NEWSಕೃಷಿ

 ತೋಟಗಾರಿಕೆ  ಉತ್ಪನ್ನಗಳ ನೇರ ಮಾರಾಟಕ್ಕೆ ಬನ್ನಿ  

ರೈತರಿಗೆ ತೋಟಗಾರಿಕೆ ಉಪನಿರ್ದೇಶಕರು ಕರೆ : ಮಧ್ಯವರ್ತಿಗಳ ಹಾವಳಿಗೆ ಕಡಿವಾಣ

ವಿಜಯಪಥ ಸಮಗ್ರ ಸುದ್ದಿ

ಕೊಪ್ಪಳ:  ಕೋವಿಡ್-19 ವೈರಸ್‌ನಿಂದಾಗಿ ಜಿಲ್ಲೆಯಲ್ಲಿ 21 ದಿನಗಳ ಕಾಲ ಬಂದ್ ವಾತಾವರಣವಿರುವ ಜಿಲ್ಲಾಧಿಕಾರಿಯವರ ಆದೇಶದಂತೆ ಸಾರ್ವಜನಿಕರು ಮನೆಯಿಂದ ಹೊರಗೆ ಬರದ ಕಾರಣ, ಅವರಿಗೆ ಅಗತ್ಯವಿರುವ ತರಕಾರಿ, ಹಣ್ಣುಗಳನ್ನು ಒದಗಿಸಬೇಕಾಗಿರುವುದರಿಂದ ರೈತರು ತಮ್ಮ ತೋಟಗಾರಿಕೆ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೇ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಲು ಮುಂದಾಗಬೇಕು ಎಂದು ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ತಿಳಿಸಿದ್ದಾರೆ.

ಮಾರಾಟ ಮಾಡುವ ರೈತರು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಸೂಕ್ತ ಬೆಲೆಗೆ ಮಾರಾಟ ಮಾಡುವ ಅವಕಾಶದ ಸದ್ಭಳಕೆಯನ್ನು ಮಾಡಿಕೊಳ್ಳಬಹುದಾಗಿದೆ.

ಒಣ ದ್ರಾಕ್ಷಿಯಾಗಿ ಮಾಡುವ ತಂತ್ರಜ್ಞಾನಕ್ಕೆ ಸಹಾಯ ಧನ

ದ್ರಾಕ್ಷಿ ಬೆಳೆಗಾರರು ಈಗ ಕಟಾವಿಗೆ ಬಂದಿರುವ ತಮ್ಮ ಉತ್ಪನ್ನವನ್ನು ಒಣ ದ್ರಾಕ್ಷಿಯಾಗಿ ಮಾಡುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಇಲಾಖೆಯಿಂದ ಸಹಾಯಧನ ನೀಡಲಾಗುತ್ತಿದೆ. ಈ ತಂತ್ರಜ್ಞಾನದ ಬಳಕೆ ಮಾಡಿಕೊಂಡು ದ್ರಾಕ್ಷಿ ಬೆಳೆಗಾರರು ತಮ್ಮ ತೋಟದಲ್ಲಿ ಒಣ ದ್ರಾಕ್ಷಿ ಘಟಕವನ್ನು ತಾವೇ ನಿರ್ಮಿಸಿಕೊಂಡು ದ್ರಾಕ್ಷಿ ಹಣ್ಣನ್ನು ಮಣೂಕ ಮಾಡಿ ಶೈತ್ಯಾಗಾರದಲ್ಲಿ ಶೇಖರಿಸಿಟ್ಟು ಉತ್ತಮ ಬೇಡಿಕೆ ಬಂದಾಗ ಲಾಭದಾಯಕ ಬೆಲೆಗೆ ಮಾರಾಟ ಮಾಡಲು ಮುಂದಾಗಿ ಎಂದು ಸಲಹೆ ನೀಡಿದಾರೆ.

ರೈತರು ಈ ತಂತ್ರಜ್ಞಾನದ ಸದ್ಬಳಕೆ ಮಾಡಿಕೊಳ್ಳಬೇಕು. ಈಗ ಒಣ ದ್ರಾಕ್ಷಿ ಘಟಕವನ್ನು ನಿರ್ಮಿಸಿಕೊಂಡವರಿಗೆ ಮುಂದಿನ ಆರ್ಥಿಕ ವರ್ಷದಲ್ಲಿ ಇಲಾಖೆಯ ನಿಯಮಾವಳಿ ಅನುಸಾರ ಸಹಾಯಧನ ನೀಡಲಾಗುವುದು. ಆದ್ದರಿಂದ ಪ್ರತಿಯೊಬ್ಬರೂ ಒಣ ದ್ರಾಕ್ಷಿ ಘಟಕವನ್ನು ನಿರ್ಮಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಇದಲ್ಲದೇ ರೈತರು ತಮ್ಮ ಉತ್ಪನ್ನವನ್ನು ಸರಿಯಾದ ಸಮಯದಲ್ಲಿ ಕಟಾವು ಮಾಡಿ ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಿ ಇಲಾಖೆಗೆ ತಂದು ಮಾರಾಟ ಮಾಡುವ ಅವಕಾಶವಿದೆ. ರೈತರು ಈ ಅವಕಾಶವನ್ನು ಬಳಸಿಕೊಂಡು ಯಾವುದೇ ಆತಂಕಕ್ಕೆ ಒಳಗಾಗದೇ ತಮ್ಮ ಉತ್ಪನ್ನಗಳನ್ನು ಯೋಗ್ಯ ಬೆಲೆಗೆ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬೇಕು.

ಮಾವಿನ ಹಣ್ಣನ್ನು ರಾಸಾಯನಿಕ ಬಳಸದೇ  ಮಾಗಿಸಿ

ಮುಂದಿನ ದಿನಗಳಲ್ಲಿ ಮಾವು ಕೂಡ ಕಟಾವಿಗೆ ಬರಲಿದ್ದು, ಮಾವು ಬೆಳೆಗಾರರು ಆತಂಕ ಪಡದೇ ತಮ್ಮ ಹಣ್ಣನ್ನು ಕಟಾವು ಮಾಡಿ ಯಾವುದೇ ರಾಸಾಯನಿಕ ಬಳಸದೇ ನೈಸರ್ಗಿಕ ರೀತಿಯಲ್ಲಿ ಮಾಗಿಸಿ ತಮ್ಮ ಹಣ್ಣುಗಳನ್ನು ಇಲಾಖೆಗೆ ತಂದು ಮಾರಾಟ ಮಾಡಲು ಅವಕಾಶವಿದೆ. ಆದ್ದರಿಂದ ರೈತರು ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಮಾವಿನ ಹಣ್ಣನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ತರಕಾರಿ ಸಂಗ್ರಹಿಸಿ

ತರಕಾರಿಗಳು ದೈನಂದಿನ ಅವಶ್ಯಕತೆಯಾಗಿರುವುದರಿಂದ ಜಿಲ್ಲಾಧಿಕಾರಿ ಆದೇಶದಂತೆ ತರಕಾರಿ ಬೆಳೆಗಾರರು ತಮ್ಮ ಉತ್ಮನ್ನಗಳನ್ನು ಕಟಾವಿನ ನಂತರ ಸ್ವಚ್ಛ ಮತ್ತು ಶುದ್ಧ ರೀತಿಯಲ್ಲಿ ಪ್ಲಾಸ್ಟಿಕ್ ಕ್ರೇಟ್‌ಗಳಲ್ಲಿ ಸಂಗ್ರಹಿಸಿ ತಂದರೆ ಇಲಾಖೆಯಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಅವಕಾಶ ಕಲ್ಪಿಸಿ ಕೊಡಲಾಗುವುದು.

ಅದಲ್ಲದೇ ರೈತರು ಆಯಾ ಗ್ರಾಮ ಪಂಚಾಯತಿಗಳನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವ ಪರವಾನಿಗೆ ಪಡೆದುಕೊಂಡು ಇಲಾಖೆಯಿಂದ ದೊರೆಯುವ ತಳ್ಳುವ ಗಾಡಿ ಅಥವಾ ವ್ಯಾನ್‌ಗಳಲ್ಲಿ ಮಾರಾಟ ಮಾಡಲು ಮುಂದಾಗಿ ಎಂದು ಹೇಳಿದ್ದಾರೆ.

ತೋಟಗಾರಿಕೆ ಬೆಳೆಗಾರರು ಯಾವುದೇ ಆತಂಕಕ್ಕೊಳಗಾಗದೇ ಇಲಾಖೆಯನ್ನು ಸಂಪರ್ಕಿಸಿ ತಮ್ಮ ಉತ್ಪನ್ನಗಳಿಗೆ ಯೋಗ್ಯ ಬೆಲೆ ಪಡೆದು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವ ಸದವಕಾಶವನ್ನು ಬಳಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಉಪನಿರ್ದೇಶಕರು (ಜಿಪಂ) ಕೊಪ್ಪಳ, ದೂ.ಸಂ. 08539-231530, ಆಯಾ ತಾಲೂಕಾ ಕಚೇರಿಗಳನ್ನು ಮತ್ತು ಕೇಂದ್ರ ಸ್ಥಾನಿಕ ಸಹಾಯಕರು ತೋಟಗಾರಿಕೆ ಇಲಾಖೆ ಕೊಪ್ಪಳ, ಮೊ.ಸಂ. 9611888607 ಮತ್ತು ತೋಟಗಾರಿಕೆ ವಿಷಯ ತಜ್ಞರು ಮೊ.ಸಂ.9482672039 ರವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು  ತಿಳಿಸಿದ್ದಾರೆ.

Leave a Reply

error: Content is protected !!
LATEST
ಸೆ.12ರಂದು 5 ಭಾಷೆಗಳಲ್ಲಿ ಬೆಳ್ಳಿತೆರೆ ಮೇಲೆ ARM- ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಬೇಕೇಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ ಮೈಸೂರು: ಕಲುಷಿತ ನೀರು ಸೇವಿಸಿ 12ಮಂದಿಗೆ ವಾಂತಿ, ‌ಭೇದಿ, ಓರ್ವ ಮೃತ ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಆತ್ಯಹತ್ಯೆ KSRTC ನೌಕರರ ಕಿತ್ತು ತಿನ್ನುವ ಭ್ರಷ್ಟರು: ಹೋಟೆಲ್‌ಗೆ ತಿನ್ನಲು ಹೋಗಿ ನೌಕರನಿಗೆ ಫೋನ್‌ ಪೇ ಮಾಡಲು ಹೇಳಿದ ಎಟಿಐ ಗಂಗಾಧ... KSRTC ಮಂಡ್ಯ: ಓವರ್‌ಟೇಕ್‌ ನೆಪದಲ್ಲಿ ತಾನೇ ಬಸ್‌ಗೆ ಬೈಕ್‌ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್‌ ಸವಾರ ಯೋಗ... KSRTC: ಆ‌ರ್‌ಟಿಒ ಚಾಲನಾ ಪರವಾನಗಿ ಅಮಾನತುಗೊಳಿಸಿದ ಚಾಲಕರಿಗೆ ಡ್ಯೂಟಿ ಕೊಟ್ಟರೆ ಕ್ರಮ- ಡಿಸಿ ಸೂಚನೆ ಆರೋಗ್ಯ ಶಿಬಿರ ಸಾಮಾಜಿಕ ಜವಾಬ್ದಾರಿ: ನ್ಯಾಯ ಸಮಿತಿ ಅಧ್ಯಕ್ಷ ಸಚಿನ್ ಶಿರವಾಳ ಚಾರ್ಜ್‌ಶೀಟ್ ಗೌಪ್ಯ ದಾಖಲಾತಿ ಏನಲ್ಲ: ಗೃಹ ಸಚಿವ ಪರಮೇಶ್ವರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವುದರಲ್ಲಿ ಎಳ್ಳಷ್ಟೂ ಅನುಮಾನವಿಲ್ಲ : ಬಿವೈವಿ