NEWSನಮ್ಮಜಿಲ್ಲೆಸಂಸ್ಕೃತಿ

ದೇಶ, ವಿದೇಶಗಳ ಸಹಸ್ರಾರು ಪ್ರವಾಸಿಗರ  ವಿಕ್ಷಣೆಗೆ ಮೈಸೂರು ಅರಮನೆ ಸಿಂಹಾಸನ ಲಭ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನವರಾತ್ರಿ ಸಂದರ್ಭದಲ್ಲಿ ಮಾತ್ರ ನೋಡಸಿಗುವ ರತ್ನ ಖಚಿತ ಸಿಂಹಾಸನ ಕಣ್ತುಂಬಿಕೊಳ್ಳಲು ದೇಶ, ವಿದೇಶಗಳಿಂದ ಸಹಸ್ರಾರು ಪ್ರವಾಸಿಗರು ಮೈಸೂರು ಅರಮನೆಗೆ ಆಗಮಿಸುತ್ತಾರೆ.

ಇದೀಗ ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಈ ಸಿಂಹಾಸನ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ನೀಡಲಾಗಿದೆ. ಆದರೆ ಫೋಟೋ ವಿಡಿಯೋ ತೆಗೆಯುವುದನ್ನು ನಿರ್ಬಂಧಿಸಲಾಗಿದೆ.

ಅ.9ರಂದು ಅರಮನೆಯ ಖಾಸಗಿ ದರ್ಬಾರ್ ಹಾಲ್‌ನಲ್ಲಿ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಸಿಂಹಾಸನ ಜೋಡಣೆ ಕಾರ್ಯ ನಡೆದಿದೆ. ಸಿಂಹಾಸನಕ್ಕೆ ಪ್ರತ್ಯೇಕ ಪರದೆ ಅಳವಡಿಸಿ ಮುಚ್ಚಲಾಗಿದ್ದು, ಪರದೆಯ ಒಳ ಹೋಗಿ ಸಿಂಹಾಸನ ನೋಡಲು ಪ್ರವಾಸಿಗರಿಗೆ 50 ರೂಪಾಯಿ ಟಿಕೆಟ್ ನಿಗದಿಪಡಿಸಲಾಗಿದೆ.

ಅರಮನೆಯಲ್ಲಿ ಬಿಗಿ ಪೊಲೀಸ್ ಭದ್ರತೆ ಇದ್ದು, ದರ್ಬಾರ್ ಹಾಲ್‌ನಲ್ಲಿ ಅರಮನೆ ಆಡಳಿತ ಮಂಡಳಿ ಭದ್ರತೆಗೆ ಹಾಕಿರುವ ಸಿಸಿಟಿವಿಯನ್ನೂ ಮುಚ್ಚಲಾಗಿದೆ. ಶನಿವಾರದಿಂದ ನ.7ರವರೆಗೆ ಸಿಂಹಾಸನವನ್ನು ಪ್ರವಾಸಿಗರು ವೀಕ್ಷಿಸಲು ಅವಕಾಶವಿದೆ. ಇದಕ್ಕಾಗಿ ದರ್ಬಾರ್ ಹಾಲ್‌ನಲ್ಲಿ ರಾಜವಂಶಸ್ಥರ ಕಡೆಯಿಂದ ವಿಶೇಷ ಕೌಂಟರ್ ಕೂಡಾ ತೆರೆಯಲಾಗಿದೆ.

Leave a Reply

error: Content is protected !!
LATEST
ಮಧ್ಯಮ ವರ್ಗದ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಲಾಗದೆ ಮೌನಕ್ಕೆ ಶರಣಾದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ BBMP-ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ : ಸುರಳ್ಕರ್ ವಿಕಾಸ್ ಕಿಶೋರ್ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ 18 ರಿಂದ 45 ವರ್ಷದವರಿಂದ ಅರ್ಜಿ ಆಹ್ವಾನ ಪ್ರತಿಷ್ಠಿತ ಶಾಲೆಗಳಿಗೆ ಸೇರ ಬಯಸುವ ಮಕ್ಕಳಿಂದ ಅರ್ಜಿ ಆಹ್ವಾನ: ಷರತ್ತು ಅನ್ವಯ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ