NEWSಆರೋಗ್ಯನಮ್ಮಜಿಲ್ಲೆ

ಧಾರವಾಡದಲ್ಲೂ ಓರ್ವ ವ್ಯಕ್ತಿಯಲ್ಲಿ ಕೊರೊನಾ ದೃಢ

ರಾಜ್ಯದಲ್ಲಿ 21ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ l ಮನೆಲೇ ಇದ್ದು ರೋಗ ಓಡಿಸಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಆಸ್ಟ್ರೇಲಿಯಾ, ದುಬೈ,ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ   ಓರ್ವ ವ್ಯಕ್ತಿಯಲ್ಲಿ  ಕೋವಿಡ್ 19  ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ  ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಮಾ.12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಾ.18 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದಿ  ಬಂದಿದೆ.

ಹೊಸಯಲ್ಲಾಪುರ ಸುತ್ತಮುತ್ತ ಕಂಟೈನಮೆಂಟ್ ಪ್ರದೇಶ ಘೋಷಣೆ

ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.

ಈ  ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ  ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing) ಸಂಗ್ರಹಿಸಲಾಗುತ್ತಿದೆ.

ಸಾಮಾಜಿಕ ಅಂತರ, ಶುಚಿತ್ವ ಪಾಲನೆಗೆ ಒತ್ತು ನೀಡಿ

ಜಿಲ್ಲೆಯಾದ್ಯಂತ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.ಸಾರ್ವಜನಿಕರು ಸಾಧ್ಯವಾದಷ್ಟು  ತಮ್ಮ  ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು  ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು