ಹಾವೇರಿ: ನನ್ನನ್ನು ಸೋಲಿಸಲು ರಾಜ್ಯದ ರಾಜಧಾಣಿ ಮತ್ತು ರಾಷ್ಟ್ರದ ರಾಜಧಾನಿಯಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ. ಆದರೆ, ಈ ಬಗ್ಗೆ ನಾನು ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ಮಾತನಾಡಿದ ಬೊಮ್ಮಾಯಿ ಅವರು, ನಾನು ಶಿಗ್ಗಾಂವಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ನನ್ನನ್ನು ಸೋಲಿಸಲು ಏನೇನೋ ಅಪಪ್ರಚಾರ ಮಾಡಿದ್ದಾರೆ ಎಂದರು.
ಇನ್ನು ಬೆಂಗಳೂರು ದೆಹಲಿಯಲ್ಲಿ ಕುಳಿತು ಪ್ಲಾನ್ ಮಾಡಿದ್ದಾರೆ. ಅವರ ಯಾವುದೇ ಪ್ಲಾನ್ಗಳಿಗೆ ತಲೆ ಕೆಡಿಸಿಕೊಂಡಿಲ್ಲ, ಈ ಬಾರಿಯೂ ಗೆಲ್ಲುತ್ತೇನೆ ಎಂಬ ಭರವಸೆ ಇದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧೆಗೆ ನನಗೆ ಆಹ್ವಾನ ಬರುತ್ತಿದೆ. ಆದರೆ ಪ್ರೀತಿ, ವಿಶ್ವಾಸ, ದುಡಿಮೆ ಇರುವ ಕಡೆ ನನ್ನ ಸ್ಪರ್ಧೆ ಇರುತ್ತದೆ. ಶಿಗ್ಗಾಂವಿ ಕ್ಷೇತ್ರದಲ್ಲೇ ನಾನು ಪರೀಕ್ಷೆಗೆ ಇಳಿಯುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.