ಹಾವೇರಿ: ವಿಧಾನಸಭಾ ಚುನಾವಣೆಗೆ ಗುರುವಾರದಿಂದ (ಏ.13) ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಮೊದಲ ದಿನ 221 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
![](http://vijayapatha.news/wp-content/uploads/2022/08/23-Aug-cm-bsb-300x173.jpg)
ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾಂವಿ ಕ್ಷೇತ್ರ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೆ ನಾಳೆ ಇಡೀ ದಿನ ಕ್ಷೇತ್ರದಲ್ಲೇ ಇದ್ದು ಗೆಲ್ಲುವ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಎಂ ಬೊಮ್ಮಾಯಿ ಶಿಗ್ಗಾಂವಿ ಕ್ಷೇತ್ರದ ತಮ್ಮ ಪಕ್ಷದ ಎಲ್ಲ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಮಾಡಬೇಕಾದ ತಂತ್ರಗಳ ಕುರಿತು ಚರ್ಚಿಸಲಿದ್ದಾರೆ.
![](https://vijayapatha.in/wp-content/uploads/2024/02/QR-Code-VP-1-1-300x62.png)