NEWSಕೃಷಿನಮ್ಮಜಿಲ್ಲೆ

ದೆಹಲಿ ರೈತರ ಹೋರಾಟ ಬೆಂಬಲಿಸಿ ಮೈಸೂರಿನಲ್ಲಿ ಪೆಂಜಿನ ಮೆರವಣಿಗೆ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೈವಾಲ ಅವರ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಇಂದು ಸಂಜೆ ಪಂಜಿನ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.

ಅಂತ್ಯೆಯೆ ಹೋರಾಟ ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಮೈಸೂರಿನ ಗನ್ ಹೌಸ್ ವೃತ್ತದಿಂದ ಸಂಸ್ಕೃತ ಪಾಠಶಾಲೆ ಮೂಲಕ ಕಾಡಾ ಕಚೇರಿ ವೃತ್ತದವರೆಗೆ ಪೇಂಜಿನ ಮೆರವಣಿಗೆ ಪ್ರತಿಭಟನೆ ನಡೆಸಿ ಬೆಂಬಲಿಸಿದರು.

ಇಂದು ರಾಜ್ಯ ಕಬ್ಬು ಬೆಳೆಗಾರರ ಮೈಸೂರು ಜಿಲ್ಲಾ ಘಟಕದಿಂದ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿವಿಧ ದಿಕ್ಕಾರ ಘೋಷಣೆಗಳ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪಂಜಾಬ್ ರಾಜ್ಯ ದಲೈವಾಲ ಅವರ ಉಪವಾಸ ಬೆಂಬಲಿಸಿ ಸಂಪೂರ್ಣ ಬಂದ್ ಆಚರಿಸುವ ಸಂಬಂಧ ನಗದಲ್ಲಿ ಪಂಜಿನ ಮೆರವಣಿ ಮಾಡಲಾಯಿತು ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದರು.

ರೈತರು ಕೇಂದ್ರ ಸರ್ಕಾರದ ಭಿಕ್ಷೆ ಕೇಳುತ್ತಿಲ್ಲ ನಮ್ಮ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿ ಮಾಡಬೇಕೆಂದು ಕೇಳುತ್ತ ಹೋರಾಟ ಮಾಡುತ್ತಿದ್ದೇವೆ. ಈ ಬಗ್ಗೆ ಗಂಭೀರತೆ ತೋರದ ಕೇಂದ್ರ ಸರ್ಕಾರ, ಯಾರು ಕೇಳದೆ ಇರುವ ಒಂದು ದೇಶ ಒಂದು ಚುನಾವಣೆ. ಒಂದು ದೇಶ ಒಂದು ಜಿಎಸ್‌ಟಿ. ಒಂದು ದೇಶ ಒಂದು ಪಡಿತರ ಕಾರ್ಡ್ ಜಾರಿಗೆ ತರುತ್ತಿದೆ.

ದೇಶದಲ್ಲಿ ಶೇಕಡ 80ರಷ್ಟು ಇರುವ ರೈತರು ಕೇಂದ್ರ ಸರ್ಕಾರಕ್ಕೆ ಮತ ನೀಡಿದ್ದಾರೆ. ರೈತರು ಕೇಳುತ್ತಿರುವ ಒತ್ತಾಯಕ್ಕೆ ನಿರಾಶಕ್ತಿ ತೋರುತ್ತಿರುವ ಕೇಂದ್ರ ಸರ್ಕಾರ ಯಾಕೆ ಎಂಬುದನ್ನು ಕೇಳಬೇಕು. ಅದಕ್ಕೆ ನಾವು ಆಯ್ಕೆ ಮಾಡಿ ನಿಮ್ಮನ್ನು ಲೋಕಸಭೆ ಕಳುಹಿಸಿದ್ದೇವೆ. ನೀವು ಸಂಸದರಾಗಿ ನಿದ್ರೆ ಮಾಡಬೇಡಿ ಈ ಬಗ್ಗೆ ಸರ್ಕಾರದ ಗಮನ ಸೆಳೆಯಿರಿ. ಇಲ್ಲದಿದ್ದರೆ ಹಳ್ಳಿಗಳಿಗೆ ಬಂದರೆ ನಿಮ್ಮನ್ನು ಹೊರಗೆ ಇಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತ ನಾಯಕ ದಲೈವಾಲ ಅವರು 33 ದಿನದಿಂದ ಉಪವಾಸ ಕುಳಿತಿದ್ದಾರೆ ನಿಮ್ಮ ಕಣ್ಣಿಗೆ ಕಾಣುತ್ತಿಲ್ಲವೇ? ರೈತರ ಪಾಲಿಗೆ ಸರ್ಕಾರ ಸತ್ತು ಹೋಗಿದೆಯೇ ಎಂದು ಪ್ರಶ್ನೆ ಮಾಡುತ್ತಿದ್ದೇವೆ. ಈಗಾಗಲೇ ಹಳ್ಳಿ ಹಳ್ಳಿಗಳಲ್ಲಿ ಮೇಣದ ಬತ್ತಿ ಉರಿಸಿ ಪ್ರತಿಭಟನೆ ಮಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಪ್ರಧಾನಿಗಳು ವಿದೇಶಗಳಿಗೆ ಹೋಗಿ ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಿ ಎಂದು ಅಲ್ಲಿ ಹಿತವಚನ ಹೇಳುತ್ತಾರೆ. ಆದರೆ ನಮ್ಮ ಪ್ರಧಾನಿ ಮೋದಿ ಅವರಿಗೆ ದೇಶದ ರೈತರು ನ್ಯಾಯಕ್ಕಾಗಿ ತಿಂಗಳುಗಟ್ಟಲೆ ಉಪವಾಸ ಮಾಡುತ್ತಿದ್ದರು ಕಾಣುತ್ತಿಲ್ಲವೆ ನಮ್ಮೊಂದಿಗೆ ಮಾತುಕತೆ ಮಾಡಲು ಇವರಿಗೆ ಸಮಯವಿಲ್ಲವೇ ಎಂದು ಕಿಡಿಕಾರಿದರು.

ಇನ್ನು 33 ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿರುವ ಜಗಜಿತ್ ಸಿಂಗ್ ದಲೈವಾಲ ಅವರನ್ನ ಆಸ್ಪತ್ರೆಗೆ ರವಾನಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದರು ಇನ್ನೂ ಪಾಲಿಸಿಲ್ಲ ಎಂದು ನ್ಯಾಯಾಂಗ ಉಲ್ಲಂಘನೆ ಮೊಕದ್ದಮೆ ದಾಖಲಿಸುವುದಾಗಿ ಪಂಜಾಬ್ ಸರ್ಕಾರಕ್ಕೆ ಎಚ್ಚರಿಸಿದೆ. ‌

ಬೇರೆ ಬೇರೆ ರಾಜ್ಯಗಳ ರೈತರು ಕನೂರಿ ಬಾರ್ಡರ್‌ಗೇ ಪ್ರತಿನಿತ್ಯ ಸಾವಿರಾರು ಸಂಖ್ಯೆ ರೈತರು ಜಮಾವಣೆ ಆಗುತ್ತಿದ್ದಾರೆ. ಕರ್ನಾಟಕ ರೈತರ ತಂಡವು ಸದ್ಯದಲ್ಲಿಯೇ ದೆಹಲಿ ಕಡೆ ಹೋಗುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡಲ್ಪುರ ನಾಗರಾಜ್. ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್ ಮಾತನಾಡಿದರು ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ, ಪರಶಿವಮೂರ್ತಿ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಕುರುಬೂರು ಸಿದ್ದೇಶ್, ವಾಜಮಂಗಲ ಮಾದೇವು, ಕಮಲಮ್ಮ, ವರಕೂಡು ನಾಗೇಶ್, ಹಂಪಾಪರ ರಾಜೇಶ್, ಧನಗಳ್ಳಿ ಕೆಂಡಗಣ್ಣ ಸ್ವಾಮಿ, ಕುರುಬೂರು ಪ್ರದೀಪ್, ಕೆ.ಜಿ.ಗುರುಸ್ವಾಮಿ, ಕೂಡನಹಳ್ಳಿ ಪ್ರಕಾಶ್, ಬನ್ನಳ್ಳಿ ಹುಂಡಿ ರಾಜೇಂದ್ರ, ವಾಜಮಂಗಲ ನಾಗೇಂದ್ರ, ಮೆಡಿಕಲ್ ಮಹೇಶ್, ಕೋಟೆ ಸುನಿಲ್ ಇನ್ನು ಮುಂತಾದವರು ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ