ವಯಂ ಪ್ರೇರಣೆಯಿಂದ ಆರೋಗ್ಯ ಇಲಾಖೆಯ ಸಹಾಯವಾಣಿ ಆರೋಗ್ಯವನ್ನು 080-29711171ಗೆ ಸಂಪರ್ಕಿಸುವುದು ಅಥವಾ ಕೂಡಲೇ ಹತ್ತಿರದ ಜಿಲ್ಲಾ ಅಥವಾ ತಾಲೂಕು ಮಟ್ಟದ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುವುದು ಮತ್ತು ಇದು ಸಮುದಾಯದ ಹಿತದೃಷ್ಟಿಯಿಂದ ಕೂಡಲೇ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೋರಿದ್ದಾರೆ.

ಜಿಲ್ಲಾ ವಕ್ಫ್‌ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಅಧಿಕಾರಿಗಳು, ಆರೋಗ್ಯ ತಪಾಸಣೆಗೆ ಅಗತ್ಯವಾದ ನೆರವು ಒದಗಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ : 080-46848600, 66692000, 9745697456 ಸಹಾಯವಾಣಿ -ಟಾಲ್‌ ಫ್ರೀ -104 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...