NEWSಕೃಷಿ

ತರಕಾರಿ, ಕೃಷಿ ಉತ್ಪನ್ನ ಆಯಾ ತಾಲೂಕಿನ ಎಪಿಎಂಸಿಯಲ್ಲೇ ಮಾರಾಟ

 ರೈತರಲ್ಲಿ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಜಿಲ್ಲೆಯ ರೈತರು ತರಕಾರಿ ಸೇರಿದಂತೆ ಇತರೆ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಮಾರುಕಟ್ಟೆಗೆ ತರುವುದರಿಂದ ಹೆಚ್ಚಿನ ಜನಸಂದಣಿ ಉಂಟಾಗುತ್ತಿದೆ. ಆದಕಾರಣ ರೈತರು ಆಯಾ ತಾಲೂಕಿನ ಎಪಿಎಂಸಿ ಅಥವಾ ಸ್ಥಳೀಯ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ರೈತರಲ್ಲಿ ಮನವಿ ಮಾಡಿದ್ದಾರೆ.

ಕೋವಿಡ್-19 ಹರಡದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ ರೈತರು ತರಕಾರಿ ಮತ್ತಿತರ ಕೃಷಿ ಉತ್ಪನ್ನಗಳನ್ನು ಜಿಲ್ಲಾ ಎಪಿಎಂಸಿ ಪ್ರಾಂಗಣಕ್ಕೆ ತರುತ್ತಿರುವುದರಿಂದ ಇಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಆದ್ದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ದೃಷ್ಟಿಯಿಂದ ರೈತರು ಜಿಲ್ಲಾ ಕೇಂದ್ರ ಸ್ಥಾನಕ್ಕೆ ಆಗಮಿಸದೇ ಆಯಾ ತಾಲೂಕಿನ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ಸಾಗಿಸಬೇಕು ಎಂದು ತಿಳಿಸಿದ್ದಾರೆ.

ಮಾರಾಟಗಾರರಿಗೆ ನಿರ್ದಿಷ್ಟ ಸ್ಥಳ ನಿಗದಿ

ಜಿಲ್ಲಾ ಮುಖ್ಯ ಎಪಿಎಂಸಿ ಪ್ರಾಂಗಣದಲ್ಲಿ ಮಾರಾಟಗಾರರಿಗೆ  ನಿರ್ದಿಷ್ಟ ಸ್ಥಳಗಳನ್ನು ಒದಗಿಸಲಾಗಿದೆ. ಮಾರಾಟಗಾರರು ತಮಗೆ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ವ್ಯಾಪಾರ ನಡೆಸಬೇಕು. ಇದನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕೂಡ ನಿಯಮಾವಳಿ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ.

ಅದೇ ರೀತಿ ಸಾರ್ವಜನಿಕರು ನೇರವಾಗಿ ಎಪಿಎಂಸಿ ಪ್ರವೇಶಿಸುವುದನ್ನು ಕೂಡ ನಿಷೇಧಿಸಲಾಗಿದೆ. ಹಾಪಕಾಮ್ಸ್ ಹಾಗೂ ವರ್ತಕರ ಸಂಘದ ವತಿಯಿಂದ ತರಕಾರಿ ಮಾರಾಟಗಾರರಿಗೆ ಗಾಡಿ ವ್ಯವಸ್ಥೆ ಮಾಡಲಾಗಿದೆ. ಎಪಿಎಂಸಿ ಪ್ರಾಂಗಣದಿಂದ ತಳ್ಳುಗಾಡಿ ಮತ್ತಿತರ ವಾಹನಗಳ ಮೂಲಕ ತಮ್ಮ ತಮ್ಮ ಬಡಾವಣೆಗೆ ಬರುವ ವ್ಯಾಪಾರಿಗಳಿಂದಲೇ ಸಾರ್ವಜನಿಕರು ತರಕಾರಿಗಳನ್ನು ಖರೀದಿಸಬೇಕು ಎಂದು ತಿಳಿಸಿದ್ದಾರೆ.

ನಿತ್ಯ ಬಳಕೆಯ ವಸ್ತುಗಳ ಕೊರತೆ ಉಂಟಾಗದಂತೆ ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಲಾಕ್ ಡೌನ್ ಮಾರ್ಗಸೂಚಿಯ ಪ್ರಕಾರ ತಮ್ಮ ಮನೆಯಲ್ಲೇ ಉಳಿದುಕೊಂಡು ಕರೊನಾ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ