NEWSನಮ್ಮಜಿಲ್ಲೆಸಂಸ್ಕೃತಿ

ದಾವಣಗೆರೆ: ಜ. 14 ರಂದು ಕಲಾಕುಂಚದ 33ನೇ ವಾರ್ಷಿಕೋತ್ಸವ

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: 1991ರಲ್ಲಿ ಉದ್ಘಾಟನೆಯಾದ ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ೩೩ನೇ ವರ್ಷದ ವಾರ್ಷಿಕೋತ್ಸವ ಜ.14 ರ ಅಪರಾಹ್ನ 3 ಗಂಟೆಗೆ ನಗರದ ಶ್ರೀ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಲಾಕುಂಚ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಯದೇವ ವೃತ್ತದಲ್ಲಿ ಕಲಾಕುಂಚ ಮಹಿಳಾ ವಿಭಾಗದಿಂದ ಬೈಕ್ ರ‍್ಯಾಲಿ ನಡೆಯಲಿದ್ದು ದಾವಣಗೆರೆ ಮಹಾನಗರಪಾಲಿಕೆಯ ಮಹಾಪೌರರಾದ ಜಯಮ್ಮ ಗೋಪಿನಾಯ್ಕ ಚಾಲನೆ ನೀಡಲಿದ್ದಾರೆ. ಅಪರಾಹ್ನ 3 ಗಂಟೆಗೆ ಸಿದ್ಧಗಂಗಾ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ಸಮಾರಂಭವನ್ನು ಹಿರಿಯ ಪತ್ರಕರ್ತ ಮಂಜುನಾಥ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಜಸ್ಟಿನ್ ಡಿಸೋಜ ವಹಿಸಿಕೊಳ್ಳಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶಣೈ, ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ, ಯಕ್ಷರಂಗ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಗೌರವ ಅಧ್ಯಕ್ಷರಾದ ನಲ್ಲೂರು ಲಕ್ಷ್ಮಣ್‌ರಾವ್, ಕಲಾಕುಂಚ ವಿವಿಧ ಬಡಾವಣೆ ಶಾಖೆಗಳ ಅಧ್ಯಕ್ಷರಾದ ಶಾರದಮ್ಮ ಶಿವನಪ್ಪ, ಲಲಿತಾ ಕಲ್ಲೇಶ್, ಪ್ರಭಾ ರವೀಂದ್ರ, ಡಾ. ನಿರ್ಮಲಾ ವಿಶ್ವನಾಥ್, ವಿ. ಕೃಷ್ಣಮೂರ್ತಿ, ವಿಜಯಲಕ್ಷಿಂರಾವ್ ಡಾ. ಚಂದ್ರಪ್ಪ ಆಗಮಿಸಲಿದ್ದಾರೆ.

ಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ರಾಜ್ಯ ಮಟ್ಟದ ಉಚಿತ “ಕವನ ಸ್ಪರ್ಧೆ “ಕಾರ್ಡಿನಲ್ಲಿ ಕಥೆ” ಹೀಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅಭಿನಂದನಾ ಪತ್ರ ಬಹುಮಾನ ವಿತರಣೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಮಹದೇವ ಅಸಗೋಡು ತಿಳಿಸಿದ್ದಾರೆ.

ಶೈಕ್ಷಣಿಕ ಕ್ಷೇತ್ರದಲ್ಲಿ ಬಾಲ್ಯದಿಂದಲೂ ನಿರಂತರ ಸಾಧನೆಗೈದ ಕುಮಾರಿ ಗೌರಿ ನರಸಿಂಹಾಚಾರ್ ಮಣ್ಣೂರು ಅವರಿಗೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಶೃಂಗಾರ ಕಾವ್ಯ ಪ್ರಕಾಶನದಿಂದ “ಸರಸ್ವತಿ ಪುರಸ್ಕಾರ” ರಾಜ್ಯ ಪ್ರಶಸ್ತಿ ಪ್ರದಾನಿಸಿ, ಸನ್ಮಾನಿಸಿ, ಗೌರವಿಸಲಾಗುವುದು. ಕಲಾಕುಂಚ ಎಸ್.ಎಸ್. ಬಡಾವಣೆ ಶಾಖೆಯ ಮಹಿಳಾ ತಂಡದಿಂದ ಸಮೂಹ ನೃತ್ಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು