NEWSನಮ್ಮರಾಜ್ಯ

ನೌಕರರೇ ಸಾರಿಗೆಯ ಆಧಾರ ಸ್ತಂಭ, ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಸಚಿವ ಶ್ರೀರಾಮುಲು ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ನಡೆಸಿದ ವೇಳೆ ಸಾರಿಗೆ ನೌಕರರ ವಿರುದ್ಧ ದಾಖಲಾಗಿರುವ ಪೊಲೀಸ್‌ ಪ್ರಕರಣಗಳು, ವಜಾ, ವರ್ಗಾವಣೆ ಮತ್ತು ಅಮಾನತು ಸಂಬಂಧ ನಾಲ್ಕೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಚಿವ ಬಿ.ಶ್ರೀರಾಮುಲು ಸುದೀರ್ಘ ಚರ್ಚೆ ನಡೆಸಿದ್ದಾರೆ.

ಮಂಗಳವಾರ ವಿಧಾನಸೌಧದ ಕಚೇರಿಯಲ್ಲಿ‌ ಆಯೋಜಿಸಿದ್ದ ಸಾರಿಗೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಲವಾರು ವಿಷಯಗಳ ಕುರಿತು ಚರ್ಚಿಸಿ, ಅಗತ್ಯ ಸಲಹೆ ಸೂಚನೆಗಳನ್ನು ನೀಡಿದ್ದಾರೆ.

ನೌಕರರೇ ಸಂಸ್ಥೆಗೆ ಆಧಾರ ಸ್ತಂಭಗಳಾಗಿದ್ದು, ಯಾವುದೇ ಯೋಜನೆ ರೂಪಿಸಿದರೂ, ಅವರನ್ನು ಗಮನದಲ್ಲಿಟ್ಟುಕೊಂಡು ರೂಪಿಸಬೇಕು. ಯವುದೇ ಕಿರುಕುಳಗಳನ್ನು ನೌಕರರಿಗೆ ಘಟಕಗಳಲ್ಲಿ ನೀಡದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಾಲ್ಕೂ ನಿಗಮಗಳು ನಷ್ಟದಲ್ಲಿದ್ದು, ಸರಿಯಾಗಿ ಸಮಯಕ್ಕೆ ವೇತನ ಕೊಡಲು ಆಗುತ್ತಿಲ್ಲ. ಈರೀತಿ ಆದರೆ ಹೇಗೆ? ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುತ್ತೇನೆ. ಇನ್ನು ಬಸ್‌ನಿಂದ ಬರುವ ಆದಾಯವನ್ನು ಬಿಟ್ಟು ಬೇರೆ ಬೇರೆ ಮೂಲಗಳಿಂದ ಆದಾಯ ಬರುವ ನಿಟ್ಟಿನಲ್ಲಿ ನಾಲ್ಕೂ ನಿಗಮಗಳು ಯೋಜನೆಗಳನ್ನು ರೂಪಿಸಿ ಶೀಘ್ರದಲ್ಲೇ ಅನುಷ್ಠಾನಗೊಳಿಸುವ ಮೂಲಕ ಆರ್ಥಿಕವಾಗಿ ಸಂಸ್ಥೆಗಳನ್ನು ಮೇಲೆತ್ತಲು ಮುಂದಾಗಬೇಕು ಎಂದು ತಿಳಿಸಿದ್ದಾರೆ.

ಇನ್ನು ಈ ವೇಳೆ ಸಾರಿಗೆ ನೌಕರರು ಮುಷ್ಕರ ನಂತರ ನಿತ್ಯ ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳನ್ನು ಸಚಿವರು ಕೇಳಿದ್ದು, ಅಧಿಕಾರಿಗಳು ಕೂಡ ನೌಕರರು ಸದ್ಯದ ಪರಿಸ್ಥಿತಿಯಲ್ಲಿ ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೆಲವು ಪ್ರಕರಣಗಳು ಕೋರ್ಟ್‌ನಲ್ಲಿ ಇರುವುದರಿಂದ ಶೀಘ್ರದಲ್ಲಿ ಪರಿಹರಿಸಬೇಕು ಎಂಬ ಅಭಿಪ್ರಾಯವನ್ನು ನಾಲ್ಕೂ ನಿಗಮಗಳ ಎಂಡಿಗಳು ತಿಳಿಸಿದ್ದಾರೆ.

ಇನ್ನು ಇದೇ ಆಗಸ್ಟ್‌ 27ರಂದು ಹೈ ಕೋರ್ಟ್‌ನಲ್ಲಿ ನೌಕರರ ಅಮಾನತು, ವಜಾ ಮತ್ತು ವರ್ಗಾವಣೆ ಸಂಬಂಧದ ಪ್ರಕರಣ ವಿಚಾರಣೆಗೆ ಬರಲಿದ್ದು, ನಿಗಮಗಳಿಂದ ಏನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಬಗ್ಗೆಯೂ ಸಮಗ್ರ ಚರ್ಚೆ ನಡೆದಿದ್ದು, ಅಂದು ಕೋರ್ಟ್‌ನಲ್ಲಿ ಏನೆಲ್ಲ ಆಗಬಹುದು ಎಂಬುದನ್ನು ನೋಡಿಕೊಂಡು ನಾವು ಮುಂದಿನ ಹೆಜ್ಜೆ ಇಡೋಣ ಎಂದು ಸಚಿವರಿಗೆ ಅಧಿಕಾರಿಗಳು ವಿವರಿಸಿದ್ದಾರೆ.

ಇನ್ನು ಸಾರಿಗೆಯ ಬಹುತೇಕ ಅಧಿಕಾರಿಗಳು ನೌಕರರು ಅನುಭವಿಸುತ್ತಿರುವ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದಿದ್ದು, ಶೀಘ್ರ ಪರಿಹರಿಸುವ ನಿಟ್ಟಿನಲ್ಲೂ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಸಚಿವರೂ ಸೇರಿ ಒಂದು ಒಳ್ಳೆ ನಿರ್ಧಾರಕ್ಕೆ ಬರುವಂತೆ ಮುಖ್ಯಮಂತ್ರಿಗಳ ಗಮನಕ್ಕೂ ತರಬೇಕು ಎಂದು ನೌಕರರ ಪರವಾಗಿ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಅತೀ ಶೀಘ್ರದಲ್ಲೇ ನೌಕರರಿಗೆ ಸಿಹಿ ಸುದ್ದಿ ಕೊಡೋಣ
ಇದಕ್ಕೆ ಸ್ಥಳದಲ್ಲೇ ಇದ್ದ ಕೆಲ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ನೌಕರರಿಂದ ನಿಗಮಗಳಿಗೆ ಆರ್ಥಿಕ ಹೊರೆಯಾಗಿದೆ. ಹೀಗಾಗಿ ಈಗಲೇ ನೌಕರರ ಪರ ಯಾವುದೇ ಒಳ್ಳೆ ನಿರ್ಧಾರ ತೆಗೆದುಕೊಳ್ಳುವುದು ಬೇಡ ಎಂಬಂತೆ ಸಚಿವರ ಮನಸ್ಸನ್ನು ಬದಲಿಸಲು ಯತ್ನಿಸಿದ್ದರು. ಆದರೆ ಅಂಥ ಅಧಿಕಾರಿಗಳ ಮನವಿಯನ್ನು ಕಿವಿಗೆ ಹಾಕಿಕೊಳ್ಳದ ಸಚಿವರು ಅತೀ ಶೀಘ್ರದಲ್ಲೇ ನೌಕರರಿಗೆ ಸಿಹಿ ಸುದ್ದಿ ಕೊಡೋಣ ಎಂದು ಹೇಳಿದ್ದಾರೆ. ಹೀಗಾಗಿ ನೌಕರರು ಇತರ ಇಲಾಖೆಗಳ ನೌಕರರಂತೆ ಜೀವನ ಸಾಗಿಸುವ ಕಾಲ ಸನ್ನಿಹಿತವಾಗುತ್ತಿದೆ ಎಂದೇ ಹೇಳಬಹುದು.

ಸದ್ಯ ನೌಕರರ ಮೇಲೆ ಇರುವ ಪೊಲೀಸ್‌ ಪ್ರಕರಣಗಳ ಬಗ್ಗೆ ಸಚಿವರು ಹೆಚ್ಚು ಗಮನಕೊಡುತ್ತಿದ್ದು, ಶೀಘ್ರದಲ್ಲಿ ಎಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿ ಎಂದಿನಂತೆ ನೌಕರರು ಕರ್ತವ್ಯಕ್ಕೆ ಮರಳುವಂತೆ ಮಾಡುವುದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಅಲ್ಲದೆ ಡಿಪೋಗಳಲ್ಲಿ ನಡೆಯುತ್ತಿರುವ ಲಂಚಗುಳಿತನಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಕಡಿವಾಣ ಹಾಕಬೇಕು. ಅಲ್ಲದೆ ಕರ್ತವ್ಯಕ್ಕೆ ಹಾಜರಾಗುವ ಎಲ್ಲ ನೌಕರರಿಗೂ ಡ್ಯೂಟಿ ಕೊಡಬೇಕು. ಒಂದು ವೇಳೆ ಬೆಳಗ್ಗೆಯಿಂದ ಸಂಜೆ ವರೆಗೂ ಡ್ಯೂಟಿಕೊಡದೆ ಕಾಯಿಸಿದ ಡಿಪೋ ವ್ಯವಸ್ಥಾಪಕರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮತ್ತೆ ಅದೇ ರೀತಿ ನೌಕರರಿಗೆ ತೊಂದರೆ ಕೊಡುತ್ತಿದ್ದರೆ ಅಂತಹ ಡಿಎಂಗಳನ್ನು ಅಮಾನತು ಮಾಡಿ ಎಂದು ನಾಲ್ಕೂ ನಿಗಮಗಳ ಎಂಡಿಗಳಿಗೆ ಸೂಚಿಸಿದ್ದಾರೆ.

ಇನ್ನು ಸಾರಿಗೆ ನಿಗಮಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವ ಬಗ್ಗೆ ದಿನಬೆಳಗಾದರೆ ಒಂದಲ್ಲ ಒಂದು ಮಾಧ್ಯಮಗಳಲ್ಲಿ ಸುದ್ದಿ ಬರುತ್ತಲೇ ಇದೆ. ಇದನ್ನು ಗಮನಿಸಿದರೆ ಸಂಸ್ಥೆಗಳು ಎಷ್ಟರಮಟ್ಟಿಗೆ ಭ್ರಷ್ಟಾಚಾರದ ಕೂಪಗಳಾಗಿ ಮಾರ್ಪಟ್ಟಿವೆ ಎಂಬುದು ತಿಳಿಯುತ್ತದೆ. ಹೀಗಾಗಿ ನನ್ನ ಅಧಿಕಾರವಧಿಯಲ್ಲಿ ಇಂಥ ನಡೆಗೆ ಅವಕಾಶ ಕೊಡುವುದಿಲ್ಲ. ಲಂಚ ಪಡೆದಿರುವುದು ಸಾಬೀತಾದರೆ ಅಂಥ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂಬ ಎಚ್ಚರಿಕೆಯನ್ನು ಸಚಿವ ಶ್ರೀರಾಮುಲು ರವಾನಿಸಿದ್ದಾರೆ.

ಈ ಸಂದರ್ಭದಲ್ಲಿ ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಸಾರಿಗೆ ಇಲಾಖೆ ಆಯುಕ್ತರಾದ ಶಿವಕುಮಾರ್, ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ್, ಬಿಎಂಟಿಸಿ ಎಂಡಿ ಡಾ. ಎಂ.ಟಿ. ರೇಜು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಎಂಡಿ ಕೂರ್ಮಾ ರಾವ್, ಎನ್ ಡಬ್ಲ್ಯುಕೆಆರ್‌ಟಿಸಿ ಎಂಡಿ ಗುರುದತ್ ಹೆಗ್ಡೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು