ಆರೋಗ್ಯ

ಧಾರ್ಮಿಕ ಸ್ಥಳಗಳ ಮೇಲೆ ತೀವ್ರ ನಿಗಾವಿಡಿ: ಡಿಸಿಎಂ ಗೋವಿಂದ  ಕಾರಜೋಳ

ವಿಡಿಯೋ ಕಾನ್ಫೆರೆನ್ಸ್ ಮೂಲಕ ಕಲಬುರಗಿ ಜಿಲ್ಲೆ ಕೊರೊನಾ ಪರಿಸ್ಥಿತಿ ಅವಲೋಕನ

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಕೊರೋನಾ ಸೋಂಕಿನಿಂದ ವ್ಯಕ್ತಿಯೋರ್ವ ಮೃತರಾದರಿಂದ ಕಲಬುರಗಿಯಲ್ಲಿ ಕೊರೋನಾ ಭೀತಿ ಹೆಚ್ಚಿದ್ದು, ಮುಂಜಾಗ್ರತ ಕ್ರಮವಾಗಿ ಕಲಬುರಗಿ ಜಿಲ್ಲೆಯ ಎಲ್ಲಾ ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ರಾಜ್ಯದ ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ  ಸಚಿವ ಗೋವಿಂದ ಎಂ. ಕಾರಜೋಳ   ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಮಂಗಳವಾರ ಬೆಂಗಳೂರಿನಿಂದ ಜಿಲ್ಲೆಯ ಶಾಸಕರ ಜೊತೆಗೂಡಿ ಕಲಬುರಗಿ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಜಿಲ್ಲೆಯ ಕೊರೋನಾ ಪರಿಸ್ಥಿತಿ ಅವಲೋಕಿಸಿ ಮಾತನಾಡಿದರು.

ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಾದ ಶ್ರೀ ದತ್ತನ ಕ್ಷೇತ್ರ ದೇವಲ ಗಾಣಗಾಪುರಕ್ಕೆ ಮಹಾರಾಷ್ಟ್ರ ರಾಜ್ಯದಿಂದ ಹೆಚ್ಚಿನ ಭಕ್ತರು ಆಗಮಿಸುತ್ತಾರೆ. ಮಹಾರಾಷ್ಟ್ರದಲ್ಲಿ ಈಗಾಗಲೆ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗಿ ಕಂಡುಬಂದಿದ್ದರಿಂದ, ಅಲ್ಲಿಂದ ಬರುವ ಭಕ್ತರ ಮೇಲೆ ನಿಗಾ ವಹಿಸುವ ಅವಶ್ಯಕತೆಯಿದೆ. ಅದೇ ರೀತಿಯಲ್ಲಿ ಕಲಬುರಗಿ ನಗರದ ಖಾಜಾ ಬಂದೇ ನವಾಜ್ ದರ್ಗಾಕ್ಕೆ ಆಂಧ್ರಪ್ರದೇಶ, ತೆಲಂಗಾಣಾದಿಂದ ಜನರು ಬರುತ್ತಾರೆ. ಇಲ್ಲಿ ಜನಸಂದಣಿಯಾಗದಂತೆ ನೋಡಿಕೊಳ್ಳಿ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಇದೇ ಮಾರ್ಚ್ 22 ರಿಂದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಶ್ರೀಶೈಲ್ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಯುಗಾದಿ ಮಹೋತ್ಸವ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳಿಗೆ ಅರಿವು ಮೂಡಿಸುವ ಮೂಲಕ ಹೆಚ್ಚಿನ ಜನ ಅಲ್ಲಿಗೆ ಹೋಗದಂತೆ ಮನವರಿಕೆ ಮಾಡಿ ಎಂದರು.

ಶಾಲೆ-ಕಾಲೇಜುಗಳಿಗೆ ಈಗಾಗಲೆ ರಜೆ ನೀಡಿರುವುದರಿಂದ ವಸತಿ ನಿಲಯದಲ್ಲಿರುವ ಮಕ್ಕಳಿಗೆ ಮನೆಗೆ ಕಳುಹಿಸಿಕೊಡಬೇಕು  ಎಂದು ಸಚಿವರು ನಿರ್ದೇಶನ ನೀಡಿದರು.

ಕೊರೋನಾ ಸೊಂಕಿನಿಂದ ಮೃತರಾದ ಕಲಬುರಗಿ ವ್ಯಕ್ತಿಯ ಮನೆ ಸುತ್ತಮುತ್ತ ತೀವ್ರ ನಿಗಾ ವಹಿಸಬೇಕು ಮತ್ತು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಶರತ್ ಬಿ. ಮಾತನಾಡಿ ಕಲಬುರಗಿ ಮೃತ ವ್ಯಕ್ತಿಯ ಮನೆ ಸುತ್ತಮುತ್ತ 5 ಕಿ.ಮಿ. ವ್ಯಾಪ್ತಿಯನ್ನು ಕಂಟೇನ್‍ಮೆಂಟ್ ಮತ್ತು ಬಫರ್ ಝೋನ್ ಎಂದು ಗುರುತಿಸಿ ಅಲ್ಲಿನ ನಿವಾಸಿಗಳಿಗೆ ಸ್ಕ್ರೀನಿಂಗ್ ಮತ್ತು ಅರಿವು ಮೂಡಿಸುವ ಕಾರ್ಯ ಮುಂದುವರೆದಿದೆ. ಇದಕ್ಕಾಗಿ 3000 ಮನೆಗಳನ್ನು ಗುರುತಿಸಲಾಗಿದೆ. ಇದಲ್ಲದೆ ಜನಸಂದಣಿ ಕಡಿಮೆಗೊಳಿಸಲು ಮಾಲ್, ಸಿನಿಮಾ ಚಿತ್ರಮಂದಿರ, ಬಾರ್ ಮತ್ತು ರೆಸ್ಟೋರೆಂಟ್ ಬಂದ್ ಮಾಡಿದಲ್ಲದೆ ಸಮಾವೇಶ-ಸಮಾರಂಭಗಳಿಗೂ  ಕಡಿವಾಣ ಹಾಕಿದೆ. ಜಿಲ್ಲೆಯ ಗಡಿ ಭಾಗದಲ್ಲಿ 17 ಚೆಕ್ ಪೋಸ್ಟ್ ಸ್ಥಾಪಿಸಿ ಹೊರಗಿನಿಂದ ಬರುವವರನ್ನು ತಪಾಸಣೆ ಮಾಡಲಾಗುತ್ತಿದೆ ಎಂದರು.

ಕಲಬುರಗಿ ನಗರ ಪೊಳಿಸ್ ಆಯುಕ್ತ ಎಂ.ಎನ್.ನಾಗರಾಜ ಮಾತನಾಡಿ ಆರೋಗ್ಯ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ಸರ್ಕಾರದ ಎಲ್ಲಾ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಇ.ಎಸ್.ಐ.ಸಿ.ನಲ್ಲಿ ಸ್ಥಾಪಿಸಿರುವ ಹೋಂ ಕ್ವಾರಂಟೈನ್ ವಾರ್ಡ್‍ಗೆ 100 ಜನ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಿದೆ. 30ನೇ ವಾರ್ಡ್ ಸುತ್ತಮುತ್ತ 5 ಚೆಕ್ ಪೋಸ್ಟ್ ಸ್ಥಾಪಿಸಿ ಒಳ ಮತ್ತು ಹೊರ ಹೋಗುವವರ ಮೇಲೆ ನಿಗಾ ಇರಿಸಿದೆ ಎಂದರು.

Leave a Reply

error: Content is protected !!
LATEST
ಕೋರಮಂಗಲದ ಬಿಡಿಎ ಕಾಂಪ್ಲೆಕ್ಸ್ ಕೆಡವಿ ಮಾಲ್ ಕಟ್ಟುವ ಬಿಡಿಎ ನಿರ್ಧಾರಕ್ಕೆ ಎಎಪಿ ವಿರೋಧ ಜೈಲಲ್ಲೇ ದೇವರಾಜೇಗೌಡರ ಜೀವಕ್ಕೆ ಅಪಾಯವಿದೆ : ಸುರೇಶಗೌಡ ಆತಂಕ KSRTC ಬಸ್‌- ಕಾರು ನಡುವೆ ಭೀಕರ ಅಪಘಾತ: ಕಾರು ಚಾಲಕ ಸಾವು, ನಾಲ್ವರ ಸ್ಥಿತಿ ಗಂಭೀರ ಜಿಆರ್ ಫಾರ್ಮ್ ಹೌಸ್‌ನಲ್ಲಿ ರೇವ್​ ಪಾರ್ಟಿ: ನಟಿಯರು ಸೇರಿ 80ಕ್ಕೂ ಹೆಚ್ಚು ಬಂಧನ KSRTC: ಹೆದ್ದಾರಿಯಲ್ಲಿ ಕೆಟ್ಟುನಿಂತ ಬಸ್‌ಗಳು - ಕಿಮೀ ವರೆಗೆ ಟ್ರಾಫಿಕ್ ಜಾಮ್ KSRTC: ₹185 ಟಿಕೆಟ್‌ ಕೊಟ್ಟು ₹200 ಕೇಳಿದ ಕಂಡಕ್ಟರ್‌ - ದೂರು ಕೊಟ್ಟ ಪ್ರಯಾಣಿಕ ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು ಪತ್ನಿ, ಮಗನಿಗೆ ಮಾಸಿಕ ಜೀವನಾಂಶ ಪಾವತಿಸದ ಪತಿ ಆಸ್ತಿ ಮುಟ್ಟುಗೋಲು: ಹೈಕೋರ್ಟ್ ಮಹತ್ವದ ಆದೇಶ ಬೆಳ್ಳಂಬೆಳಗ್ಗೆ ಸರಣಿ ಅಪಘಾತ: ಕಾರು ನಜ್ಜುಗುಜ್ಜು - ಪ್ರಯಾಣಿಕರು ಸೇಫ್ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ:‌ ಶೇ.25.5 ವೇತನ ಹೆಚ್ಚಳ ಬಹುತೇಕ ಖಚಿತ