NEWSಕೃಷಿನಮ್ಮಜಿಲ್ಲೆ

ನಾಳೆ ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆಗೆ ಸಿಎಂ ಬೊಮ್ಮಾಯಿ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ನಡೆಯುವ ಐತಿಹಾಸಿಕ ಬಸವನಗುಡಿ ಕಡಿಲೆಕಾಯಿ ಪರಿಷೆಗೆ ನಾಳೆ ( 20-11-22 ರಂದು) ಸಂಜೆ 6 ಗಂಟೆಗೆ ಮುಖ್ಯಮಂತ್ರಿಗಳು ತುಲಾಭಾರ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಿದ್ದಾರೆ.

ಈ ಸಂಬಂಧ ಇಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯ್ ಪುರ ದೊಡ್ಡ ಗಣಪತಿ ದೇವಸ್ಥಾನದ ಹಾಗೂ ಸುತ್ತಮುತ್ತಲಿನ ಪ್ರದೇಶಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರ ಧರಣೇಂದ್ರ ಕುಮಾರ್, ಕಡಿಲೆಕಾಯಿ ಪರಿಷೆಯ ವ್ಯವಸ್ಥಾಪಕ ಸಮಿತಿಯ ಪದಾಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಪೂರ್ವಭಾವಿ ಸಿದ್ಧತೆಗಳು: ಪೆಂಡಾಲ್ ಹಾಗೂ ಆಸನಗಳ ವ್ಯವಸ್ಥೆ, ಗಣ್ಯ ವ್ಯಕ್ತಿಗಳಿಗೆ/ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರಿಗೆ ವಾಹನಗಳ ಪಾರ್ಕಿಂಗ್ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಎ.ಪಿ.ಎಸ್ ಕಾಲೇಜ್ ಆಟದ ಮೈದಾನ ಮತ್ತು ಕೊಹಿನೂರು ಆಟದ ಮೈದಾನ ಆಶ್ರಮ ವೃತ್ತದಲ್ಲಿ ಕಲ್ಪಿಸಲಾಗಿದೆ.

ಭಕ್ತಾದಿಗಳಿಗೆ ದೇವರ ದರ್ಶನವನ್ನು ಪಡೆಯಲು ಹಲವು ಕಡೆ ಎಲ್.ಇ.ಡಿ ವೀಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಮುನ್ನೆಚರಿಕೆ ಕ್ರಮವಾಗಿ ಅಹಿತಕರ ಚಟುವಟಿಕೆಗಳನ್ನು ನಿಯಂತ್ರಿಸಲು ಹಲವು ಕಡೆ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಭಕ್ತಾದಿಗಳಿಗೆ ಮಾರ್ಗದರ್ಶನ ನೀಡಲು ಹೋಂ ಗಾರ್ಡ್ಸ್, ಪೊಲೀಸ್ ಇಲಾಖೆ ಹಾಗೂ ಧ್ವನಿವರ್ಧಕಗಳನ್ನು ಬಳಸಿಕೊಳ್ಳಲಾಗುವುದು. ತುರ್ತು ಸಂದರ್ಭದಲ್ಲಿ ಮಕ್ಕಳು, ವೃದ್ಧರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ವ್ಯಾಪಾರಸ್ಥರಿಗೆ ಸುಮಾರು 2 ಸಾವಿರ ತಾತ್ಕಾಲಿಕ ಅಂಗಡಿಗಳನ್ನು ತೆರೆಯಲು ಫುಟ್‌ಪಾತ್ ಬದಿಯಲ್ಲಿ ಟ್ರಾಫಿಕ್ ಸಮಸ್ಯೆ ಆಗದಂತೆ ಅನುಕೂಲ ಕಲ್ಪಿಸಲಾಗಿದೆ. ಸುಮಾರು 01 ಕಿ.ಮೀ ಸರಹದ್ದು ವ್ಯಾಪ್ತಿಯಲ್ಲಿ ವಿದ್ಯುತ್ ಅಲಂಕಾರಿಕ ದೀಪಗಳನ್ನು ಅಳವಡಿಸಲಾಗಿದೆ.

ಮುನ್ನೆಚರಿಕೆ ಸಲುವಾಗಿ ಅಗ್ನಿಶಾಮಕ ವಾಹನ/ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ವಿದ್ಯುತ್ ಸರಬರಾಜು ಸಮರ್ಪಕವಾಗಿ ನಿರ್ವಹಿಸಲು ಬೆಸ್ಕಾಂ ಇಲಾಖೆಯಿಂದ ವ್ಯವಸ್ಥೆ ಮಾಡಲಾಗಿರುತ್ತದೆ.

ಕಾನೂನು ಸುವ್ಯವಸ್ಥೆ ಕಾಪಾಡಲು 500 ರಿಂದ 600 ಪೊಲೀಸ್ ಸಿಬ್ಬಂದಿಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಹಲವು ಸ್ಥಳಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮಗಳು: ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ನಾಳೆ (20-11-2022) ಸಂಜೆ 6 ರಿಂದ 7.30 ರವರೆಗೆ ಶ್ರೀಧರ್ ಸಾಗರ ಅವರಿಂದ ಸ್ಯಾಕ್ಸೋಫೋನ್ ಕಾರ್ಯಕ್ರಮ ನಡೆಯಲಿದೆ. ನ. 21 ರಂದು ಸಂಜೆ 6 ರಿಂದ 7.30ರವರೆಗೆ ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ರಂಗಲಕ್ಷ್ಮೀ ಶ್ರೀನಿವಾಸ್ ಅವರಿಂದ ಬೀದಿ ನಾಟಕ ನಡೆಯಲಿದೆ. ಅಲ್ಲದೆ ನರಸಿಂಹಸ್ವಾಮಿ ಉದ್ಯಾನವನದಲ್ಲಿ ಸಂಜೆ 6 ರಿಂದ 7.30ರ ವರೆಗೆ ವೀಣಾ ಮುರಳಿಧರ್ ಅವರ ತಂಡದಿಂದ ಭರತನಾಟ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ನ.22ರಂದು ಬ್ಯೂಗಲ್ ರಾಕ್ ಉದ್ಯಾನವನದಲ್ಲಿ ಸಂಜೆ 6 ರಿಂದ 7.30ರ ವರೆಗೆ ವಿಜಯ ವಿಠ್ಠಲ ಶಾಲೆಯ ವತಿಯಿಂದ ವೈವಿಧ್ಯಮಯ ಸಾಂಸ್ಕೃತಿಕ ಸಂಜೆ ಹಾಗೂ ಸಂಜೆ 7.30 ರಿಂದ 9ರ ವರೆಗೆ ಸೀತಾರಾಮ ಮುನಿಕೋಟಿ ಅವರಿಂದ ಹರಿಕಥೆ ನಡೆಲಿದೆ. ಅಲ್ಲದೆ ನರಸಿಂಹಸ್ವಾಮಿ ಉದ್ಯಾನವನದಲ್ಲಿ ಸಂಜೆ 6 ರಿಂದ 7.30ರ ವರೆಗೆ ಗಾಯತ್ರಿ ಶ್ರೀಧರ್ ಅವರಿಂದ ಸುಗಮ ಸಂಗೀತ ಹಾಗೂ ಸಂಜೆ 7.30 ರಿಂದ 9ರ ವರೆಗೆ ಸಿರಿಕಲಾ ಮೇಳ(ರಿ) ತಂಡದಿಂದ ಯಕ್ಷಗಾನ ಕಾರ್ಯಕ್ರಮ ನಡೆಯಲಿದೆ.

ಐತಿಹಾಸಿಕ ಕಡಲೇಕಾಯಿ ಪರಿಷೆಯ ಹಿನ್ನೆಲೆ: 1537 ಮಾಗಡಿ ಕೆಂಪೇಗೌಡರು ನಿರ್ಮಾಣ ಮಾಡಿದ್ದು ಈ ಗ್ರಾಮಕ್ಕೆ ಸುಂಕೇನಹಳ್ಳಿ ಗ್ರಾಮ ಎಂದು ಹೆಸರಿಟ್ಟು ಇಲ್ಲಿನ ರೈತರು ಕಡಲೆಕಾಯಿ ಬೆಳೆಯುತ್ತಿದ್ದರು ಹಾಗೂ ಬಸವ ಕಡಲೆಕಾಯಿ ತಿನ್ನುತ್ತಿದ್ದ ಎಂದು ರೈತರು ಪ್ರಾರ್ಥನೆ ಮಾಡಿ ಮೊದಲ ಫಸಲನ್ನು ದೇವರಿಗೆ ನೀಡುತ್ತಿದ್ದರು. ಬಸವಣ್ಣನ ಎತ್ತರ 12 ಅಡಿ ಉದ್ದ 20 ಅಡಿ, ಆದರೆ ಈಗಲೂ ಬಸವಣ್ಣ ಬೆಳೆಯುತ್ತಿದ್ದಾನೆ ಎಂದು ಅನೇಕರು ನಂಬಿಕೆಯಾಗಿದೆ. ಬಸವಣ್ಣ ಕೆಳಗಡೆ ವೃಷಾಭವತಿ ನದಿ ಉದ್ಭವಿಸುತ್ತದೆ ಎಂದು ಅನೇಕರ ನಂಬಿಕೆಯಾಗಿದೆ.

ಕಡಲೇಕಾಯಿ ಪರಿಷೆ ನಿಮಿತ್ತ ಜನರಿಗೆ ಅರಿವು ಮೂಡಿಸಲು ಪಾಲಿಕೆ ವತಿಯಿಂದ ವಿವಿಧ ಭಂಗಿಯ ಕಡಲೇಕಾಯಿ ಪರಿಷೆಯ ಪಾರಂಪರಿಕ ಆಕೃತಿಗಳನ್ನು ನಿರ್ಮಿಸಲಾಗಿದೆ ಹಾಗೂ ಬ್ಯೂಗಲ್‌ರಾಕ್ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗಿದೆ.

ಬೆಂಗಳೂರು ಪಾರಂಪರಿಕ ಕಡಲೆಕಾಯಿ ಪರಿಷೆ ಸುಮಾರು 500 ವರ್ಷಗಳ ಇತಿಹಾಸವಿದ್ದು, ಇದನ್ನು ನೋಡಲು ಬೆಂಗಳೂರು ನಗರ, ಗ್ರಾಮೀಣ ಹಾಗೂ ಇತರೇ ರಾಜ್ಯಗಳಿಂದ ಜಾತ್ರೆಗೆ 3 ರಿಂದ 4 ಲಕ್ಷ ಜನ ಸೇರುವ ನಿರೀಕ್ಷೆ ಇದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ