NEWSನಮ್ಮಜಿಲ್ಲೆ

ಧಾರವಾಡದಲ್ಲಿ ಕೆಲ ಚಟುವಟಿಕೆಗಳಿಗೆ ಲಾಕ್‍ಡೌನ್ನಿಂದ ವಿನಾಯಿತಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಕೊರೊನಾ ನಿಯಂತ್ರಣಕ್ಕಾಗಿ ಭಾರತ ಸರ್ಕಾರದ ಗೃಹ ಮಂತ್ರಾಲಯವು ಘೋಷಿಸಿರುವ ಲಾಕ್‍ಡೌನ್ ಮೇ 3 ರ ವರೆಗೆ ಮುಂದುವರಿಯಲಿದೆ. ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಲು ಕರ್ನಾಟಕ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ನು ಏ.22 ರಂದು ಪ್ರಕಟಿಸಿದೆ.

ಅದರಂತೆ ಜಿಲ್ಲೆಯ ಪರಿಸ್ಥಿತಿಯನ್ನು ಆಧರಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜಿಲ್ಲೆಯಲ್ಲಿ ಕೆಲವು ಚಟುವಟಿಕೆಗಳಿಗೆ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿದೆ ಎಂದು ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಹುಬ್ಬಳ್ಳಿ ನಗರ ಹೊರತುಪಡಿಸಿ ಅವಳಿ ನಗರದ ಹೊರವಲಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕಾ ಚಟುವಟಿಕೆಗಳನ್ನು ಆರಂಭಿಸಬಹುದು. ಉತ್ಪಾದನೆ ಮತ್ತು ಇತರೆ ಕೈಗಾರಿಕಾ ಘಟಕಗಳು ತನ್ನ ಕಾರ್ಮಿಕರಿಗೆ ಕೈಗಾರಿಕೆಗಳ ಆವರಣದಲ್ಲಿಯೇ ನಿಯಮಾನುಸಾರ ವಸತಿ ವ್ಯವಸ್ಥೆ ಕಲ್ಪಿಸಬೇಕು. ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತೆರಳುವ ಕಾರ್ಮಿಕರಿಗೆ ಪ್ರತ್ಯೇಕ ವಾಹನಗಳ ವ್ಯವಸ್ಥೆಯನ್ನು ಉದ್ಯೋಗದಾತರು ಸಾಮಾಜಿಕ ಅಂತರದ ನಿಯಮವನ್ನು ಅಳವಡಿಸಿಕೊಂಡು ಒದಗಿಸಬೇಕು.

ಶಾಪ್ಸ್  ಮತ್ತು ಎಸ್ಟಾಬಿಲಿಶಮೆಂಟ್ ಕಾಯ್ದೆಯಡಿ ನೋಂದಣಿಯಾಗಿ ಶಾಪಿಂಗ್ ಮಾಲ್‍ಗಳನ್ನು ಹೊರತುಪಡಿಸಿ ಪ್ರತ್ಯೇಕವಾಗಿ ನಡೆಸಲ್ಪಡುವ ಎಲ್ಲಾ ಅಂಗಡಿಗಳು ಹುಬ್ಬಳ್ಳಿ ನಗರ ಹೊರತುಪಡಿಸಿ ಜಿಲ್ಲೆಯಾದ್ಯಂತ ಸೋಮವಾರದಿಂದ ಗುರುವಾರದವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ  ಕಾರ್ಯನಿರ್ವಹಿಸಬಹುದು ಎಂದು ತಿಳಿಸಿದ್ದಾರೆ.

ವಿನಾಯಿತಿ ಪಡೆದಿರುವ ಚಟುವಟಿಕೆಗಳು

ಸ್ಟೇಷನರಿ ಮತ್ತು ಬುಕ್‍ಸ್ಟಾಲ್, ಎಲೆಕ್ಟ್ರಿಕಲ್ ರಿಪೇರಿ, ಪ್ಲಬಿಂಗ್, ಪೇಂಟ್, ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಅಂಗಡಿಗಳು, ಮರಳು, ಇಟ್ಟಿಗೆ, ಸಿಮೆಂಟ್, ಕಬ್ಬಿಣ ಮೊದಲಾದ ನಿರ್ಮಾಣ ಕಾಮಗಾರಿಗಳ ವಹಿವಾಟುಗಳು. ರಿಪೇರಿ ಮತ್ತು ಸರ್ವಿಸ್ ಸೆಂಟರ್‍ಗಳು, ಟೈಲ್ಸ್ ಅಂಗಡಿಗಳು, ಜೆರಾಕ್ಸ್ ಮತ್ತು ಪ್ರಿಟಿಂಗ್, ಅಪ್ಟಿಕಲ್ಸ್, ಅಕ್ಕಿ, ಹಿಟ್ಟು, ಅಡುಗೆ ಎಣ್ಣೆ ಮಿಲ್‍ಗಳು ಮತ್ತು ಅಂಗಡಿಗಳು, ಟೈಯರ್ ಮತ್ತು ಟ್ಯೂಬ್ ಅಂಗಡಿಗಳು, ಮಿನರಲ್ ವಾಟರ್ ಮಾರಾಟ ಅಂಗಡಿಗಳು, ಮೊಬೈಲ್ ರಿಪೇರಿ ಅಂಗಡಿಗಳು, ಆಹಾರ ಪಾರ್ಸಲ್ ಮತ್ತು ಹೋಂ ಡೆಲೆವರಿಗೆ ಅನುಮತಿ, ಗ್ಯಾಸ್ ಮತ್ತು ಸ್ಟೌವ್ ರಿಪೇರಿ, ಪ್ರತ್ಯೇಕವಾಗಿರುವ ಕಿರಾಣಿ ಅಂಗಡಿಗಳು, ನೀರು ಮತ್ತು ನೈರ್ಮಲ್ಯದ ಕಾಮಗಾರಿಗಳಿಗೆ ಸಂಬಂಧಿಸಿದ ಅಂಗಡಿಗಳಿಗೆ ಅವಕಾಶ ನೀಡಲಾಗಿದೆ. ಈ ಎಲ್ಲಾ ಅಂಗಡಿಗಳು ತಮ್ಮ ಶೇ.50 ರಷ್ಟು ಕೆಲಸಗಾರರನ್ನು ಬಳಸಿಕೊಳ್ಳಬೇಕು. ಅವರಿಗೆ ಮಾಸ್ಕ್, ಸಾಮಾಜಿಕ ಅಂತರದ ನಿಯಮ ಪಾಲನೆ ಕಡ್ಡಾಯ.

ಹುಬ್ಬಳ್ಳಿ ಶಹರದಲ್ಲಿ ಅಂಗಡಿಗಳನ್ನು ತೆರೆಯಲು ಅವಕಾಶವಿಲ್ಲ
ಜಿಲ್ಲೆಯಾದ್ಯಂತ ಎಲ್ಲ ಶಿಕ್ಷಣ ತರಬೇತಿ, ಕೋಚಿಂಗ್ ಕ್ಲಾಸ್‍ಗಳು ತೆರೆಯಲು ಅವಕಾಶವಿಲ್ಲ. ಆಟೋರಿಕ್ಷ್, ಸೈಕಲ್ ರಿಕ್ಷಾ ಸೇರಿದಂತೆ, ಟ್ಯಾಕ್ಸಿ, ಕ್ಯಾಬ್ ಸೇವೆಗಳು ಇಲ್ಲ. ಸಿನಿಮಾ ಟಾಕಿಸ್, ಮಾಲ್, ಶಾಪಿಂಗ್ ಕಾಂಪ್ಲೆಕ್ಸ್, ಜಿಮ್, ಸ್ಪೋಟ್ರ್ಸ್ ಕಾಂಪ್ಲೆಕ್ಸ್, ಈಜುಗೋಳ, ಮನರಂಜನಾ ಪಾರ್ಕ್, ಥಿಯೇಟರ್, ಬಾರ್‍ಗಳು, ಸಭಾಂಗಣಗಳಲ್ಲಿ ಚಟುವಟಿಕೆಗಳ ನಿರ್ಬಂಧ ಮುಂದುವರಿಯಲಿದೆ. ಎಲ್ಲ ರೀತಿಯ ಸಾಮಾಜಿಕ, ರಾಜಕೀಯ, ಕ್ರೀಡಾ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ನಿಷೇಧ ಮುಂದುವರಿಯಲಿದೆ. ಎಲ್ಲಾ ಧರ್ಮಗಳ ಪ್ರಾರ್ಥನಾ ಮಂದಿರಗಳಲ್ಲಿ ಅದರ ಅನುಯಾಯಿಗಳು ಸೇರುವುದನ್ನು ನಿರ್ಬಂಧಿಸಲಾಗಿದೆ. ಮಾರ್ಕೇಟ್ ಕಾಂಪ್ಲೆಕ್ಸ್‌ಗಳು, ಮಲ್ಟಿಬ್ರ್ಯಾಂಡ್ ಹಾಗೂ ಸಿಂಗಲ್ ಬ್ರ್ಯಾಂಡ್‍ಗಳ ಮಾಲ್‍ಗಳು ಮುಚ್ಚಿರಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದಿಂದ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ನೀಟ್ ವ್ಯವಸ್ಥೆ ಕೊನೆಯಾದರೆ ಮಾತ್ರ ರಾಜ್ಯದ ಮಕ್ಕಳಿಗೆ ನ್ಯಾಯ ಸಿಗಲು ಸಾಧ್ಯ : ಮೋಹನ್ ದಾಸರಿ ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಕೊಟ್ಟು ಹಣ ಉಳಿಯುತ್ತದೆ : ಎಎಪಿ ಜೂ.24ರಂದು ಶಿವಮೊಗ್ಗದಲ್ಲಿ ರಾಷ್ಟ್ರ, ರಾಜ್ಯ ರೈತ ಮುಖಂಡರ ಸಮಾವೇಶ: ಕುರುಬೂರ್ ಶಾಂತಕುಮಾರ್ ಸಂತ್ರಸ್ತೆ ಅಪರಹರಣ ಪ್ರಕರಣ: ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು KSRTCಯಿಂದ 300ಕ್ಕೂ ಹೆಚ್ಚು ಹೊಸ ಮಾರ್ಗಗಳಲ್ಲಿ ಬಸ್‌ ಓಡಾಟ: ಸಚಿವ ರಾಮಲಿಂಗಾರೆಡ್ಡಿ BMTC: 50ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳ ಚಾಲಕರಿಗೆ ಗೇಟ್‌ಪಾಸ್‌ ಅತ್ಯಾಚಾರ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನ ಎಸ್‌ಐಟಿ ಕಸ್ಟಡಿ ಅಂತ್ಯ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ವಿರೋಧಿಸಿ ನಾಳೆ ರಾಜ್ಯಾದ್ಯಂತ ಎಎಪಿ ಪ್ರತಿಭಟನೆ ನಟ ದರ್ಶನ್‌ ಸ್ಥಿತಿಗೆ ಮರುಗಿ ಅಭಿಮಾನಿ ಅನ್ನನೀರು ಬಿಟ್ಟು ಆತ್ಮಹತ್ಯೆಗೆ ಶರಣು?