NEWSನಮ್ಮರಾಜ್ಯರಾಜಕೀಯಶಿಕ್ಷಣ-

ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ, ಘಟಕ ಸ್ಥಾಪನೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಘಟಕ ಸ್ಥಾಪನೆ ಕ್ರಮವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಡಾ. ಜಯಮಾಲ ರಾಮಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿನಲ್ಲಿ 11.50 ಕೋಟಿ ರೂ. ಅನುದಾನದ ಪೈಕಿ 1000 ದಮನಿತ ಮಹಿಳೆಯರಿಗೆ ತರಬೇತಿ ನೀಡಲು ಅಗತ್ಯವಿರುವ ಅನುದಾನ ರೂ. 3.50 ಕೋಟಿಗಳಲ್ಲಿ ವೆಚ್ಚ ಭರಿಸಲು ಅನುಮೋದನೆ ದೊರಕಿದೆ ಹಾಗೂ 1.50 ಕೋಟಿ ರೂ. ಮಹಿಳಾ ತರಬೇತಿ ಯೋಜನೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.

ದಮನಿತ ಮಹಿಳೆಯರ ಘಟಕ ಪ್ರಾರಂಭಿಸಲು   10 ಕೋಟಿ ರೂ. ಗಳನ್ನು ಒದಗಿಸಿದ್ದು, ಇದು ಬಂಡವಾಳ ಶೀರ್ಷಿಕೆ ಅಡಿ ಭರಿಸಲು ಸಾಧ್ಯವಾಗದ ಕಾರಣ ರಾಜಸ್ವ ಲೆಕ್ಕಶೀರ್ಷಿಕೆಯಡಿ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯನ್ನು ಕೋರಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದರು.

2020-21ನೇ ಸಾಲಿನಲ್ಲಿ ಚೇತನ ಯೋಜನೆಯಡಿ ಒದಗಿಸಲಾಗಿರುವ  4 ಕೋಟಿ ರೂ. ಗಳ ಪೈಕಿ   2 ಕೋಟಿ ರೂ. ಗಳನ್ನು ದಮನಿತ ಮಹಿಳೆಯರ ಘಟಕ ಸ್ಥಾಪನೆ ಮಾಡಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

2019-20ನೇ ಸಾಲಿನಲ್ಲಿ ಪರಿಸಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಉದ್ಯೋಗಿನಿ ಹಾಗೂ ಸಮೃದ್ಧಿ ಯೋಜನೆಯಡಿ ಅನುಕ್ರಮವಾಗಿ ಪರಿಶಿಷ್ಟ ಜಾತಿಗೆ ಸಾರಿದ ಫಲಾನುಭವಿಗಳಿಗೆ  15.54 ಕೋಟಿ ರೂ. ಮತ್ತು  3 ಕೋಟಿ ರೂ.  ಹಾಗೂ ಪರಿಶಿಷ್ಟ ಪಂಗಡದ ಫಲನಾನುಭವಿಗಳಿಗೆ  8  ಕೋಟಿ ಮತ್ತು 50 ಕೋಟಿ ರೂ. ನಿಗದಿಯಾಗಿದೆ. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ದಮನಿತ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ  ಎಂದು ಸದನದಲ್ಲಿ ತಿಳಿಸಿದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ