NEWSನಮ್ಮಜಿಲ್ಲೆ

ತೀವ್ರ ಶ್ವಾಸಕೋಶ-ಜ್ವರ ಲಕ್ಷಣವುಳ್ಳವರ ಸಮೀಕ್ಷೆ ನಡೆಸಿ

ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ  ಸಲಹೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ತೀವ್ರ ತರವಾದ ಶ್ವಾಸಕೋಶದ ಸೋಂಕು, ನೆಗಡಿ, ಕೆಮ್ಮು, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚಲು ಆಶಾ ಕಾರ್ಯಕರ್ತೆಯರು, ಎಎನ್‍ಎಮ್ ಮತ್ತು ಬಿಎಲ್‍ಒ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನಗರದ ನೂತನ ಪ್ರವಾಸ ಮಂದಿರದಲ್ಲಿಂದು ಕೋವಿಡ್-19 ನಿಯಂತ್ರಣ ಕುರಿತಂತೆ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಂಟೇನ್ಮೆಂಟ್ ವಲಯದಲ್ಲಿ ಮಾತ್ರ ಈ ರೀತಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇನ್ನು ಮುಂದೆ ಜಿಲ್ಲೆಯಾದ್ಯಂತ ಮನೆಮನೆಗೆ ಭೇಟಿ ನೀಡುವ ಮೂಲಕ ತೀವ್ರ ತರವಾದ ಶ್ವಾಸಕೋಶದ ತೊಂದರೆ, ನೆಗಡಿ, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚುವ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಹಿರಿಯ ನಾಗರಿಕರು, ಗರ್ಭಿಣಿ ಮಹಿಳೆಯರು, ಸಕ್ಕರೆ ಕಾಯಿಲೆ ಹೊಂದಿದವರು ಮತ್ತು ಡಯಾಲಿಸಿಸ್ ರೋಗಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 35 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ. ಇನ್ನುಳಿದ 32 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಲಕ್ಷಣಗಳು ಕಂಡು ಬರದೇ ಇರುವುದು ಆಶಾದಾಯಕ ಬೆಳವಣಿಗೆಯಾಗಿದೆ  ಎಂದರು.

ಇನ್ನೊಬ್ಬ ರೋಗಿ ಆಕ್ಸಿಜನ್ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಕೋವಿಡ್-19 ಕಟ್ಟಿಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಪರಿಣಾಮಕಾರಿಯಾಗಿವೆ. ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 1033 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ಪತ್ತೆ ಹಚ್ಚಲಾಗಿದೆ. ಸರ್ಕಾರದ ನಿರ್ದೇಶನದಂತೆ ಅವರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಯ ಜೊತೆಗೆ ರೈತರ ಬೆಳೆಗಳಿಗೂ ವಿಶೇಷ ಗಮನ ನೀಡುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಸಲಹೆ ಹಿನ್ನೆಲೆ ತೋಟಗಾರಿಕಾ ಬೆಳೆಗಳಾದ ಕಲ್ಲಂಗಡಿ, ದಾಳಿಂಬೆ, ಪಪ್ಪಾಯಿ, ಕರಬೂಜ ಸೇರಿದಂತೆ ಇತರೆ ಬೆಳೆಗಳಿಗೆ ರೈತರ ಅನುಕೂಲಕ್ಕಾಗಿ ಆವರ್ತ ನಿಧಿ ಮಾದರಿಯಲ್ಲಿ ಸೌಲಭ್ಯ ಕಲ್ಪಿಸಲು ಸೂಕ್ತ ಪ್ರಸ್ತಾವನೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಜಿಲ್ಲೆಯಲ್ಲಿ ಖರೀದಿದಾರರು ಮತ್ತು ರೈತರ ಮಧ್ಯೆ ಸಂಪರ್ಕ ಜಾಲ ರೂಪಿಸಿ ಸೂಕ್ತ ಬೆಲೆ ಕಲ್ಪಿಸುವ ಕುರಿತಂತೆ ಶಾಸಕ ಅರುಣ ಶಹಾಪೂರ ಅವರ ಸಲಹೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಅದರಂತೆ ಉಜನಿ ಜಲಾಶಯದಿಂದ ಭೀಮಾ ನದಿಗೆ ಬಿಡಲಾದ ನೀರು ಅಕ್ಕಲಕೋಟೆವರೆಗೆ ಮಾತ್ರ ಲಭ್ಯವಾಗಲಿದ್ದು, ಇಂಡಿ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪೂರ ಬಹತೇಕ ಹಳ್ಳಿಗಳಿಗೆ ಈ ನೀರು ಲಭ್ಯವಾಗಲು ಅನಾನುಕೂಲವಾಗುತ್ತಿದ್ದು, ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವಂತೆ ಸಚಿವರಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮೇರೆಗೆ ರಾಜ್ಯ ಮತ್ತು ಮಹಾರಾಷ್ಟ್ರ ಸರ್ಕಾರದ ಗಮನ ಸೆಳೆಯಲು ತಾವು ಪ್ರಯತ್ನಸುವುದಾಗಿ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ  ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಚಿವರಿಗೆ ಅವಶ್ಯಕ ಮಾಹಿತಿ ನೀಡಿದರು. ಶಾಸಕರಾದ ಎಂ.ಸಿ ಮನಗೂಳಿ, ಸೋಮನಗೌಡ ಪಾಟೀಲ (ಸಾಸನೂರ), ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ