NEWSನಮ್ಮಜಿಲ್ಲೆನಮ್ಮರಾಜ್ಯ

ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ಬಾಕಿ ವಸೂಲಿ ಮಾಡಿ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕು ಎಂದು ಹೇಳಿದರು.

ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ. ಈ ಸಂಬಂಧ ಪ್ರತಿಯೊಬ್ಬರೂ ಬಾಕಿ ಆಸ್ತಿ ತೆರಿಗೆಯನ್ನು 30ನೇ ನವೆಂಬರ್ ಒಳಗಾಗಿ BBMPtax.karnataka.gov.in ಗೆ ಭೇಟಿ ನೀಡಿ ಪಾವತಿಸಬೇಕು. ಇಲ್ಲವಾದಲ್ಲಿ 1ನೇ ಡಿಸೆಂಬರ್ 2024 ರಿಂದ ಪಾವತಿಸಬೇಕಿರುವ ಬಾಕಿ ಆಸ್ತಿ ತೆರಿಗೆಯು ದುಪ್ಪಟ್ಟಾಗಲಿದೆ ಎಂಬುದರ ಬಗ್ಗೆ ನಾಗರೀಕರಿಲ್ಲಿ ಅರಿವು ಮೂಡಿಸಬೆಕೆಂದು ಸೂಚಿಸಿದರು.

ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ: ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ.

ಇ-ಖಾತಾ ಪಡೆಯುವ ವೀಡಿಯೋ ಬಿಡುಗಡೆ: ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtube.com/@bbmpcares?si=YStwr7xLhX5aRxFT ನಲ್ಲಿ ಕನ್ನಡ ಹಾಗೂ ಇಂಗ್ಲೀಷ್ ಎರಡೂ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವೀಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ. ಇದೇ ರೀತಿ ಇನ್ನಿತರೆ ವೀಡಿಯೋಗಳನ್ನು ಕೂಡಾ ಅಪ್ಲೋಡ್ ಮಾಡಲಿದ್ದು, ಪಾಲಿಕೆಯ ಯೂಟ್ಯೂಬ್ ಚಾನಲ್ ಅನ್ನು Subscribe ಮಾಡಿಕೊಳ್ಳಲು ನಾಗರೀಕರಲ್ಲಿ ಕೋರಿದೆ.

ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು: ಇ-ಖಾತಾ ಪಡೆಯಲು ತಾಂತ್ರಿಕ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವಲಯವಾರು 13 ಸಹಾಯ ತಂಡಗಳನ್ನು ರಚಿಸಲಾಗಿದೆ. ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅನಗತ್ಯವಾಗಿ ಕರೆ ಮಾಡದಿರಲು ವಿನಂತಿಸಿದೆ.

ವಲಯ – ಸಹಾಯವಾಣಿ ಸಂಖ್ಯೆ:
1. ಬೊಮ್ಮನಹಳ್ಳಿ ವಲಯ: 9480683182 / 9480683712
2. ದಾಸರಹಾಳ್ಳಿ ವಲಯ: 9480683710
3. ಮಹಾದೇವಪುರ ವಲಯ: 9480683718 / 9480683720
4. ಪೂರ್ವ ವಲಯ: 9480683203
5. ಪಶ್ಚಿಮ ವಲಯ: 9480683653 / 9480683204
6. ದಕ್ಷಿಣ ವಲಯ: 9480683638 / 9480683179
7. ರಾಜರಾಜೇಶ್ವರಿ ನಗರ ವಲಯ: 9480683576
8. ಯಲಹಂಕ ವಲಯ: 9480683645 / 9480683516

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಸ್ನೇಹಲ್, ಕರೀಗೌಡ, ಅರ್ಚನಾ, ರಮೇಶ್, ಗಿರೀಶ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ