NEWSನಮ್ಮಜಿಲ್ಲೆನಮ್ಮರಾಜ್ಯ

ನಿವೃತ್ತರ ತಾಳ್ಮೆ ಪರೀಕ್ಷಿಸುವ ಕಾಲ ಮುಗಿದಿದೆ: ಬಿಎಂಟಿಸಿ-ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ನಂಜುಂಡೇಗೌಡ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇದೇ ಡಿ.7ರಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ಜರುಗುವ ನಿವೃತ್ತರ ಹೋರಾಟ ಮತ್ತು ಡಿ.8ರಿಂದ ಜಂತರ್‌ ಮಂತರ್‌ನಲ್ಲಿ ಹಮ್ಮಿಕೊಂಡಿರುವ ಸರತಿ ಉಪಾಸ ಸತ್ಯಾಗ್ರಹಕ್ಕೆ ಕಂಡು ಕೇಳರಿಯದಷ್ಟು ದೇಶಾದ್ಯಂತ ಇರುವ ನಿವೃತ್ತರು ಆಗಮಿಸಿಲಿದ್ದದ್ದಾರೆ ಎಂದು ಬಿಎಂಟಿಸಿ ಹಾಗೂ ಕೆಎಸ್ಆರ್ ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.

ಭಾನುವಾರ ಲಾಲ್‌ಬಾಗ್ ಆವರಣದಲ್ಲಿ ಜರುಗಿದ ಇಪಿಎಸ್ ಪಿಂಚಣಿದಾರರ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಅಂದು ರಾಷ್ಟ್ರೀಯ ಸಂಘರ್ಷ ಸಮಿತಿ ಅಧ್ಯಕ್ಷ ಕಮಾಂಡರ್ ಅಶೋಕ್ ರಾವುತ್ ಅವರ ನೇತೃತ್ವದಲ್ಲಿ ಕೈಗೊಳ್ಳುವ ನಿರ್ಣಯ ನಿವೃತ್ತರ ಪಾಲಿಗೆ ಇತಿಹಾಸ ಪುಟ ಸೇರಲಿದೆ ಎಂದು ನಿವೃತ್ತರಲ್ಲಿ ಉತ್ಸಾಹ ತುಂಬಿದರು.

ಡಿಸೆಂಬರ್ 7 ನಿವೃತ್ತರ ಪಾಲಿಗೆ ನಿರ್ಣಾಯಕ ದಿನವಾಗಿದ್ದು, ದೆಹಲಿಯ ರಾಮಲೀಲಾ ಮೈದಾನದಲ್ಲಿ ಕಂಡು ಕೇಳರಿಯದಷ್ಟು, ದೇಶಾದ್ಯಂತ ಇರುವ ನಿವೃತ್ತರು ಆಗಮಿಸಿಲಿದ್ದು, ನಿವೃತ್ತರ ತಾಳ್ಮೆ ಪರೀಕ್ಷಿಸುವ ಕಾಲ ಮುಗಿದುಹೋಗಿದೆ. ಅಂದು ನಿವೃತ್ತರ ಬೇಡಿಕೆಗಳು ಈಡೇರದೆ ಹೋದಲ್ಲಿ, ಸರ್ಕಾರದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾಲವೇ ನಿರ್ಧರಿಸಲಿದೆ ಎಂಬ ಸಂದೇಶವನ್ನು ನೀಡಲಿದ್ದೇವೆ ಎಂದು ಎಚ್ಚರಿಸಿದರು.

ಸಂಘದ ಉಪಾಧ್ಯಕ್ಷ ಆರ್. ಸುಬ್ಬಣ್ಣ ಮಾತನಾಡಿ, ಚಳಿಗಾಲ ಪ್ರಾರಂಭವಾಗಿರುವುದರಿಂದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಸದಸ್ಯರು ಮುಂಜಾಗ್ರತಾ ಕ್ರಮ ಕೈಗೊಂಡು ಸುಸ್ಥಿರ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.

ಇನ್ನು ದೆಹಲಿಯ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸುತ್ತಿರುವ 29 ಸದಸ್ಯರ ಹೆಸರುಗಳನ್ನು ಪ್ರಸ್ತಾಪಿಸಿ, ಇವರೆಲ್ಲರೂ ಪಿಂಚಣಿಹೋರಾಟದ ಯೋಧರಾಗಿದ್ದು, ವಾಟ್ಸಪ್ ಗ್ರೂಪ್‌ನಲ್ಲಿ ಬೇಡದ ವಿಷಯಗಳ ಬದಲು, ದಿನಂಪ್ರತಿ ಈ ಹೋರಾಟಗಾರರಿಗೆ ಶುಭ ಹಾರೈಸಿ ಎಂದು ಸದಸ್ಯರಿಗೆ ಮನವಿ ಮಾಡಿದರು.

ಅಂತಿಮವಾಗಿ ಪ್ರಶ್ನೋತ್ತರ ಕಾರ್ಯಕ್ರಮ ನಡೆದು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಲಾಯಿತು. ಸಭೆಯ ನಿರ್ವಹಣೆಯನ್ನು ಪದಾಧಿಕಾರಿಗಳಾದ ಆರ್.ಮನೋಹರ್ ಹಾಗೂ ರುಕ್ಮಿಶ್ ಶಸ್ವಿಯಾಗಿ ನಡೆಸಿಕೊಟ್ಟರು. ಸಭೆಯ ಇಂದಿನ ನಡವಳಿ ಬಗ್ಗೆ ಸದಸ್ಯರು ಹರ್ಷ ವ್ಯಕ್ತಪಡಿಸಿರುತ್ತಾರೆ.

ಸಭೆ ಆರಂಭಕ್ಕೂ ಮುನ್ನ ಚುಮುಚುಮು ಚಳಿ, ಮೋಡ ಕವಿದ ವಾತಾವರಣದಲ್ಲಿ, ಹಿರಿಯ ಚೇತನಗಳು ಲಾಲ್‌ಬಾಗ್ ಉದ್ಯಾನವನದಲ್ಲಿ ವಾಯು ವಿಹಾರ ನಡೆಸಿ ಅದರ ಸೊಬಗು ಸವಿದರು. ಅವರ ಮನಸ್ಸಿನ ದುಗುಡ ದುಮ್ಮಾನಗಳನ್ನು ತತ್ಕಾಲ ಬದಿಗಿಟ್ಟು, ತನ್ನ ಹಳೆಯ ಸ್ನೇಹಿತರನ್ನು ಕಂಡ ಕ್ಷಣ ಆದಮ್ಯ ಚೇತನ ಹುಕ್ಕಿ ಬಂದಿದ್ದು, ಖುಷಿ ಖುಷಿಯಿಂದಲೇ ತಮ್ಮತಮ್ಮ ಆತ್ಮೀಯರ ಕುಷಲೋಪ ವಿನಿಮಯ ಮಾಡಿಕೊಂಡರು. ಆ ಸುಂದರ ಹೂತೋಟದಲ್ಲಿ ಸಮಯ ಕಳೆದಿದ್ದೆ ಗೊತ್ತಾಗಲಿಲ್ಲ ಎಂದು ತಮ್ಮ ಮನದಾಳವನ್ನು ವಿಜಯಪಥದೊಂದಿಗೆ ಹಂಚಿಕೊಂಡರು.

ಈ ಮಾಸಿಕ ಸಭೆಗೆ ಅಧಿಕ ಸಂಖ್ಯೆಯಲ್ಲಿ ನಿವೃತ್ತರು ಆಗಮಿಸಿದ್ದು, ಸಭೆ ಪ್ರಾರಂಭಕ್ಕೂ ಮುನ್ನ, ಅಗಲಿದ ಮಿತ್ರರಾದ ಶ್ರೀನಿವಾಸ ಶೆಟ್ಟಿ ಹಾಗೂ ಚಂದ್ರಪ್ಪ ಅವರ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಡೋಲಪ್ಪ ಸ್ವಾಗತಿಸಿ, ಪ್ರಸ್ತಾವಿಕ ಭಾಷಣ ಮಾಡಿದರು. ಇನ್ನು ದೆಹಲಿಯ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿರುವ ಸದಸ್ಯರಿಗೆ ಎಲ್ಲರೂ ಶುಭಾಶಯ ಕೋರಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು