NEWSಆರೋಗ್ಯ

ನಂಜನಗೂಡಿಗೆ 20 ಸಾವಿರ ಮಾಸ್ಕ್ ವಿತರಿಸಿದ ಸಚಿವ ಸೋಮಶೇಖರ್

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ಅತಿಹೆಚ್ಚು ಕೊರೊನಾ ಪ್ರಕರಣ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಜನತೆಯ ಆರೋಗ್ಯದ ದೃಷ್ಟಿಯಿಂದ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೈಯುಕ್ತಿಕವಾಗಿ 20 ಸಾವಿರ ಮಾಸ್ಕ್‌ಗಳನ್ನು ವಿತರಣೆ ಮಾಡಿದರು.

ನಂಜನಗೂಡಿನ ಮಿನಿ ವಿಧಾನಸೌಧದಲ್ಲಿ ಟಾಸ್ಕ್‌ ಫೋರ್ಸ್ ಅಧಿಕಾರಿಗಳ ಜೊತೆ ಸಭೆ ನಡೆದ ನಂತರ ಅಲ್ಲಿನ ಸ್ಥಳೀಯ ತಾಲೂಕು ಆಡಳಿತಕ್ಕೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರ ಮೂಲಕ 20 ಸಾವಿರ ಮಾಸ್ಕ್‌ಗಳನ್ನು ಸಚಿವರು ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಕೊರೊನಾ ರೋಗಕ್ಕೆ ಇನ್ನೂ ಮದ್ದು ಕಂಡುಹಿಡಿಯಲಾಗಿಲ್ಲ. ಆದರೆ, ಜನತೆ ಜಾಗ್ರತೆಯಿಂದ ಇದ್ದರೆ ಯಾವುದೇ ಸಮಸ್ಯೆ ಆಗದು. ಇದಕ್ಕೆ ಬಹುಮುಖ್ಯವಾಗಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳುವುದು, ವ್ಯಕ್ತಿಗಳ ಜೊತೆ ಮಾತನಾಡುವಾಗ ಇಲ್ಲವೇ ಸಂಚರಿಸುವಾಗ ಮಾಸ್ಕ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಕೈಗಳನ್ನು ಆಗಾಗ ಸ್ಯಾನಿಟೈಸರ್‍ನಿಂದ ಶುಚಿಗೊಳಿಸಿಕೊಳ್ಳುವುದು ಇಲ್ಲವೇ ಸೋಪಿನಿಂದ ತೊಳೆದುಕೊಳ್ಳಬೇಕು ಎಂದು ಜನರಿಗೆ ಜಾಗೃತಿ ಮೂಡಿಸಿದರು.

ನಂಜನಗೂಡು ಜನತೆ ಯಾವುದೇ ಕಾರಣಕ್ಕೂ ಭಯ ಬೀಳುವುದು ಬೇಡ. ನಾನು ಈ ಹಿಂದೆಯೇ ಹೇಳಿದಂತೆ ಈ ಕ್ಷೇತ್ರದ ಜನತೆಯ ಪರ ಸರ್ಕಾರ ಹಾಗೂ ಜಿಲ್ಲಾಡಳಿತ ಇದ್ದು, ಸಹಾಯಕ್ಕೆ ಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ಈಗಾಗಲೇ ನಂಜನಗೂಡು ಕ್ಷೇತ್ರದಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿದ್ದು, ಸದ್ಯ ಹೊಸ ಪ್ರಕರಣಗಳೂ ಪತ್ರೆಯಾಗುತ್ತಿಲ್ಲದಿರುವುದು ಸಮಾಧಾನಕರ ವಿಚಾರ. ಇದಕ್ಕೆ ಜಿಲ್ಲಾಧಿಕಾರಿಗಳು ಮತ್ತವರ ತಂಡದ ಶ್ರಮವೇ ಕಾರಣ ಎಂದು ಶ್ಲಾಘಿಸಿದರು. ನಾನು ಅಧಿಕಾರಿಗಳಂತೆ 24×7 ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಸಂದರ್ಭದಲ್ಲಿ ಶಾಸಕರು ನನ್ನನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...