NEWSಶಿಕ್ಷಣ-

ದೂರದರ್ಶನದಲ್ಲಿ ಏ.29 ರಿಂದ SSLC ವಿದ್ಯಾರ್ಥಿಗಳಿಗೆ ಪುನರ್ಮನನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ  ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ  ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ತಿಳಿಸಿದ್ದಾರೆ.

ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ ಎಂದು ಹೇಳಿದರು.

ಮೊದಲ 16 ದಿನ ಪ್ರತಿ 45 ನಿಮಿಷಯಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ  SSLC ಪರೀಕ್ಷೆ ನಡೆಯುತ್ತದೆ ಹತಾಶರಾಗದೆ ಅಧ್ಯಯನಶೀಲರಾಗಿ

18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ ಎಂದರು.

ಪ್ರತಿ ವಿಷಯ ಬೋಧನೆಯ  ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...