ತೋಟಗಾರಿಕೆ ಉತ್ಪನ್ನಗಳ ನೇರ ಮಾರಾಟಕ್ಕೆ ಬನ್ನಿ
ರೈತರಿಗೆ ತೋಟಗಾರಿಕೆ ಉಪನಿರ್ದೇಶಕರು ಕರೆ : ಮಧ್ಯವರ್ತಿಗಳ ಹಾವಳಿಗೆ ಕಡಿವಾಣ
ಕೊಪ್ಪಳ: ಕೋವಿಡ್-19 ವೈರಸ್‌ನಿಂದಾಗಿ ಜಿಲ್ಲೆಯಲ್ಲಿ 21 ದಿನಗಳ ಕಾಲ ಬಂದ್ ವಾತಾವರಣವಿರುವ ಜಿಲ್ಲಾಧಿಕಾರಿಯವರ ಆದೇಶದಂತೆ ಸಾರ್ವಜನಿಕರು ಮನೆಯಿಂದ ಹೊರಗೆ ಬರದ ಕಾರಣ, ಅವರಿಗೆ ಅಗತ್ಯವಿರುವ ತರಕಾರಿ, ಹಣ್ಣುಗಳನ್ನು ಒದಗಿಸಬೇಕಾಗಿರುವುದರಿಂದ ರೈತರು ತಮ್ಮ ತೋಟಗಾರಿಕೆ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಮುಂದಾಗಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ತಿಳಿಸಿದ್ದಾರೆ.
ಮಾರಾಟ ಮಾಡುವ ರೈತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡುವ ಅವಕಾಶದ ಸದ್ಭಳಕೆಯನ್ನು ಮಾಡಿಕೊಳ್ಳಬಹುದಾಗಿದೆ.
ಒಣ ದ್ರಾಕ್ಷಿಯಾಗಿ ಮಾಡುವ ತಂತ್ರಜ್ಞಾನಕ್ಕೆ ಸಹಾಯ ಧನ
ದ್ರಾಕ್ಷಿ ಬೆಳೆಗಾರರು ಈಗ ಕಟಾವಿಗೆ ಬಂದಿರುವ ತಮ್ಮ ಉತ್ಪನ್ನವನ್ನು ಒಣ ದ್ರಾಕ್ಷಿಯಾಗಿ ಮಾಡುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ. ಈ ತಂತ್ರಜ್ಞಾನದ ಬಳಕೆ ಮಾಡಿಕೊಂಡು ದ್ರಾಕ್ಷಿ ಬೆಳೆಗಾರರು ತಮ್ಮ ತೋಟದಲ್ಲಿ ಒಣ ದ್ರಾಕ್ಷಿ ಘಟಕವನ್ನು ತಾವೇ ನಿರ್ಮಿಸಿಕೊಂಡು ದ್ರಾಕ್ಷಿ ಹಣ್ಣನ್ನು ಮಣೂಕ ಮಾಡಿ ಶೈತ್ಯಾಗಾರದಲ್ಲಿ ಶೇಖರಿಸಿಟ್ಟು ಉತ್ತಮ ಬೇಡಿಕೆ ಬಂದಾಗ ಲಾಭದಾಯಕ ಬೆಲೆಗೆ ಮಾರಾಟ ಮಾಡಲು ಮುಂದಾಗಿ ಎಂದು ಸಲಹೆ ನೀಡಿದಾರೆ.
ರೈತರು ಈ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಬೇಕು. ಈಗ ಒಣ ದ್ರಾಕ್ಷಿ ಘಟಕವನ್ನು ನಿರ್ಮಿಸಿಕೊಂಡವರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖೆಯ ನಿಯಮಾವಳಿ ಅನುಸಾರ ಸಹಾಯಧನ ನೀಡಲಾಗುವುದು. ಆದ್ದರಿಂದ ಪ್ರತಿಯೊಬ್ಬರೂ ಒಣ ದ್ರಾಕ್ಷಿ ಘಟಕವನ್ನು ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಇದಲ್ಲದೇ ರೈತರು ತಮ್ಮ ಉತ್ಪನ್ನವನ್ನು ಸರಿಯಾದ ಸಮಯದಲ್ಲಿ ಕಟಾವು ಮಾಡಿ ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಿ ಇಲಾಖೆಗೆ ತಂದು ಮಾರಾಟ ಮಾಡುವ ಅವಕಾಶವಿದೆ. ರೈತರು ಈ ಅವಕಾಶವನ್ನು ಬಳಸಿಕೊಂಡು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಉತ್ಪನ್ನಗಳನ್ನು ಯೋಗ್ಯ ಬೆಲೆಗೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬೇಕು.
ಮಾವಿನ ಹಣ್ಣನ್ನು ರಾಸಾಯನಿಕ ಬಳಸದೇ ಮಾಗಿಸಿ
ಮುಂದಿನ ದಿನಗಳಲ್ಲಿ ಮಾವು ಕೂಡ ಕಟಾವಿಗೆ ಬರಲಿದ್ದು, ಮಾವು ಬೆಳೆಗಾರರು ಆತಂಕ ಪಡದೇ ತಮ್ಮ ಹಣ್ಣನ್ನು ಕಟಾವು ಮಾಡಿ ಯಾವುದೇ ರಾಸಾಯನಿಕ ಬಳಸದೇ ನೈಸರ್ಗಿಕ ರೀತಿಯಲ್ಲಿ ಮಾಗಿಸಿ ತಮ್ಮ ಹಣ್ಣುಗಳನ್ನು ಇಲಾಖೆಗೆ ತಂದು ಮಾರಾಟ ಮಾಡಲು ಅವಕಾಶವಿದೆ. ಆದ್ದರಿಂದ ರೈತರು ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಮಾವಿನ ಹಣ್ಣನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ತರಕಾರಿ ಸಂಗ್ರಹಿಸಿ
ತರಕಾರಿಗಳು ದೈನಂದಿನ ಅವಶ್ಯಕತೆಯಾಗಿರುವುದರಿಂದ ಜಿಲ್ಲಾಧಿಕಾರಿ ಆದೇಶದಂತೆ ತರಕಾರಿ ಬೆಳೆಗಾರರು ತಮ್ಮ ಉತ್ಮನ್ನಗಳನ್ನು ಕಟಾವಿನ ನಂತರ ಸ್ವಚ್ಛ ಮತ್ತು ಶುದ್ಧ ರೀತಿಯಲ್ಲಿ ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಿ ತಂದರೆ ಇಲಾಖೆಯಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶ ಕಲ್ಪಿಸಿ ಕೊಡಲಾಗುವುದು.
ಅದಲ್ಲದೇ ರೈತರು ಆಯಾ ಗ್ರಾಮ ಪಂಚಾಯತಿಗಳನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಪರವಾನಿಗೆ ಪಡೆದುಕೊಂಡು ಇಲಾಖೆಯಿಂದ ದೊರೆಯುವ ತಳ್ಳುವ ಗಾಡಿ ಅಥವಾ ವ್ಯಾನ್‌ಗಳಲ್ಲಿ ಮಾರಾಟ ಮಾಡಲು ಮುಂದಾಗಿ ಎಂದು ಹೇಳಿದ್ದಾರೆ.
ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೊಳಗಾಗದೇ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ಪಡೆದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಸದವಕಾಶವನ್ನು ಬಳಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಕೊಪ್ಪಳ, ದೂ.ಸಂ. 08539-231530, ಆಯಾ ತಾಲೂಕಾ ಕಚೇರಿಗಳನ್ನು ಮತ್ತು ಕೇಂದ್ರ ಸ್ಥಾನಿಕ ಸಹಾಯಕರು ತೋಟಗಾರಿಕೆ ಇಲಾಖೆ ಕೊಪ್ಪಳ, ಮೊ.ಸಂ. 9611888607 ಮತ್ತು ತೋಟಗಾರಿಕೆ ವಿಷಯ ತಜ್ಞರು ಮೊ.ಸಂ.9482672039 ರವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Related
You Might Also Like
ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ
ಬೆಳಗಾವಿ: ಕಾರಿಗೆ ನಾಯಿಯೊಂದು ಅಡ್ಡ ಬಂದ ಪರಿಣಾಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ...
BMTC ಕಂಡಕ್ಟರ್: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ – ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನುತ್ತಿರುವ ಕಿರಾತಕ
ಬೆಂಗಳೂರು: ಎಂ.ಎಸ್.ಪಾಳ್ಯದಿಂದ-ಯಲಹಂಕ ಮಾರ್ಗದಲ್ಲಿ ಟಿಕೆಟ್ ಕೊಡುತ್ತಲೇ ಮುಗ್ದ ಯುವತಿಯನ್ನು ಕಂಡಕ್ಟರ್ ಪಟಾಯಿಸಿದ್ದು, ಮದುವೆಯಾದ ಮೂರೇ ತಿಂಗಳಿಗೆ ಾತನ ಅಸಲಿ ಮುಖ ಬಯಲಾಗಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ....
KSRTC: ಪ್ರಯಾಣಿಕರು ಕಳೆದುಕೊಂಡಿದ ಬೆಲೆ ಬಾಳುವ ಬ್ಯಾಗ್ ಮರಳಿಸಿ ಪ್ರಾಮಾಣಿಕತೆ ಮೆರೆದ ತುರುವೇಕೆರೆ ಘಟಕದ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲನಾ ಸಿಬ್ಬಂದಿ, ಅಂದರೆ ಚಾಲಕ ನಿರ್ವಾಹಕರು ಪ್ರಾಮಾಣಿಕತೆ ಮೆರೆಯು ಮೂಲಕ ಇತರರಿಗೆ ಮಾದರಿಯಾಗುತ್ತಿರುವುದು ನಿರಂತರವಾಗಿದೆ. ಇದು ಒಂದು ರೀತಿ...
ಮೈಸೂರು: ಬೇಡಿಕೆ ಈಡೇರಿಕೆಗೆ ಮೀನಮೇಷ ಎಣಿಸುತ್ತಿರುವ ಪ್ರಧಾನಿ, ಕೃಷಿ ಮಂತ್ರಿಗಳ ಪ್ರತಿಕೃತಿ ದಹಿಸಲು ಯತ್ನಿಸಿದ ರೈತರ ಬಂಧನ
ಮೈಸೂರು: ರೈತ ವಿರೋಧಿ ಕೇಂದ್ರ ಸರ್ಕಾರದ ವರ್ತನೆ ಖಂಡಿಸಿ ದಲೈವಾಲ ಹೋರಾಟವನ್ನು ಬೆಂಬಲಿಸಿ ಪ್ರಧಾನ ಮಂತ್ರಿ ಹಾಗೂ ಕೃಷಿ ಮಂತ್ರಿಗಳ ಪ್ರತಿಕೃತಿ ದಹನ ಮಾಡಲು ಮೆರವಣಿಗೆಯಲ್ಲಿ ಹೋಗುತ್ತಿದ್ದಾಗ...
ಹೈಪರ್‌ಟೆನ್ಷನ್: ಭಾರತದ ಯುವಜನತೆಗೆ ಅಡಗಿದ ಅಪಾಯ: ಡಾ.ಸಾಯಿಶಂಕರ್
ಬೆಂಗಳೂರು: ಯುವ ದಿನ, ಜನವರಿ 12 ರಂದು, ಸ್ವಾಮಿ ವಿವೇಕಾನಂದರ ಪ್ರೇರಣಾದಾಯಕ ಜೀವನ ಮತ್ತು ಉಪದೇಶಗಳನ್ನು ಆಚರಿಸುತ್ತದೆ. ಅವರ ಉಪದೇಶಗಳು ಪೀಳಿಗೆಗಳನ್ನು ಪ್ರೇರೇಪಿಸುತ್ತಿವೆ ಎಂದು ಏಮ್ಸ್ ಮತ್ತು...
ಹುಬ್ಬಳ್ಳಿ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಜಾರಿಗೆ ಸಿಎಂ ಒತ್ತಾಯಿಸಿ: ಸಚಿವರಿಗೆ ವಾಯವ್ಯ ವಲಯ ನೌಕರರ ಕೂಟ ಮನವಿ
ಹುಬ್ಬಳ್ಳಿ: ಚುನಾವಣಾ ಪೂರ್ವ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ಸಾರಿಗೆ ನೌಕರರಿಗೂ ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗ ಮಾದರಿಯಲ್ಲಿ) ನೀಡುವಂತೆ...
“ಕೆಎಸ್‌ಆರ್‌ಟಿಸಿ ಆರೋಗ್ಯ” ಯೋಜನೆ ಕುರಿತು ನೌಕರರಿಗೆ ಪತ್ರ ಬರೆದು ಖುಷಿ ಹಂಚಿಕೊಂಡ ಸಂಸ್ಥೆ ಎಂಡಿ ಅನ್ಬುಕುಮಾರ್
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬ ನೌಕರರು ಉತ್ತಮ ಆರೋಗ್ಯದಿಂದ ಇರಬೇಕು ಎಂಬ ಸದುದ್ದೇಶದಿಂದ "ಕೆಎಸ್‌ಆರ್‌ಟಿಸಿ ಆರೋಗ್ಯ" ಯೋಜನೆಯನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು...
BMTC: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯಕ್ಕೆ ನೌಕರರಿಂದ ದಾಖಲೆ ಸಂಗ್ರಹಿಸಲು ಮೂವರು ಅಧಿಕಾರಿಗಳ ನಿಯೋಜನೆ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ನೀಡುವುದಕ್ಕೆ ಬೇಕಾದ ದಾಖಲೆಗಳನ್ನು ಸಂಗ್ರಹಿಸಲು ಮೂವರು ಅಧಿಕಾರಿಗಳನ್ನೊಳಗಂಡ ಮೇಲ್ವಿಚಾರಣೆ ತಂಡಗಳನ್ನು ರಚಿಸಿ ವ್ಯವಸ್ಥಾಪಕ...
ಮುಂದಿನ ಪೀಳಿಗೆ ಉಳಿವಿಗಾಗಿ ಸಾವಯವ ಕೃಷಿ ಅವಶ್ಯಕ: ಸಚಿವ ಮುನಿಯಪ್ಪ
ಜಿಲ್ಲಾ ಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ಮೇಳ-2025 ಸಿರಿಧಾನ್ಯಗಳ ಸೇವನೆಯಿಂದ ಆರೋಗ್ಯ ವೃದ್ಧಿ ಬೆಂಗಳೂರು: ಮುಂದಿನ ಪೀಳಿಗೆಗೆ ಗುಣಮಟ್ಟದ ಆಹಾರ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಆಗಿದೆ. ಹಾಗಾಗಿ...
ಲೋಕ ಸೇವಾ ಆಯೋಗಗಳು ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆ ನೀಡುವ ಪ್ರಜಾ ಪ್ರಭುತ್ವದ ಸ್ತಂಭಗಳು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಲೋಕ ಸೇವಾ ಆಯೋಗಗಳು ಅರ್ಹತೆ ಮತ್ತು ನ್ಯಾಯಪರತೆಯನ್ನು ಎತ್ತಿಹಿಡಿದು, ಕಾರ್ಯಾಂಗಕ್ಕೆ ಅಭೂತಪೂರ್ವ ಕೊಡುಗೆಯನ್ನು ನೀಡುವ ಪ್ರಜಾಪ್ರಭುತ್ವದ ಸ್ತಂಭಗಳಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ರಾಜ್ಯ ಲೋಕಸೇವಾ...
KSRTC: ಶಸ್ತ್ರಚಿಕಿತ್ಸೆ ಗೊಳಗಾದ ಚಾಲಕನಿಗೆ ರಜೆ ಕೊಡದೆ ಗೈರು ಹಾಜರಿಹಾಕಿ 4 ತಿಂಗಳ ವೇತನ ತಡೆಹಿಡಿದ ಅಧಿಕಾರಿಗಳು
ಅನಾರೋಗ್ಯದ ನಡುವೆಯೂ ಕಚೇರಿಯಿಂದ ಡಿಪೋಗೆ - ಡಿಪೋನಿಂದ ಕಚೇರಿಗೆ ಅಲೆಯುತ್ತಿರು ಚಾಲಕ ವೇತನಕ್ಕಾಗಿ ಚಾಲಕನ ಅಲೆದಾಟ, ಪರದಾಟ ಆರ್ಥಿಕ ಸಂಕಷ್ಟದಲ್ಲಿ ಕುಟುಂಬ-ಆದರೂ ಕರಗದ ಅಧಿಕಾರಿಗಳ ಮನಸ್ಸು ದೊಡ್ಡಬಳ್ಳಾಪುರ:...