NEWSನಮ್ಮಜಿಲ್ಲೆನಮ್ಮರಾಜ್ಯ

ನಾನು ನಿಮ್ಮ ಜತೆಗಿದ್ದೇನೆ, ವೇತನ ತಾರತಮ್ಯ ನಿವಾರಿಸಲಾಗುವುದು: ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಅಭಯ

ವಿಜಯಪಥ ಸಮಗ್ರ ಸುದ್ದಿ

ಬಳ್ಳಾರಿ: ಮುಂದಿನ ದಿನಗಳಲ್ಲಿ ಸಾರಿಗೆ ನೌಕರರ ಪ್ರಮುಖ ಬೇಡಿಕೆಯಾದ ವೇತನ ಸಮಸ್ಯೆ ನಿವಾರಣೆ ಮಾಡುವ ಗುರಿ ಹೊಂದಲಾಗಿದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಅಭಯ ನೀಡಿದ್ದಾರೆ.

ಇಂದು ಬಳ್ಳಾರಿಯಲ್ಲಿ ಆಯೋಜಿಸಿದ್ದ ಸಾರಿಗೆ ನೌಕರರ ಸೌಹಾರ್ದಯುತ ಭೇಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಷ್ಕರದ ವೇಳೆ ಅನೇಕ ನೌಕರರು ವರ್ಗಾವಣೆ, ಅಮಾನತು ಮತ್ತು ವಜಾ ದಂಥ ಶಿಕ್ಷೆಗೆ ಒಳಗಾಗಿದ್ದೀರಿ ಈ ಬಗ್ಗೆ ನನಗೆ ಹಲವಾರು ಮನವಿ ಪತ್ರಗಳು ಬಂದಿದ್ದು, ಅತೀ ಶೀಘ್ರದಲ್ಲೇ ಎಲ್ಲ ನೌಕರರಿಗೂ ಒಳ್ಳೆಯದನ್ನು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಈಗಾಗಲೇ ಚರ್ಚೆ ಮಾಡಲಾಗಿದೆ. ಹೀಗಾಗಿ ಯಾರು ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದರು.

ಇನ್ನು ಇಂದಿನ ದಿನಗಳಲ್ಲಿ ಖಾಸಗಿ ಸಾರಿಗೆಯವರೊಂದಿಗೆ ಸರ್ಕಾರಿ ಸಾರಿಗೆ ಸ್ಪರ್ಧೆ ಮಾಡಲಾರದಷ್ಟು ಆರ್ಥಿಕವಾಗಿ ಹಿಂದುಳಿದಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಾರಿಗೆಯನ್ನು ಲಾಭದತ್ತ ಕೊಂಡೊಯ್ಯುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.

ರಾಜ್ಯಾದ್ಯಂತ ಮುಂದಿನ ದಿನಗಳಲ್ಲಿ ಪ್ರವಾಸ ಮಾಡಿ ಸಾರಿಗೆ ನೌಕರರಾದ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ ಮತ್ತು ಭದ್ರತಾ ಸಿಬ್ಬಂದಿಗಳನ್ನು ಭೇಟಿ ಮಾಡಿ ಆ ನಿಮ್ಮೆಲ್ಲರ ಸಮಸ್ಯೆಯನ್ನು ಆಲಿಸಿ ಸಮಸ್ಯೆಗೆ ಶೀಘ್ರ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಹೆಜ್ಜೆ ಇಡೋಣ ಎಂದು ತಿಳಿಸಿದರು.

ಇನ್ನು ಅಧಿಕಾರಿಗಳು ಕೂಡ ನಿಮ್ಮ ಸಮಸ್ಯೆಯನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಅಲ್ಲದೆ ಕೋರ್ಟ್‌ನಲ್ಲಿ ಇರುವ ಪ್ರಕರಣಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಕೂತು ಮಾತನಾಡಿದ್ದು, ಆ ಪ್ರಕರಣಗಳ ಇತ್ಯರ್ಥ ಪಡಿಸುವ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಂಡು ನಿಮಗೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯಂತಹ ಆಲೋಚನೆ ಬರದ ರೀತಿ ನಡೆಸಿಕೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಇದನ್ನು ಲಾಭದಾಯಕವಾಗಿ ಮಾಡುವ ನಿಟ್ಟಿನಲ್ಲಿ ನಾವು ಮತ್ತು ಅಧಿಕಾರಿಗಳು ಚರ್ಚಿಸುತ್ತೇವೆ. ನಿಮಗೆ ವೇತನದಲ್ಲಿ ಅನ್ಯಾಯವಾಗದ ರೀತಿ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಅದನ್ನು ನಾನು ಮಾಡುತ್ತೇನೆ. ನೀವು ನಿಮ್ಮ ಕೆಲಸವನ್ನು ಮಾಡಿಕೊಂಡು ಹೋಗಿ ಎಂದು ಸಲಹೆ ನೀಡಿದರು.

ಮುಂದಿನ ದಿನಗಳಲ್ಲಿ ಸಂಸ್ಥೆಗೆ ಒಳ್ಳೆಯದಾಗುವ ನಿಟ್ಟಿನಲ್ಲಿ ನಾವು ನೀವೆಲ್ಲರೂ ನಡೆದುಕೊಳ್ಳೋಣ. ಮುಂದೆ ನಿಮಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ. ಎಲ್ಲರಿಗೂ ಒಳ್ಳೇದಾಗಲಿದೆ ಎಂದು ತಿಳಿಸಿದರು.

ಇನ್ನು ಕೇಂದ್ರ ಸರ್ಕಾರದಿಂದ ಸಾರಿಗೆ ಸಂಸ್ಥೆಗೆ ಬರಬೇಕಿರುವ ಅನುದಾನದ ಬಗ್ಗೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚಿಸಿ ಅನುದಾನ ತರಲಾಗುವುದು. ಹೀಗಾಗಿ ನೀವು ಯಾವುದೇ ಗೊಂದಲಕ್ಕೆ ಒಳಗಾಗದೇ ನಿಮ್ಮ ಕರ್ತವ್ಯವನ್ನು ಮಾಡಿಕೊಂಡು ಹೋಗಿ ಎಂದು ಹೇಳಿದರು.

ನಾಲ್ಕೂ ಸಾರಿಗೆ ಸಂಸ್ಥೆ ನೌಕರರ ಅರಿವಿಗೆ: ತನಿಖಾಧಿಖಾರಿಗಳು ಎಲ್ಲೆಂದರಲ್ಲಿ ತನಿಖೆ ಮಾಡುವ ಹಾಗಿಲ್ಲ- ಅವರಿಗೂ ನಿಯಮ ಪಾಲನೆ ಕಡ್ಡಾಯ

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು