NEWSನಮ್ಮರಾಜ್ಯರಾಜಕೀಯ

ನೂತನ ಸಚಿವರಿಗೆ ಖಾತೆ ಹಂಚಿಕೆ: ಸುನಿಲ್ ಕುಮಾರ್‌ಗೆ ಇಂಧನ, ಶ್ರೀರಾಮುಲುಗೆ ಸಾರಿಗೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟದ ನೂತನ ಸಚಿವರಿಗೆ ಪ್ರಮಾಣ ವಚನ ಸ್ವೀಕರಿಸಿದ ಮೂರು ದಿನದ ಬಳಿಕ ಖಾತೆ ಹಂಚಿಕೆ ಮಾಡಲಾಗಿದೆ.

ಬೆಂಗಳೂರು ನಗರ ಅಭಿವೃದ್ಧಿ ಖಾತೆಯನ್ನು ಮುಖ್ಯಮಂತ್ರಿಗಳು ತಮ್ಮ ಬಳಿಯಲ್ಲಿಯೇ ಉಳಿಸಿಕೊಂಡಿದ್ದಾರೆ. ಈ ನಡುವೆ ಸಂಘ ನಿಷ್ಠರಿಗೆ ಪ್ರಬಲ ಖಾತೆಗಳ ಹಂಚಿಕೆಯಾಗಿರೋದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೊದಲ ಬಾರಿ ಸಂಪುಟ ಪ್ರವೇಶಿಸಿರುವ ಸುನಿಲ್ ಕುಮಾರ್ ಪವರ್ ಫುಲ್ ಖಾತೆ ಇಂಧನ ಇಲಾಖೆಯೇ ಸಿಕ್ಕಿದೆ.

ಖಾತೆ ಹಂಚಿಕೆ ಪಟ್ಟಿ
* ಸಿಎಂ ಬಸವರಾಜ ಬೊಮ್ಮಾಯಿ – ಆರ್ಥಿಕ, ಗುಪ್ತಚರ, ಸಂಪುಟ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ
* ಆರ್. ಅಶೋಕ್ – ಕಂದಾಯ
* ಗೋವಿಂದ ಕಾರಜೋಳ – ಬೃಹತ್ ನೀರಾವರಿ ಇಲಾಖೆ
* ಅರಗ ಜ್ಞಾನೇಂದ್ರ – ಗೃಹ ಇಲಾಖೆ

* ಸುನಿಲ್ ಕುಮಾರ್ – ಇಂಧನ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ
* ಬಿ.ಸಿ.ಪಾಟೀಲ್ -ಕೃಷಿ ಇಲಾಖೆ
* ಸುಧಾಕರ್- ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ

* ಕೆ.ಎಸ್.ಈಶ್ವರಪ್ಪ – ಗ್ರಾಮೀಣಾಭಿವೃದ್ಧಿ
* ಗೋಪಾಲಯ್ಯ – ಅಬಕಾರಿ ಇಲಾಖೆ
* ಅಶ್ವಥ ನಾರಾಯಣ – ಐಟಿಬಿಟಿ, ಉನ್ನತ ಶಿಕ್ಷಣ ಇಲಾಖೆ

* ಕೋಟ ಶ್ರೀನಿವಾಸ ಪೂಜಾರಿ – ಸಮಾಜ ಕಲ್ಯಾಣ ಇಲಾಖೆ
* ಮುರುಗೇಶ್ ನಿರಾಣಿ – ಬೃಹತ್ ಮತ್ತುಮಧ್ಯಮ ಕೈಗಾರಿಕೆ
* ಶ್ರೀರಾಮುಲು – ಸಾರಿಗೆ, ಹಿಂದುಳಿದ ವರ್ಗಗಳ ಕಲ್ಯಾಣ

* ಸೋಮಣ್ಣ – ವಸತಿ ಮತ್ತು ಮೂಲಸೌಕರ್ಯ
* ಉಮೇಶ್ ಕತ್ತಿ – ಅರಣ್ಯ ಇಲಾಖೆ, ಆಹಾರ ಇಲಾಖೆ
* ಮಾಧುಸ್ವಾಮಿ- ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆ, ಸಣ್ಣ ನೀರಾವರಿ ಇಲಾಖೆ

* ಸಿ.ಸಿ.ಪಾಟೀಲ್- ಲೋಕೋಪಯೋಗಿ ಇಲಾಖೆ
* ಶಶಿಕಲಾ ಜೊಲ್ಲೆ – ಮುಜರಾಯಿ ಇಲಾಖೆ, ಹಜ್ ಮತ್ತು ವಕ್ಫ್
* ಎಸ್.ಅಂಗಾರ – ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಇಲಾಖೆ

* ಆನಂದ್ ಸಿಂಗ್ – ಪ್ರವಾಸೋದ್ಯಮ ಇಲಾಖೆ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ
* ಮುನಿರತ್ನ – ತೋಟಗಾರಿಕೆ ಇಲಾಖೆ
* ಶಿವರಾಂ ಹೆಬ್ಬಾರ್- ಕಾರ್ಮಿಕ ಇಲಾಖೆ

* ಎಂಟಿಬಿ ನಾಗರಾಜ್ – ಪೌರಾಡಳಿತ
* ಬಿ.ಸಿ.ನಾಗೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ
* ಪ್ರಭು ಚೌಹಾನ್- ಪಶುಶಂಗೋಪನೆ

* ಎಸ್.ಟಿ.ಸೋಮಶೇಖರ್ – ಸಹಕಾರ
* ಹಾಲಪ್ಪ ಆಚಾರ್ – ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ

* ಶಂಕರ್ ಪಾಟೀಲ್ ಮುನೇನಕೊಪ್ಪ – ಜವಳಿ ಮತ್ತು ಕೈಮಗ್ಗ ಇಲಾಖೆ, ಸಕ್ಕರೆ ಇಲಾಖೆ
* ನಾರಾಯಣ್ ಗೌಡ – ರೇಷ್ಮೆ ಇಲಾಖೆ, ಯುವ ಜನ ಮತ್ತು ಕ್ರೀಡಾ ಇಲಾಖೆ
* ಬೈರತಿ ಬಸವರಾಜ್ – ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು