NEWSಕೃಷಿ

ಧಾರವಾಡ ಜಿಲ್ಲಾದ್ಯಂತ ಸಾಮಗ್ರಿ ವಿತರಣೆಗೆ ವಿನೂತನ ವ್ಯವಸ್ಥೆ

ಕಿರಾಣಿ, ತರಕಾರಿ ವ್ಯಾಪಾರಿಗಳಿಗೆ ಅನುಕ್ರಮ ಸಂಖ್ಯೆ : ಜಿಲ್ಲಾಧಿಕಾರಿ ದೀಪಾ ಚೋಳನ್

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಘೋಷಿಸಿರುವುದರಿಂದ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲ ಕಿರಾಣಿ ಹಾಗೂ ತರಕಾರಿ ವ್ಯಾಪಾರಿಗಳಿಗೆ ಅನುಕ್ರಮ ಸಂಖ್ಯೆ ನೀಡಿ, ಸಮಸಂಖ್ಯೆಯವರು ಒಂದು ದಿನ ಮತ್ತು ಬೆಸ ಸಂಖ್ಯೆ ಹೊಂದಿರುವವರು ಮತ್ತೊಂದು ದಿನ ಅಂಗಡಿ ತೆರೆದು ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಮತ್ತು ಸೇವೆಗಳನ್ನು ಪೂರೈಸಲು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಅವರು ಮಹಾನಗರ ಪಾಲಿಕೆ ಮತ್ತು ಪೊಲೀಸ್ ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ಸಾರ್ವಜನಿಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡದೆ ಸಹಕಾರ ನೀಡಬೇಕು ತರಕಾರಿ ಹಾಗೂ ದಿನಸಿ ಸಾಮಾನು ಪೂರೈಸಲು ಅನುಮತಿ ನೀಡಲಾಗಿದ್ದು, ಜನದಟ್ಟಣೆ ಆಗದಂತೆ ಮತ್ತು ಒಬ್ಬರಿಗೊಬ್ಬರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುವಾಗುವಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಪ್ರತಿ ಬಡಾವಣೆಗಳಿಗೆ ಹಾಪಕಾಮ್ಸ್ ಹಾಗೂ ಕಾಯಿಪಲ್ಲೆ ಮಾರುವವರಿಗೆ ಅಡ್ಡಿಪಡಿಸಬಾರದು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತ ಅಹವಾಲುಗಳನ್ನು ಸ್ವೀಕರಿಸಲು ಪ್ರತ್ಯೇಕ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.

ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾಡಿ ಡಾ.ಬಿ.ಸಿ. ಸತೀಶ್, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಕುಮಾರ ಮಾನಕರ, ಡಿವೈಎಸ್‍ಪಿ ರವಿ ನಾಯಕ, ಎಸಿಪಿ ಅನುಷಾ ಜಿ., ಆಹಾರ ಇಲಾಖೆ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐನಾಪೂರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ. ರಾಮಚಂದ್ರ ಮಡಿವಾಳರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಸುಜಾತಾ ಹಸವಿಮಠ, ಆರೋಗ್ಯ ಇಲಾಖೆ ಅಧಿಕಾರಿಗಳಾದ ಡಾ.ಎಸ್.ಎಂ. ಹೊನಕೇರಿ, ಡಾ. ಎಸ್.ಎಚ್. ನಿಂಬಣ್ಣವರ, ಡಾ. ತನುಜಾ ಕೆ., ಡಾ.ಶಶಿ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಸಿ.ಡಿ. ನಾಯಕ, ಅಪ್ಪಯ್ಯ ನಾಲ್ವತವಾಡಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿನಾಯಕ ಪಾಲನಕರ ಪಾಲ್ಗೊಂಡಿದ್ದರು.

ಸಾಮಾಜಿಕ ಅಂತರ ಕಾಯ್ದುಕೊಂಡ ಸಭೆ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಪರಸ್ಪರ ಅಂತರದ ಆಸನಗಳಲ್ಲಿ ಕುಳಿತುಕೊಂಡು ಸಾಮಾಜಿಕ ಅಂತರ ಕಾಯ್ದುಕೊಂಡರು. ಸ್ವತ: ಜಿಲ್ಲಾಧಿಕಾರಿಗಳು ಇದು ಉತ್ತಮ ನಡೆ, ಎಲ್ಲೆಡೆಯೂ ಈ ಅಂತರ ಪಾಲಿಸಿ ಕೊರೊನಾ ವೈರಸ್ ನಿರ್ಮೂಲನೆ ಮಾಡಲು ಶ್ರಮಿಸಬೇಕು ಎಂದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ