NEWSನಮ್ಮರಾಜ್ಯರಾಜಕೀಯ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 29 ಶಾಸಕರು: ಸಿಎಂ ಬಿಎಸ್‌ಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಿದೆ. ಒಟ್ಟು 29 ಶಾಸಕರು ನೂತನ ಸಚಿವರಾಗಿ ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಬಗ್ಗೆ ಮಾಹಿತಿ ನೀಡಿದರು. ಸಚಿವ ಸಂಪುಟದಲ್ಲಿ 8 ಲಿಂಗಾಯಿತ, 7 ಒಬಿಸಿ, 7 ಒಕ್ಕಲಿಗ, 3 ದಲಿತ, ತಲಾ ಒಂದು ಎಸ್‌ಟಿ, ರೆಡ್ಡಿ ಹಾಗೂ ಮಹಿಳೆಗೆ ಸ್ಥಾನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಯಾರಿಗೂ ಡಿಸಿಎಂ ಹುದ್ದೆಯನ್ನು ನೀಡಿಲ್ಲ ಹಾಗೂ ಬಿವೈ ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ನೀಡಿಲ್ಲ. ಅನುಭವ ಹಾಗೂ ಹೊಸ ಮುಖಗಳು ಸಂಪುಟದಲ್ಲಿ ಇರಲಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಉತ್ತರ ಕನ್ನಡ ಮತ್ತು ಉತ್ತರ ಕರ್ನಾಟಕ ಪ್ರವಾಸ ಹೋಗಿ ಪ್ರವಾಹ ಪೀಡಿತರಿಗೆ ಸ್ಥಳದಲ್ಲಿಯೇ ಪರಿಹಾರ ಪ್ರಕಟಿಸಿದ್ದೇನೆ ಎಂದರು.

ಇವತ್ತು ಬೆಳಿಗ್ಗೆ ನೂತನ ಸಚಿವರ ಪಟ್ಟಿ ಅಂತಿಮವಾಗಿದ್ದು, ಇಂದು 29 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ಉಪ ಮುಖ್ಯಮಂತ್ರಿ ಹುದ್ದೆ ಇರುವುದಿಲ್ಲ ಎಂದು ಹೈಕಮಾಂಡ್ ತೀರ್ಮಾನಿಸಿದೆ. ರಾಜ್ಯದ ಏಳಿಗೆ, ಪ್ರದೇಶವಾರು, ಜಾತೀಯವಾರು ಸಮಾನತೆ ನೋಡಿಕೊಂಡು ಹಾಗೂ ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಸಚಿವರ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದರು.

ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಬಿ ಎಸ್ ಯಡಿಯೂರಪ್ಪ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಸ್ಥಾನವಿಲ್ಲ. ಅಲ್ಲದೆ ಹಿಂದಿನ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಕೂಡ ಕೈಬಿಡಲಾಗಿದೆ. ಇನ್ನು ಅರವಿಂದ ಲಿಂಬಾವಳಿಯವರನ್ನು ಬಿಟ್ಟು ಆರ್. ಅಶೋಕ್ ಗೆ ಸ್ಥಾನ ನೀಡಲಾಗಿದೆ. ಹೊಸದಾಗಿ ವಿ.ಮುನಿರತ್ನ ಅವರು ಎಂಟ್ರಿಯಾಗಿದ್ದಾರೆ.

ಇನ್ನು, ಕೆಲವು ಹಿರಿಯರನ್ನು ಪಕ್ಷ ಸಂಘಟನೆಗೆ ನಿಯೋಜಿಸಬೇಕೆಂದು ಮಂತ್ರಿ ಸ್ಥಾನ ನೀಡಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಧ್ಯಾಹ್ನ 2.15ಕ್ಕೆ ನೂತನ ಸಚಿವರು ಪದಗ್ರಹಣ ಮಾಡಲಿದ್ದು, ರಾಜಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ತಾವರ್‌ ಚಂದ್‌ ಗೆಹ್ಲೋಟ್‌ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ರಾಜಕೀಯದಲ್ಲಿ ಏಳು-ಬೀಳುಗಳು ಸಹಜ: ನಿರಾಸೆಯ ಮಾತನಾಡಿದ ಸಿಪಿವೈ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು