NEWSನಮ್ಮಜಿಲ್ಲೆ

ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ

 ಖಾಸಗಿ ಕ್ಲಿನಿಕ್‍ಗಳ ತೆರೆದು, ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೀದರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿರುವ ಖಾಸಗಿ ಕ್ಲಿನಿಕ್‌ಗಳು ಮುಚ್ಚಿರುವುದಾಗಿ ತಿಳಿದು ಬಂದಿದ್ದು, ಕೂಡಲೇ ಎಲ್ಲ ಖಾಸಗಿ ಕ್ಲಿನಿಕ್‍ಗಳು ತೆರೆದು ಸಾಮಾನ್ಯ ಲಕ್ಷಣ ಕಂಡು ಬರುವ ರೋಗಿಗಳಿಗೆ ಚಿಕಿತ್ಸೆ ಒದಗಿಸುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ  ಡಾ.ಎಚ್.ಆರ್.ಮಹಾದೇವ್ ಡಿಎಚ್‍ಓ ಅವರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿ ತಾಲೂಕಿನ ತಹಸೀಲ್ದಾರ್ರು ಮತ್ತು ತಾಲೂಕುಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಕೊರೊನಾ ವೈರಾಣು ತೀವ್ರ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ವಹಿಸುವ ನಿಟ್ಟಿನಲ್ಲಿ ಜನತೆಗೆ ಈಗ ಸಕಾಲಕ್ಕೆ ಚಿಕಿತ್ಸೆ ಕೊಡಬೇಕಿದೆ. ಹೀಗೆ ತಿಳಿಸಿದಾಗ್ಯೂ ಖಾಸಗಿ ಆಸ್ಪತ್ರೆಗಳು ಮುಚ್ಚಿದಲ್ಲಿ ಅಂತಹ  ಖಾಸಗಿ ಕ್ಲಿನಿಕ್‍ಗಳ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿದೇಶ, ಹೊರರಾಜ್ಯಗಳಿಂದ ಬಂದು ಹೋಮ್ ಕ್ವಾರಂಟೈನದಲ್ಲಿರುವವರತ್ತ ಸರಿಯಾದ ರೀತಿಯಲ್ಲಿ ಗಮನ ಕೊಡಬೇಕು ಎಂದು ಎಲ್ಲ ತಾಲೂಕು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಸಾಮಾನ್ಯ ರೋಗಿಗಳು ಬಂದರೂ ಕೂಡ ಅಂತರ ಕಾಯ್ದುಕೊಂಡು ಅವರಿಗೆ ತಪಾಸಣೆ ಮಾಡಬೇಕು ಎಂದು ಸಲಹೆ ಮಾಡಿದರು.

ಜಿಲ್ಲೆಯಲ್ಲಿ ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ. ಅಲ್ಲಿ ಕಾರ್ಯನಿರತರ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡುಬೇಕು ಎಂದು ಜಿಲ್ಲಾಧಿಕಾರಿಗಳು ತಹಸೀಲ್ದಾರ ಅವರಿಗೆ ಸೂಚಿಸಿದರು. ಇದಕ್ಕಾಗಿ ಚೆಕ್‍ಪೋಸ್ಟ ಹತ್ತಿರ ಇರುವ ವಸತಿ ನಿಲಯಗಳು ಮತ್ತು ಅಂಗನವಾಡಿಗಳನ್ನು ಗುರುತಿಸಿ ಸಿಇಓ ಅವರಿಗೆ ಮಾಹಿತಿ ನೀಡಿ, ಊಟದ ವ್ಯವಸ್ಥೆ ಮಾಡಲು ಕ್ರಮ ವಹಿಸಬೇಕು ಎಂದರು.

ಸಿಇಓ ಜ್ಞಾನೇಂದ್ರಕುಮಾರ ಗಂಗವಾರ, ಬೀದರ ಸಹಾಯಕ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿ.ಜಿ.ರೆಡ್ಡಿ, ಬ್ರಿಮ್ಸ್ ನಿರ್ದೇಶಕ ಡಾ.ಶಿವಕುಮಾರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶರಣಬಸಪ್ಪ ಕೋಟಪ್ಪಗೋಳ, ನಗರಸಭೆ ಪೌರಾಯುಕ್ತ ಬಸಪ್ಪ, ಜಿಲ್ಲಾ ವೈದ್ಯಾಧಿಕಾರಿಗಳಾದ ಡಾ.ರತಿಕಾಂತ ಸ್ವಾಮಿ, ಇಂದುಮತಿ ಪಾಟೀಲ, ಜಿಲ್ಲಾ ಕಣ್ಗಾವಲು ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ಕೃಷ್ಣಾರೆಡ್ಡಿ ಹಾಗೂ ಇತರರು ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ