NEWSನಮ್ಮರಾಜ್ಯ

ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಬೆಂಗಳೂರು ನಗರದ ಉಸ್ತುವಾರಿಯನ್ನು ತನ್ನಲ್ಲೇ ಉಳಿಸಿಕೊಂಡ ಸಿಎಂ ಬಿಎಸ್‌ವೈ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ  ಬಿ.ಎಸ್‌. ಯಡಿಯೂರಪ್ಪ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹೆಜ್ಜೆಹಾಕಿದ್ದು, ಅದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿಯನ್ನು ತಮ್ಮಲ್ಲೇ ಉಳಿಸಿಕೊಂಡಿದ್ದು, ಇನ್ನುಳಿದಂತೆ  ಉಪ ಮುಖ್ಯಮಂತ್ರಿ ಡಾ. ಸಿ.ಎನ್‌ ಅಶ್ವಥ್‌ ನಾರಯಣ ಅವರಿಗೆ ರಾಮನಗರ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ರಾಯಚೂರು ಜಿಲ್ಲೆಯ ಉಸ್ತುವಾರಿ ವಹಿಸಿದ್ದಾರೆ.

ಉಪ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವ ಗೋವಿಂದ ಎಂ. ಕಾರಜೋಳ ಅವರಿಗೆ ಬಾಗಲಕೋಟೆ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಉಸ್ತುವಾರಿ ನೀಡಲಾದೆ. ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವ ಕೆ.ಎಸ್‌ ಈಶ್ವರಪ್ಪ ಅವರಿಗೆ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ವಹಿಸಲಾಗಿದೆ.

ಸಚಿವರು ಹಾಗೂ ಉಸ್ತುವಾರಿ ಜಿಲ್ಲೆಗಳ ಪಟ್ಟಿ

ಜಗದೀಶ್‌ ಶೆಟ್ಟರ್ (ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು)- ಬೆಳಗಾವಿ,ಧಾರವಾಡ, ಆರ್‌. ಅಶೋಕ್‌ (ಕಂದಾಯ ಸಚಿವರು)-ಬೆಂಗಳೂರು ಗ್ರಾಮಾಂತರ.

ಎಸ್‌. ಸುರೇಶ್‌ ಕುಮಾರ್ (ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ)-ಚಾಮರಾಜನಗರ,
ವಿ. ಸೋಮಣ್ಣ (ವಸತಿ)- ಕೊಡಗು, ಬಿ.ಶ್ರೀರಾಮುಲು (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ)-ಚಿತ್ರದುರ್ಗ.

ಕೋಟಾ ಶ್ರೀನಿವಾಸ ಪೂಜಾರಿ (ಮುಜುರಾಯಿ, ಮೀನುಗಾರಿಕೆ, ಬಂದರು)- ದಕ್ಷಿಣ ಕನ್ನಡ.  ಸಿ.ಟಿ ರವಿ(ಪ್ರವಾಸೋದ್ಯಮ, ಕನ್ನಡ ಸಂಸ್ಕೃತಿ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡೆ)-ಚಿಕ್ಕಮಗಳೂರು.

ಜೆ.ಸಿ ಮಾದುಸ್ವಾಮಿ ( ಕಾನೂನು ಮತ್ತು ಸಂಸದೀಯ ವ್ಯವಹಾರಗಳು)-ತುಮಕೂರು. ಬಸವರಾಜ ಬೊಮ್ಮಾಯಿ (ಗೃಹ)- ಹಾವೇರಿ, ಉಡುಪಿ. ಚಂದ್ರಕಾಂತಗೌಡ ಚನ್ನಪ್ಪಗೌಡ ಪಾಟೀಲ ( ಗಣಿ ಮತ್ತು ಭೂ ವಿಜ್ಞಾನ)- ಗದಗ.

ಡಾ. ಕೆ ಸುಧಾಕರ್ (ವೈದ್ಯಕೀಯ ಶಿಕ್ಷಣ)- ಚಿಕ್ಕಬಳ್ಳಾಪುರ. ಎಸ್‌.ಟಿ ಸೋಮಶೇಖರ್‌( ಸಹಕಾರ)- ಮೈಸೂರು. ಕೆ.ಸಿ ನಾರಯಣಗೌಡ (ಪೌರಾಡಳಿ, ತೋಟಗಾರಿಕೆ)-ಮಂಡ್ಯ. ಆನಂದ್‌ ಸಿಂಗ್ (ಅರಣ್ಯ)-ಬಳ್ಳಾರಿ.

ಪ್ರಭು ಚವ್ಹಾಣ್‌ (ಪಶುಸಂಗೋಪನೆ)-ಬೀದರ್‌, ಯಾದಗಿರಿ. ಎಚ್‌.ನಾಗೇಶ್‌ ( ಅಬಕಾರಿ)-ಕೋಲಾರ. ಶಶಿಕಲಾ ಜೊಲ್ಲೆ (ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ)- ವಿಜಯಪುರ. ಶಿವರಾಮ್ ಹೆಬ್ಬಾರ್ (ಕಾರ್ಮಿಕ ಮತ್ತು ಸಕ್ಕರೆ)- ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಿಕೊಡಲಾಗಿದೆ.

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ